World Population Day 2024 : ದೇಶದ ಅಭಿವೃದ್ಧಿಗೆ ಹೊರೆಯಾಗದಿರಲಿ ಜನ ಸಂಖ್ಯೆ ಹೆಚ್ಚಳ

| Updated By: ಅಕ್ಷತಾ ವರ್ಕಾಡಿ

Updated on: Jul 10, 2024 | 6:52 PM

ಜಾಗತಿಕ ಮಟ್ಟದಲ್ಲಿ ಪ್ರತಿ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ. ಈ ಜನಸಂಖ್ಯಾ ಹೆಚ್ಚಳದಿಂದಾಗಿ ಉಂಟಾಗುತ್ತಿರುವ ಜಾಗತಿಕ ಹಾಗೂ ಆರ್ಥಿಕ ಸಮಸ್ಯೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಈ ದಿನವು ಹೊಂದಿದೆ. ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

World Population Day 2024 : ದೇಶದ ಅಭಿವೃದ್ಧಿಗೆ ಹೊರೆಯಾಗದಿರಲಿ ಜನ ಸಂಖ್ಯೆ ಹೆಚ್ಚಳ
World Population Day 2024
Follow us on

ಒಂದು ದೇಶವು ಪ್ರಗತಿಯಾಗಬೇಕಾದರೆ ಅದಕ್ಕೆ ಮಾನವ ಸಂಪನ್ಮೂಲವು ಅತ್ಯಗತ್ಯ. ಆದರೆ ದೇಶವು ಅಭಿವೃದ್ಧಿಯಾಗುವ ಬದಲು ಜನಸಂಖ್ಯೆಯೇ ಹೆಚ್ಚಾದರೆ ಗಂಭೀರ ಸಮಸ್ಯೆಗಳು ಎದುರಾಗುತ್ತದೆ. ಪ್ರಸ್ತುತ ದಿನಗಳಲ್ಲಿ ಜಾಗತಿಕ ಜನಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಈ ಜನಸಂಖ್ಯೆ ಹೆಚ್ಚಳವು ಮನುಕುಲಕ್ಕೆ ಗಂಭೀರ ಸಮಸ್ಯೆಯಾಗಿ ಪರಿಣಮಿಸುವುದು ಮಾತ್ರ ಖಂಡಿತ. ಜನಸಂಖ್ಯಾ ಹೆಚ್ಚಳದಿಂದ ಪರಿಹರಿಸಲಾಗದ ಹಲವಾರು ತೊಂದರೆಗಳು ಇಡೀ ವಿಶ್ವಕ್ಕೆ ಎದುರಾಗುತ್ತದೆ. ಹೀಗಾಗಿ ಎಲ್ಲ ದೇಶಗಳು ಈ ಬಗ್ಗೆ ಎಚ್ಚೆತ್ತುಕೊಂಡು ತಮ್ಮ ಜನಸಂಖ್ಯೆಯನ್ನು ನಿಯಂತ್ರಿಸಲು ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ. ಹೀಗೆ ಜನಸಂಖ್ಯೆ ಏರಿಕೆಯಾಗುತ್ತ ಹೋದರೆ ಜನಸಂಖ್ಯೆಯನ್ನು ನಿಯಂತ್ರಿಸುವುದು ಕಷ್ಟವಾಗುವುದಂತೂ ಖಂಡಿತ. ಈ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತಿದೆ.

ವಿಶ್ವ ಜನಸಂಖ್ಯಾ ದಿನದ ಇತಿಹಾಸ:

1987 ರ ಜುಲೈ 11 ರಂದು ವಿಶ್ವ ಜನಸಂಖ್ಯೆಯು 500 ಕೋಟಿ ಮೀರಿತ್ತು. ಹೀಗಾಗಿ ವಿಶ್ವಸಂಸ್ಥೆಯು ತನ್ನ ಅಂಗ ಸಂಸ್ಥೆಯಾದ ‘ವಿಶ್ವಸಂಸ್ಥೆ ಅಭಿವೃದ್ಧಿ ಕಾರ‍್ಯಕ್ರಮ (ಯುಎನ್‌ಡಿಪಿ ) ಮಂಡಳಿ’ಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಉಂಟಾಗಬಹುದಾದ ತೊಂದರೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲು ಮುಂದಾಯಿತು. 1989 ಜುಲೈ 11ರಂದು ಮೊದಲ ಬಾರಿಗೆ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಿತು. ಅಂದಿನಿಂದ ಪ್ರತಿ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ ನೋಡಿ

ವಿಶ್ವ ಜನಸಂಖ್ಯಾ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ವಿಶ್ವ ಜನಸಂಖ್ಯಾ ದಿನದ ಉದ್ದೇಶವು ಬಡತನ, ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಲಿಂಗ ಸಮಾನತೆಯಂತಹ ಜನಸಂಖ್ಯೆಯ ಬೆಳವಣಿಗೆಗೆ ಸಂಬಂಧಿಸಿದಂತೆ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವು ಮಹತ್ವಕಾರಿಯಾಗಿದೆ. ಈ ದಿನದಂದು ಸರ್ಕಾರ, ಸಂಘ ಸಂಸ್ಥೆಗಳು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ. ಈ ದಿನದಂದು ಕುಟುಂಬ ಯೋಜನೆ, ಲಿಂಗ ಸಮಾನತೆ, ಬಡತನ, ತಾಯಿ ಮಗುವಿನ ಆರೋಗ್ಯ ಮತ್ತು ಗರ್ಭನಿರೋಧಕ ಔಷಧಿಗಳನ್ನು ಬಳಸುವುದು ಹೇಗೆ ಈ ಎಲ್ಲಾ ವಿಚಾರದ ಬಗ್ಗೆ ಚರ್ಚಾ ಕಾರ್ಯಕ್ರಮ, ವಿಚಾರ ಸಂಕಿರಣ ಹಾಗೂ ಅಭಿಯಾನಗಳಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Wed, 10 July 24