World Poetry Day 2024: ಬರೆಯುವ ತುಡಿತವಿರುವ ಎಷ್ಟೋ ಮನಸ್ಸುಗಳಿಗೆ ಸ್ಫೂರ್ತಿಯಾಗಲಿ ಈ ದಿನ

ರವಿ ಕಾಣದ್ದನ್ನು ಕವಿ ಕಂಡ ಎನ್ನುವ ಮಾತಿನಂತೆ ಕವಿಗಳ ಕಲ್ಪನೆಯೇ ವಿಭಿನ್ನ. ಭಾವನೆಗಳು ಹಾಗೂ ಕಲ್ಪನೆಗಳೆಲ್ಲವನ್ನು ಅಕ್ಷರ ರೂಪಕ್ಕೆ ಇಳಿಸುವುದು ಈ ಕವಿತೆಯಿಂದ. ಹೀಗಾಗಿ ಕವಿತೆಯೂ ಹೃದಯಕ್ಕೆ ಹತ್ತಿರವಾಗುತ್ತದೆ. ಹಲವು ಪುಟಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಾಗದ್ದನ್ನು ಒಂದೇ ಒಂದು ಸಾಲಿನ ಈ ಕವಿತೆಯಲ್ಲಿ ವ್ಯಕ್ತಪಡಿಸಲಾಗುತ್ತದೆ. ಮಾತಿನ ಏರಿಳಿತವನ್ನು ಕ್ಷಣಮಾತ್ರದಲ್ಲಿ ಮಧುರವಾಗಿ ತೋರಿಸುವ ಈ ಕವಿತೆ ಜಗತ್ತಿನ ರಹಸ್ಯಗಳನ್ನೆಲ್ಲ ಕೆಲವೇ ಸಾಲುಗಳಲ್ಲಿ ಹಿಡಿದಿಟ್ಟುಕೊಂಡಿದೆ. ಈ ಕವಿತೆಯೂ ಮಾನವನ ಜೀವನದೊಂದಿಗೆ ಬೆಸೆದು ಕೊಂಡಿದೆ. ಪ್ರತಿ ವರ್ಷ ಮಾರ್ಚ್ 21 ಅನ್ನು ವಿಶ್ವದಾದ್ಯಂತ ವಿಶ್ವ ಕಾವ್ಯ ದಿನವನ್ನಾಗಿ ಆಚರಿಸಲಾಗುತ್ತದೆ. ಹಾಗಾದ್ರೆ ವಿಶ್ವ ಕಾವ್ಯ ದಿನದ ಇತಿಹಾಸ ಹಾಗೂ ಮಹತ್ವವೇನು ಎನ್ನುವುದರ ಕುತೂಹಲಕಾರಿ ಮಾಹಿತಿ ಇಲ್ಲಿದೆ.

World Poetry Day 2024: ಬರೆಯುವ ತುಡಿತವಿರುವ ಎಷ್ಟೋ ಮನಸ್ಸುಗಳಿಗೆ ಸ್ಫೂರ್ತಿಯಾಗಲಿ ಈ ದಿನ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 20, 2024 | 12:52 PM

ಕೆಲವರು ಬಿಡುವು ಸಿಕ್ಕಾಗಲೆಲ್ಲಾ ಪೆನ್ನು ಪುಸ್ತಕ ಹಿಡಿದು ತನ್ನಷ್ಟಕ್ಕೆ ಏನನ್ನೋ ಗೀಚುವುದನ್ನು ನೋಡಿರಬಹುದು. ಅಂತಹವರನ್ನು ನೋಡಿದಾಗ ಇದೇನಪ್ಪಾ ಒಬ್ಬರೇ ಇಷ್ಟೊಂದು ಗಾಢವಾದ ಆಲೋಚನೆಯಲ್ಲಿ ಮುಳುಗಿದ್ದಾರೆ ಎಂದೇನಿಸಬಹುದು. ಮನಸ್ಸಿನ ಭಾವನೆಯನ್ನು ಅಕ್ಷರ ರೂಪಕ್ಕೆ ಇಳಿಸುವುದು ಎಲ್ಲರಿಗೂ ಸಾಧ್ಯವಾಗುವುದಿಲ್ ಕವಿಯ ಮನಸ್ಸು ನಿಮ್ಮದಾಗಿದ್ದರೆ ಸಾಮಾನ್ಯ ಎನಿಸುವ ವಸ್ತುಗಳ ಮೇಲು ಕವಿತೆಯೊಂದು ಹುಟ್ಟಬಹುದು. ಕವನಗಳ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಮಾರ್ಚ್ 21 ರಂದು ವಿಶ್ವ ಕಾವ್ಯ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಕಾವ್ಯ ದಿನದ ಇತಿಹಾಸ:

ಬರೆಯುವ ತುಡಿತವಿರುವ ಮನಸ್ಸುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 1999 ರಲ್ಲಿ ವಿಶ್ವಸಂಸ್ಥೆಯ ಸದಸ್ಯರು ಈ ದಿನವನ್ನು ಆಚರಿಸಲು ಮುಂದಾದರು. ಹೀಗಾಗಿ ಮೊದಲ ಬಾರಿಗೆ ಅಂದರೆ ಅಕ್ಟೋಬರ್ ತಿಂಗಳಲ್ಲಿ ಪ್ಯಾರಿಸ್ ನಲ್ಲಿ ವಿಶ್ವ ಕಾವ್ಯ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷವು ವಿಶ್ವ ಕಾವ್ಯ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿವೆ.

ಇದನ್ನೂ ಓದಿ: ಸ್ವಾರ್ಥವನ್ನು ಬಿಟ್ಟು ಸಂಪತ್ತು ಭರಿತವಾದ ಅರಣ್ಯ ಉಳಿಸಿ

ವಿಶ್ವ ಕಾವ್ಯ ದಿನದ ಮಹತ್ವ:

ವಿಶ್ವ ಕಾವ್ಯ ದಿನವನ್ನು ಆಚರಿಸುವುದರ ಮುಖ್ಯ ಉದ್ದೇಶವೇನೆಂದರೆ ಜನರಿಗೆ ಕವಿತೆಗಳ ಮಹತ್ವವನ್ನು ತಿಳಿಸುವುದು. ಕವಿಗಳನ್ನು ಗೌರವಿಸುವುದು ಹಾಗೂ ಕವನ ವಾಚನದ ಮೌಖಿಕ ಸಂಪ್ರದಾಯಗಳನ್ನು ಪುನರುಜ್ಜೀವನಗೊಳಿಸುವುದಾಗಿದೆ. ಭಾವನೆಗಳನ್ನು ಅಕ್ಷರ ರೂಪಕ್ಕೆ ಇಳಿಸುವ ಆಸಕ್ತಿಯುಳ್ಳವವರನ್ನು ಪ್ರೋತ್ಸಾಹಿಸುವುದು. ಇಂದಿನ ಯುವಜನರಿಗೆ ಈ ದಿನದ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಈ ಎಲ್ಲಾ ಉದ್ದೇಶದಿಂದ ಪ್ರತಿ ವರ್ಷ ವಿಶ್ವ ಕಾವ್ಯ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಶಾಲಾ ಕಾಲೇಜುಗಳು, ರಾಷ್ಟ್ರೀಯ ಆಯೋಗಗಳು, ಎನ್‌ಜಿಒಗಳು, ಕಾವ್ಯ ಸಮುದಾಯಗಳು, ಸಾಂಸ್ಕೃತಿಕ ಗುಂಪುಗಳು ಹೀಗೆ ಹತ್ತು ಹಲವು ಸಂಸ್ಥೆಗಳು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್