World Public Transport Day 2024: ಇಂದು ವಿಶ್ವ ಸಾರ್ವಜನಿಕ ಸಾರಿಗೆ ದಿನ; ಈ ದಿನದ ಇತಿಹಾಸ ಮತ್ತು ಮಹತ್ವ ತಿಳಿಯಿರಿ

ವಾಹನಗಳಿಂದ ಹೊರಸೂಸುವ ಹೊಗೆಗಳು ಮತ್ತು ಕರ್ಕಶ ಶಬ್ಧಗಳಿಂದ ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಇಂಧನವನ್ನು ಸಂರಕ್ಷಿಸಲು, ಟ್ರಾಫಿಕ್‌ ಜಾಮ್‌ ಸಮಸ್ಯೆಯನ್ನು ಕಡಿಮೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಲು ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಬಳಸಲು ಜನರನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತಿವರ್ಷ ನವೆಂಬರ್‌ 10 ರಂದು ವಿಶ್ವ ಸಾರಿಗೆ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

World Public Transport Day 2024: ಇಂದು ವಿಶ್ವ ಸಾರ್ವಜನಿಕ ಸಾರಿಗೆ ದಿನ; ಈ ದಿನದ ಇತಿಹಾಸ ಮತ್ತು ಮಹತ್ವ ತಿಳಿಯಿರಿ
World Public Transport Day
Follow us
| Updated By: ಅಕ್ಷತಾ ವರ್ಕಾಡಿ

Updated on: Nov 10, 2024 | 10:26 AM

ನಗರಗಳು ವಿಸ್ತರಿಸಿದಂತೆ, ಪ್ರಪಂಚ ಅಭಿವೃದ್ಧಿಯತ್ತ ಸಾಗುತ್ತಿದ್ದಂತೆ ಜನರು ಸ್ವಂತ ವಾಹನಗಳನ್ನು ಖರೀದಿಸಿ ಅದರಲ್ಲೇ ಓಡಾಡಲು ಆರಂಭಿಸಿದ್ದಾರೆ. ಇದರಿಂದ ಹೆಚ್ಚಿನವರು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಕೆ ಮಾಡುವುದನ್ನೇ ನಿಲ್ಲಿಸಿದ್ದಾರೆ. ಹೀಗೆ ರಸ್ತೆಗಳಲ್ಲಿ ಹೆಚ್ಚು ಹೆಚ್ಚು ವಾಹನಗಳ ಓಡಾಟ ಹೆಚ್ಚಾದಂತೆ ವಾಹನಗಳು ಸೂಸುವ ಹೊಗೆ, ಹಾರ್ನ್‌ ಸದ್ದುಗಳಿಂದ ಪರಿಸರ ಮಾಲಿನ್ಯ ಗಣನೀಯ ಮಟ್ಟದಲ್ಲಿ ಹೆಚ್ಚಾಗಿದೆ. ಅಲ್ಲದೆ ಟ್ರಾಫಿಕ್‌ ಸಮಸ್ಯೆಗಳು ಕೂಡಾ ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಯ ಮೂಲ ಉದ್ದೇಶವನ್ನು ಇಟ್ಟುಕೊಂಡು ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಬಳಸಲು ಜನರನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತಿವರ್ಷ ನವೆಂಬರ್‌ 10 ರಂದು ವಿಶ್ವ ಸಾರ್ವಜನಿಕ ಸಾರಿಗೆ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

ವಿಶ್ವ ಸಾರ್ವಜನಿಕ ಸಾರಿಗೆ ದಿನದ ಇತಿಹಾಸ:

ನಗರಗಳು ವಿಸ್ತರಿಸಿದಂತೆ ಮತ್ತು ಕಾರು ಅಥವಾ ಸ್ವಂತ ವಾಹನ ಬಳಕೆ ಹೆಚ್ಚಾದಂತೆ ಸಂಚಾರ ದಟ್ಟಣೆ, ವಾಯು ಮಾಲಿನ್ಯ ಮತ್ತು ಸಂಪನ್ಮೂಲಗಳ ಸವಕಳಿಯಂತಹ ಸಮಸ್ಯೆಗಳು ಕೂಡಾ ಹೆಚ್ಚಾದವು. ಹೀಗೆ ನಗರೀಕರಣದಿಂದ ಉಂಟಾದ ಈ ಸಮಸ್ಯೆಗಳಿಂದ ಪರಿಸರವನ್ನು ರಕ್ಷಿಸಲು ಜನರು ಹೆಚ್ಚಾಗಿ ಸಾರ್ವಜನಿಕ ವಾಹನಗಳನ್ನು ಉಪಯೋಗಿಸಬೇಕು ಎಂದು ಜಾಗೃತಿ ಮೂಡಿಸಲು 2000 ರ ದಶಕದ ಆರಂಭದಲ್ಲಿ ಮೊದಲ ಬಾರಿಗೆ ವಿಶ್ವ ಸಾರ್ವಜನಿಕ ಸಾರಿಗೆ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ನವೆಂಬರ್‌ 10 ರಂದು ವಿಶ್ವ ಸಾರಿಗೆ ದಿನವನ್ನು ಆಚರಿಸುತ್ತಾ ಬರಲಾಗುತ್ತದೆ.

ಇದನ್ನೂ ಓದಿ: National Legal Services Day 2024: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರವೇನು? ಇಲ್ಲಿದೆ ಮಾಹಿತಿ

ವಿಶ್ವ ಸಾರ್ವಜನಿಕ ಸಾರಿಗೆ ದಿನದ ಮಹತ್ವ:

ವಿಶ್ವ ಸಾರ್ವಜನಿಕ ಸಾರಿಗೆ ದಿನವು ಮಹತ್ವದ್ದಾಗಿದೆ ಏಕೆಂದರೆ ಸಾರ್ವಜನಿಕ ಸಾರಿಗೆಯು ಜನರಿಗೆ ಮಾತ್ರವಲ್ಲದೆ ಪರಿಸರಕ್ಕೂ ಹೇಗೆ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ನಮಗೆ ನೆನಪಿಸುತ್ತದೆ. ನಾವು ಸ್ವಂತ ವಾಹನಗಳನ್ನು ಬಳಸುವ ಬದಲು ನಮ್ಮ ದಿನನಿತ್ಯದ ಓಡಾಟಕ್ಕೆ ರೈಲು, ಮೆಟ್ರೋ, ಬಸ್‌ಗಳಂತಹ ಸಾರ್ವಜನಿಕ ಸಾರಿಗೆಯನ್ನು ಬಳಸುವುದರಿಂದ ರಸ್ತೆಯಲ್ಲಿ ವಾಹನಗಳ ಓಡಾಟದ ಸಂಖ್ಯೆಯೂ ಕಡಿಮೆಯಾಗುತ್ತದೆ. ಇದು ಮಾಲಿನ್ಯವನ್ನು ಕಡಿಮೆ ಮಾಡಿ ಉತ್ತಮ ಗುಣಮಟ್ಟದ ಗಾಳಿಯನ್ನು ನೀಡುವುದು ಮಾತ್ರವಲ್ಲದೆ ಇಂಧನದಂತಹ ನೈಸರ್ಗಿಕ ಸಂಪನ್ಮೂಲಗಳ ಉಳಿವಿಗೂ ಕಾರಣವಾಗುತ್ತದೆ.

ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಹೆಚ್ಚು ಬಳಸುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆಯನ್ನು ನೀಡೋಣ:

ಜನರು ಸಾರ್ವಜನಿಕ ಸಾರಿಗೆಗಳ ಬದಲು ಸ್ವಂತ ವಾಹನಗಳನ್ನು ಉಪಯೋಗಿಸಿದಾಗ ವಿಷಕಾರಿ ಹೊಗೆಗಳು ಹೊರಸೂಸಿ ಹಾಗೂ ಶಬ್ದಗಳಿಂದ ಪರಿಸರ ಮಾಲಿನ್ಯವಾಗುವುದು ಮಾತ್ರವಲ್ಲದೆ ಇದು ಟ್ರಾಫಿಕ್‌ ಜಾಮ್‌ ಸಮಸ್ಯೆ, ಆಕ್ಸಿಡೆಂಟ್‌ಗಳಂತಹ ಸಮಸ್ಯೆಗಳನ್ನು ಸಹ ಉಂಟು ಮಾಡುತ್ತದೆ. ಹೀಗಿರುವಾಗ ನಾವು ನಮ್ಮ ಸ್ವಂತ ವಾಹನಗಳನ್ನು ಬಳಸುವುದನ್ನು ಬಿಟ್ಟು ನಮ್ಮ ದಿನನಿತ್ಯದ ಓಡಾಟಕ್ಕೆ ರೈಲುಗಳು, ಟ್ಯಾಕ್ಸಿಗಳು, ಬಸ್‌, ಮೆಟ್ರೋ ಇತ್ಯಾದಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಹೆಚ್ಚಾಗಿ ಬಳಕೆ ಮಾಡಲು ಆರಂಭಿಸಿದಾಗ ಟ್ರಾಫಿಕ್‌ ಜಾಮ್‌ ಜಾಮ್‌ ಸಮಸ್ಯೆಯಿಂದ ಹಿಡಿದು ವಾಹನಗಳಿಂದ ಹೊರಸೂಸುವ ವಿಷಕಾರಿ ಹೊಗೆಗಳಿಂದ ಉಂಟಾಗುವ ಮಾಲಿನ್ಯವನ್ನು ಸಹ ಕಡಿಮೆಯಾಗುತ್ತದೆ. ಇದು ಶಬ್ಧ ಮಾಲಿನ್ಯ ಮತ್ತು ವಾಯು ಮಾಲಿನ್ಯಗಳಂತಹ ಮಾಲಿನ್ಯದಿಂದ ಪರಿಸರವನ್ನು ರಕ್ಷಿಸುವುದು ಮಾತ್ರವಲ್ಲದೆ ನೈಸರ್ಗಿಕ ಇಂಧನದ ಮಿತಿಮೀರಿದ ಬಳಕೆಗೂ ಕಡಿವಾಣ ಹಾಕಿದಂತಾಗುತ್ತದೆ. ಈ ಮೂಲಕ ಪರಿಸರ ಸಂರಕ್ಷಣೆಗೆ ನಾವು ಕೊಡುಗೆಯನ್ನು ನೀಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..
ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್