AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Refugee Day 2025: ವಿಶ್ವ ನಿರಾಶ್ರಿತರ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ ತಿಳಿಯಿರಿ

ಸಂಘರ್ಷ, ಕಿರುಕುಳ ಹಾಗೂ ಹಿಂಸಾಚಾರ ಸೇರಿದಂತೆ ಹಲವಾರು ಕಾರಣಗಳಿಂದ ಮನೆ, ಊರು ತೊರೆದು, ಒತ್ತಾಯಪೂರ್ವಕವಾಗಿ ಊರು ತೊರೆದು ಎಲ್ಲೋ ಬೇರೆ ದೇಶಕ್ಕೆ ಹೋಗಿ ನಿರಾಶ್ರಿತರಾಗಿ ಬದುಕುತ್ತಿರುವ ಅದೆಷ್ಟೋ ಜನರಿದ್ದಾರೆ. ಎಲ್ಲೂ ಒಂದೊಳ್ಳೆ ನೆಲೆ ಇಲ್ಲದೆ ನಿರಾಶ್ರಿತರು ಇಂದಿಗೂ ನೋವು, ಹತಾಶೆಯ ಜೀವನ ನಡೆಸುತ್ತಿದ್ದಾರೆ. ಇವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜೂನ್‌ 20 ರಂದು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

World Refugee Day 2025: ವಿಶ್ವ ನಿರಾಶ್ರಿತರ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ ತಿಳಿಯಿರಿ
ವಿಶ್ವ ನಿರಾಶ್ರಿತರ ದಿನImage Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 19, 2025 | 9:31 PM

Share

ಯುದ್ಧ, ಸಂಘರ್ಷ, ರಾಜಕೀಯ ಗಲಭೆ, ಪ್ರಾಕೃತಿಕ ವಿಕೋಪ, ಆರ್ಥಿಕ ಬಿಕ್ಕಟ್ಟು, ಹಿಂಸಾಚಾರ ಇತ್ಯಾದಿ ಕಾರಣಗಳಿಂದ ತಮ್ಮ ಊರು, ದೇಶ ತೊರೆದು ಬೇರೆ ದೇಶಗಳಿಗೆ ವಲಸೆ ಹೋಗಿ ಆಶ್ರಯ ಪಡೆಯಲು, ನೆಮ್ಮದಿಯ ಬದುಕು ನಡೆಸಲು ಸಾಕಷ್ಟು ಹೆಣಗಾಡುತ್ತಿದ್ದಾರೆ. ಅದರಲ್ಲೂ ಯುದ್ಧಗಳ ಕಾರಣದಿಂದಾಗಿ ಜಾಗತಿಕವಾಗಿ ನಿರಾಶ್ರಿತರ (Refugee) ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಉತ್ತಮ ನೆಲೆಯಿಲ್ಲದೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ ಇಂದಿಗೂ ನಿರಾಶ್ರಿತರು ನೋವು ಹತಾಶೆಯ ಜೀವನವನ್ನು ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ನಿರಾಶ್ರಿತರ ಸಮಸ್ಯೆಗಳ ಬಗ್ಗೆ ಹಾಗೂ ಅವರ ಪುನರ್‌ವಸತಿಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್‌ 20 ರಂದು ವಿಶ್ವ ನಿರಾಶ್ರಿತರ (World Refugee Day) ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವ ಏನೆಂಬುದನ್ನು ತಿಳಿಯಿರಿ.

ವಿಶ್ವ ನಿರಾಶ್ರಿತರ ದಿನದ ಇತಿಹಾಸ:

ವಿಶ್ವ ನಿರಾಶ್ರಿತರ ದಿನವನ್ನು ಪ್ರತಿ ವರ್ಷ ಜೂನ್ 20 ರಂದು ಆಚರಿಸಲಾಗುತ್ತದೆ.  2000ನೇ ಇಸವಿಯಲ್ಲಿ, ವಿಶ್ವಸಂಸ್ಥೆಯು ಡಿಸೆಂಬರ್ ತಿಂಗಳಿನಲ್ಲಿ ಜೂನ್ 20 ರಂದು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಲು ನಿರ್ಧರಿಸಿತು. ಅಂದಿನಿಂದ ಪ್ರತಿವರ್ಷ ಜೂನ್‌ 20 ರಂದು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಲಾಗುತ್ತಿದೆ.  ವಿಶ್ವಸಂಸ್ಥೆಯಲ್ಲಿ ಪ್ರತ್ಯೇಕ ಸಂಘಟನೆಯನ್ನು ರಚಿಸಲಾಗಿದ್ದು, ಇದನ್ನು ದಿ ಯುನೈಟೆಡ್‌ ನೇಷನ್ಸ್‌  ಹೈ ಕಮಿಷನರ್ ಎಂದು ಹೆಸರಿಸಲಾಗಿದೆ. ವಿಶ್ವಸಂಸ್ಥೆಯ ಈ ಸಂಸ್ಥೆಯು ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಸಹಾಯ ಮಾಡಲು ಕಾರ್ಯ ನಿರ್ವಹಿಸುತ್ತಿದೆ.  ಈ ಸಂಘಟನೆ ನಿರಾಶ್ರಿತರು ವಾಸಿಸುವ ಸ್ಥಳಗಳಿಗೆ ಶಿಬಿರಗಳು, ಶಿಕ್ಷಣ, ವೈದ್ಯಕೀಯ ಮತ್ತು ಇತರ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸುತ್ತದೆ.

ಇದನ್ನೂ ಓದಿ: ಹವಾಮಾನ ಬದಲಾವಣೆಯಿಂದ ಬರಡಾಗುತ್ತಿದೆ ಭೂಮಿ

ಇದನ್ನೂ ಓದಿ
Image
ಪಿಕ್ನಿಕ್‌ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು?
Image
ಹವಾಮಾನ ಬದಲಾವಣೆಯಿಂದ ಬರಡಾಗುತ್ತಿದೆ ಭೂಮಿ
Image
ವಿಶ್ವ ವಾಯು ದಿನವನ್ನು ಏಕೆ ಆಚರಿಸಲಾಗುತ್ತದೆ?
Image
ವಿಶ್ವ ಸಾಗರ ದಿನವನ್ನು ಏಕೆ ಆಚರಿಸಲಾಗುತ್ತದೆ?

ವಿಶ್ವ ನಿರಾಶ್ರಿತರ ದಿನದ ಮಹತ್ವ:

ಒಂದು ಕಾಲದಲ್ಲಿ ತಮ್ಮ ತಾಯ್ನಾಡಿನಲ್ಲಿ ಸಂತೋಷದಿಂದಿದ್ದ, ಆದರೆ ಇಂದು ಒಂದೊಳ್ಳೆ ನೆಲೆಯಿಲ್ಲದೆ ಆಶ್ರಯಕ್ಕಾಗಿ ಪರದಾಡುತ್ತಿರುವ ನಿರಾಶ್ರಿತರ ನೋವು, ಅವರ ಕಷ್ಟಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ವಿಶ್ವ ನಿರಾಶ್ರಿತರ ದಿನವನ್ನು ಆಚರಿಸುವ ಉದ್ದೇಶವು ವಿಶ್ವದ ನಿರಾಶ್ರಿತರಿಗೆ ಮಾನ್ಯತೆ ನೀಡುವುದು. ಅವರಿಗೆ ಸಹಾಯ ಮಾಡಲು ರಾಜಕೀಯ ಇಚ್ಛಾಶಕ್ತಿಯನ್ನು ಪ್ರೇರೇಪಿಸುವುದು ಸಹ ಆಗಿದೆ. ನಿರಾಶ್ರಿತರು ಇತರ ದೇಶಗಳಿಗೆ ಹೋಗಿ ತಮ್ಮ ಜೀವನವನ್ನು ಪುನರ್ನಿರ್ಮಿಸಲು ಸಾಧ್ಯವಾಗುವಂತೆ ರಾಜಕೀಯ ಇಚ್ಛಾಶಕ್ತಿಯನ್ನು ಜಾಗೃತಗೊಳಿಸುವುದು ಈ ದಿನದ ಆಚರಣೆಯ ಉದ್ದೇಶವಾಗಿದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ