AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Rainforest Day 2025: ದಟ್ಟ ಕಾನನವನ್ನು ಸಂರಕ್ಷಿಸಿ ಬೆಳೆಸೋಣ; ವಿಶ್ವ ಮಳೆಕಾಡು ದಿನದ ಮಹತ್ವ ತಿಳಿಯಿರಿ

ಹೆಸರೇ ಹೇಳುವಂತೆ ಸಾಕಷ್ಟು ಮಳೆ ಬೀಳುವ ಕಾಡುಗಳನ್ನು ಮಳೆಕಾಡು ಎಂದು ಕರೆಯುತ್ತಾರೆ. ಸಾಕಷ್ಟು ಮಳೆ ಬೀಳುವುದು ಮಾತ್ರವಲ್ಲದೆ ಈ ದಟ್ಟ ಕಾನನಗಳು ಜಗತ್ತಿಗೆ ಬೇಕಾದ ಶೇ. 28 ರಷ್ಟು ಆಮ್ಲಜನಕವನ್ನು ಉತ್ಪಾದಿಸುತ್ತವೆ. ಆದರೆ ಇಂದು ಮಳೆಕಾಡುಗಳು ಕೂಡ ಸಾಕಷ್ಟು ಬೆದರಿಕೆಗಳನ್ನು ಎದುರಿಸುತ್ತಿವೆ. ಈ ನಿಟ್ಟಿನಲ್ಲಿ ಮಳೆಕಾಡುಗಳನ್ನು ರಕ್ಷಣೆ ಮಾಡಬೇಕೆಂಬ ಸಲುವಾಗಿ ಪ್ರತಿವರ್ಷ ಜೂನ್‌ 22 ರಂದು ವಿಶ್ವ ಮಳೆಕಾಡು ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

World Rainforest Day 2025: ದಟ್ಟ ಕಾನನವನ್ನು ಸಂರಕ್ಷಿಸಿ ಬೆಳೆಸೋಣ; ವಿಶ್ವ ಮಳೆಕಾಡು ದಿನದ ಮಹತ್ವ ತಿಳಿಯಿರಿ
ವಿಶ್ವ ಮಳೆಕಾಡು ದಿನImage Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 21, 2025 | 8:57 PM

Share

ದಟ್ಟವಾಗಿರುವ ಮಳೆಕಾಡುಗಳು (Rainforest)  ದ್ಯುತಿ ಸಂಶ್ಲೇಷಣೆ ಕ್ರಿಯೆ ಮೂಲಕ ಅತಿ ದೊಡ್ಡ ಪ್ರಮಾಣದಲ್ಲಿ ಆಮ್ಲಜನಕ, ಇಂಗಾಲದ ಡೈ ಆಕ್ಸೈಡ್‌ ಬಿಡುಗಡೆ ಮಾಡುತ್ತದೆ. ಅದಕ್ಕಾಗಿಯೇ ಮಳೆಕಾಡುಗಳನ್ನು ಜಗತ್ತಿನ ಶ್ವಾಸಕೋಶ (Lungs of the world)  ಎಂದು ಕರೆಯಲಾಗುತ್ತದೆ. ಜೀವಿಗಳಿಗೆ ಬೇಕಾದ ಶೇ.  28 ರಷ್ಟು ಆಮ್ಲಜನಕ ಮಳೆಕಾಡಿನಲ್ಲೇ ಉತ್ಪತ್ತಿಯಾಗುತ್ತದೆ. ಅಷ್ಟೇ ಅಲ್ಲದೆ ಮಳೆಕಾಡುಗಳು ಸಸ್ತನಿಗಳು, ಸರೀಸೃಪಗಳು ಸೇರಿದಂತೆ ಪ್ರಾಣಿ ಮತ್ತು ಪಕ್ಷಿ ಸಂಕುಲಗಳ ಆಶ್ರಯ ತಾಣವಾಗಿದೆ. ಜೊತೆಗೆ ಮಳೆಕಾಡುಗಳಲ್ಲಿ ಅಪಾರ ಪ್ರಮಾಣದ ಗಿಡ ಮೂಲಿಕೆ ಸಸ್ಯಗಳಿವೆ. ಇದಲ್ಲದೆ ವಿಶ್ವದಲ್ಲಿರುವ ಮಳೆಕಾಡುಗಳು ವಾತಾವರಣದ ಇಂಗಾಲದ ಡೈಆಕ್ಸೈಡ್‌ ಹೀರಿಕೊಳ್ಳುವ ಮೂಲಕ ಹವಾಮಾನ ಬದಲಾವಣೆಯನ್ನು ತಗ್ಗಿಸಲು ಸಹಾಯ ಮಾಡುತ್ತದೆ. ಆದರೆ ಇಂದು ಮನುಷ್ಯನ ಸ್ವಾರ್ಥದ ಕಾರಣ ಮಳೆಕಾಡುಗಳು ಅಪಾಯದ ಅಂಚಿನಲ್ಲಿದೆ. ಆದ್ದರಿಂದ ಈ ದಟ್ಟ ಕಾನನದ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜೂನ್‌ 22 ರಂದು ವಿಶ್ವ ಮಳೆಕಾಡು (World Rainforest Day) ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಮಳೆಕಾಡು ದಿನದ ಇತಿಹಾಸ:

ಪ್ರತಿ ವರ್ಷ ಜೂನ್ 22 ಅನ್ನು ವಿಶ್ವ ಮಳೆಕಾಡು ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ರೇನ್‌ಫಾರೆಸ್ಟ್ ಪಾರ್ಟ್‌ನರ್‌ಶಿಪ್ ಎಂಬ ಸಂಸ್ಥೆ ಮಳೆಕಾಡುಗಳನ್ನು ರಕ್ಷಿಸುವ ಉದ್ದೇಶದಿಂದ ಪ್ರಾರಂಭಿಸಿತು. ಇದರ ನಂತರ, 2017 ರಲ್ಲಿ ಮೊದಲ ಬಾರಿಗೆ ಈ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಮಳೆಕಾಡುಗಳ ಮಹತ್ವ ಮತ್ತು ಅವುಗಳ ರಕ್ಷಣೆ ಎಷ್ಟು ಮುಖ್ಯ ಎಂದು ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಈ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಹಸಿರೇ ಉಸಿರು; ಪ್ರಕೃತಿ ಮಾತೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಇದನ್ನೂ ಓದಿ
Image
ವಿಶ್ವ ಸಂಗೀತ ದಿನದ ಇತಿಹಾಸ, ಮಹತ್ವ ತಿಳಿಯಿರಿ
Image
ಹವಾಮಾನ ಬದಲಾವಣೆಯಿಂದ ಬರಡಾಗುತ್ತಿದೆ ಭೂಮಿ
Image
ವಿಶ್ವ ಸಾಗರ ದಿನವನ್ನು ಏಕೆ ಆಚರಿಸಲಾಗುತ್ತದೆ?
Image
ಪ್ರಕೃತಿ ಮಾತೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆ

ವಿಶ್ವ ಮಳೆಕಾಡು ದಿನದ ಮಹತ್ವ:

ಮಳೆಕಾಡುಗಳನ್ನು ಸಾಮಾನ್ಯವಾಗಿ ಭೂಮಿಯ ಶ್ವಾಸಕೋಶಗಳು ಎಂದು ಕರೆಯಲಾಗುತ್ತದೆ. ಇವುಗಳು ಇಂಗಾಲದ ಡೈ ಆಕ್ಸೈಡನ್ನು ಹೀರಿಕೊಳ್ಳುತ್ತವೆ ಮತ್ತು ಆಮ್ಲಜನಕವನ್ನು ಬಿಡುಗಡೆ ಮಾಡುತ್ತವೆ. ಶುದ್ಧ ನೀರು, ಗಾಳಿ ಮತ್ತು ಆಮ್ಲಜನಕ ನಮ್ಮನ್ನು ತಲುಪುತ್ತಿದೆ ಎಂದರೆ ಅದಕ್ಕೆ ಮುಖ್ಯ ಕಾರಣ ಅದು ಮಳೆಕಾಡುಗಳು. ಅಲ್ಲದೆ ಈ ಕಾಡುಗಳು ಪಕ್ಷಿ-ಪ್ರಾಣಿ ಸಂಕುಲಗಳಿಗೆ ಆಶ್ರಯ ತಾಣವಾಗಿದೆ. ಜೊತೆಗೆ ಆಹಾರ, ಆಶ್ರಯ, ಔಷಧಕ್ಕಾಗಿ ಅವುಗಳನ್ನು ಅವಲಂಬಿಸಿರುವ ಸ್ಥಳೀಯ ಸಮುದಾಯದವರು ಜೀವನೋಪಾಯಕ್ಕೆ ಈ ಮಳೆಕಾಡುಗಳನ್ನೇ ಅತ್ಯಗತ್ಯ.

ಆದರೆ ಇಂದು ಅರಣ್ಯ ನಾಶ, ಹವಾಮಾನ ಬದಲಾವಣೆ ಮಳೆಕಾಡುಗಳಿಗೆ ಬೆದರಿಕೆಯಾಗಿ ಪರಿಣಮಿಸಿದೆ. ಹಾಗಾಗಿ ಭೂಮಿಯ ಶ್ವಾಸಕೋಶವನ್ನು ರಕ್ಷಿಸುವ ಉದ್ದೇಶದಿಂದ ವಿಶ್ವ ಮಳೆಕಾಡು ದಿನವನ್ನು ಆಚರಿಸುವುದು ಅತ್ಯಗತ್ಯವಾಗಿದೆ. ಈ ವಿಶೇಷ ದಿನದಂದು ಮಳೆಕಾಡು ಸಂರಕ್ಷಣೆಯನ್ನು ಉತ್ತೇಜಿಸಲು ಪ್ರಪಂಚದಾದ್ಯಂತ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಮಳೆಕಾಡುಗಳ ಮಹತ್ವ, ಅವುಗಳು ಎದುರಿಸುತ್ತಿರುವ ಬೆದರಿಕೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ