AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Population Day 2026: ವಿಶ್ವ ಜನಸಂಖ್ಯಾ ದಿನದ ಆಚರಣೆಯ ಇತಿಹಾಸ, ಮಹತ್ವ ತಿಳಿಯಿರಿ

ಪ್ರಸ್ತುತ ದಿನಗಳಲ್ಲಿ ಜಾಗತಿಕ ಜನಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಂಖ್ಯೆ ಹೆಚ್ಚಾದರೆ ಗಂಭೀರ ಸಮಸ್ಯೆಗಳು ಎದುರಾಗುತ್ತದೆ. ದೇಶವು ಅಭಿವೃದ್ಧಿ ಹೊಂದಲು ಆಸಾಧ್ಯ. ಹೀಗಾಗಿ ಜನಸಂಖ್ಯೆಯಿಂದ ಆಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

World Population Day 2026: ವಿಶ್ವ ಜನಸಂಖ್ಯಾ ದಿನದ ಆಚರಣೆಯ ಇತಿಹಾಸ, ಮಹತ್ವ ತಿಳಿಯಿರಿ
ವಿಶ್ವ ಜನಸಂಖ್ಯಾ ದಿನImage Credit source: Pinterest
ಸಾಯಿನಂದಾ
|

Updated on: Jul 11, 2026 | 8:52 AM

Share

ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಆರ್ಥಿಕ ಬೆಳವಣಿಗೆ, ದೇಶದ ಪ್ರಗತಿ, ವಸತಿ, ಆರೋಗ್ಯ, ಮೂಲ ಸೌಕರ್ಯ , ಪರಿಸರ, ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತದೆ. ಈ ಸವಾಲುಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು (World Population Day) ಆಚರಿಸಲಾಗುತ್ತಿದೆ. ಹಾಗಾದ್ರೆ ಈ ದಿನದ ಆಚರಣೆ ಶುರುವಾದದ್ದು ಯಾವಾಗ? ಇನ್ನಿತರ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ವಿಶ್ವ ಜನಸಂಖ್ಯಾ ದಿನದ ಇತಿಹಾಸವೇನು?

1987 ರ ಜುಲೈ 11 ರಂದು ವಿಶ್ವ ಜನಸಂಖ್ಯೆಯು 500 ಕೋಟಿ ದಾಟಿತ್ತು. ಈ ಹಿನ್ನಲೆಯಲ್ಲಿ ವಿಶ್ವಸಂಸ್ಥೆಯು ತನ್ನ ಅಂಗ ಸಂಸ್ಥೆಯಾದ ವಿಶ್ವಸಂಸ್ಥೆ ಅಭಿವೃದ್ಧಿ ಕಾರ‍್ಯಕ್ರಮ ಮಂಡಳಿಯು ಜನಸಂಖ್ಯೆ ಹೆಚ್ಚಳದಿಂದ ಆಗುವ ತೊಂದರೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸುವ ನಿರ್ಧಾರಕ್ಕೆ ಬಂದಿತು. 1989 ಜುಲೈ 11ರಂದು ಮೊದಲ ಬಾರಿಗೆ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಿತು. ಅಂದಿನಿಂದ ವಿಶ್ವ ಜನಸಂಖ್ಯಾ ದಿನದ ಆಚರಣೆ ಜಾರಿಗೆ ಬಂದಿತು.

ಇದನ್ನೂ ಓದಿ: ನವೀಕರಿಸಬಹುದಾದ ಇಂಧನಗಳನ್ನು ಹೆಚ್ಚು ಬಳಸುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡೋಣ

ವಿಶ್ವ ಜನಸಂಖ್ಯಾ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ಜನಸಂಖ್ಯೆ ಹೆಚ್ಚಳವು ಮನುಕುಲಕ್ಕೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಇಡೀ ವಿಶ್ವಕ್ಕೆ ಹತ್ತು ಹಲವಾರು ತೊಂದರೆಗಳು ಎದುರಾಗುತ್ತಿದೆ. ಹೀಗಾಗಿ ಜನಸಂಖ್ಯೆಯನ್ನು ನಿಯಂತ್ರಿಸಲು ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಈ ದಿನದ ಆಚರಣೆ ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ಜಾಗೃತಿ ಕಾರ್ಯಕ್ರಮಗಳು, ಕುಟುಂಬ ಯೋಜನೆ, ಲಿಂಗ ಸಮಾನತೆ, ಬಡತನ, ತಾಯಿ ಮಗುವಿನ ಆರೋಗ್ಯ ಮತ್ತು ಗರ್ಭನಿರೋಧಕ ಔಷಧಿಗಳನ್ನು ಬಳಸುವ ಕುರಿತು ಚರ್ಚಾ ಕಾರ್ಯಕ್ರಮ, ವಿಚಾರ ಸಂಕಿರಣ ಹಾಗೂ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನ ಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ