
ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ನೀಡುವ ಮೂಲಕ ಮಾನವೀಯತೆ ಮೆರೆಯುತ್ತಾ ಬಂದಿರುವ ಸಂಸ್ಥೆಯೇ ರೆಡ್ ಕ್ರಾಸ್. ಯಾವುದೇ ತಾರತಮ್ಯವಿಲ್ಲದೆ ಜನರಿಗೆ ಸಹಾಯ ಮಾಡುವುದೇ ಈ ಸಂಸ್ಥೆಯ ಮೂಲ ಉದ್ದೇಶವಾಗಿದೆ. ಅಂತರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳವಳಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ವಿಶ್ವ ರೆಡ್ ಕ್ರಾಸ್ ದಿನವನ್ನು ಆಚರಿಸಲಾಗುತ್ತಿದೆ.
1948 ರಲ್ಲಿ ಮೊದಲ ಬಾರಿಗೆ ವಿಶ್ವ ರೆಡ್ ಕ್ರಾಸ್ ದಿನ’ವನ್ನು ಆಚರಿಸಲಾಯಿತು. ಈ ದಿನವನ್ನು ‘ರೆಡ್ ಕ್ರೆಸೆಂಟ್ ಡೇ’ ಎಂದೂ ಕೂಡ ಕರೆಯಲಾಗುತ್ತದೆ. 1828ರ ಮೇ 8ರಂದು ಇಂಟರ್ನ್ಯಾಷನಲ್ ಕಮಿಟಿ ಆಫ್ ದಿ ರೆಡ್‌ಕ್ರಾಸ್‌ನ ಸಂಸ್ಥಾಪಕ ಹೆನ್ರಿ ಡ್ಯೂನಾಂಟ್ ಜನಿಸಿದ್ದರು. ವಿಶ್ವ ರೆಡ್ ಕ್ರಾಸ್ ಸಂಸ್ಥೆಯನ್ನು 1863ರಲ್ಲಿ ಪ್ರಾರಂಭಿಸಿದ್ದರು. ಹೆನ್ರಿ ಡ್ಯೂನಾಂಟ್ ಜನ್ಮದಿನದಂದು ವಿಶ್ವ ರೆಡ್ ಕ್ರಾಸ್ ದಿನವನ್ನು ಆಚರಿಸಲಾಗುತ್ತಿದೆ.
ಇದನ್ನೂ ಓದಿ: ಮೆಣಸಿನ ಖಾರಕ್ಕೆ ಕೈ ಉರಿದ್ರೆ ಈ ಸರಳ ಮನೆ ಮದ್ದು ಬಳಸಿ
ಯುದ್ಧ ಸೇರಿದಂತೆ ಕಷ್ಟದ ಸಂದರ್ಭಗಳಲ್ಲಿ ಅಗತ್ಯವಿರುವವರಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡುವುದು ಈ ದಿನದ ಮೂಲ ಉದ್ದೇಶವಾಗಿದೆ. ಅಂತರರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳುವಳಿಯ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ನಿಸ್ವಾರ್ಥದಿಂದ ಕೆಲಸ ಮಾಡುವ ಸ್ವಯಂಸೇವಕರು ಮತ್ತು ಕಾರ್ಮಿಕರ ಕೊಡುಗೆಯನ್ನು ಈ ದಿನದಂದು ಸ್ಮರಿಸುವ ಕೆಲಸವಾಗುತ್ತದೆ.
ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ