AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Day of Safety and Health at Work 2022: ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಆರೋಗ್ಯದ ಅಂತರಾಷ್ಟ್ರೀಯ ದಿನ ಇಂದು; ಏನಿದರ ಮಹತ್ವ?

ಇಂದು ಏಪ್ರಿಲ್​ 28. ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಆರೋಗ್ಯ ಅಂತಾರಾಷ್ಟ್ರೀಯ ದಿನಾಚರಣೆ (World Day of Safety and Health at Work 2022).  ವಿಶ್ವದಾದ್ಯಂತ ಕೋಟ್ಯಂತರ ಜನರು ಕೆಲಸಕ್ಕೆಂದು ವಿವಿಧ ಕಂಪನಿ, ಕಾರ್ಖಾನೆಗಳಿಗೆ ಹೋಗುತ್ತಾರೆ. ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡವರಿದ್ದಾರೆ. ಅಂಥವರಿಗೆ ಕೆಲಸ ಮಾಡುವ ಸ್ಥಳದಲ್ಲಿ ಸುರಕ್ಷತೆ ತುಂಬ ಮುಖ್ಯ. ಹಾಗೇ, ಇವರ ಆರೋಗ್ಯಕ್ಕೂ ಒತ್ತು ಕೊಡಬೇಕಾಗುತ್ತದೆ. ಹೀಗಾಗಿ ಕೆಲಸದ ಸ್ಥಳದಲ್ಲಿ ಉಂಟಾಗಬಹುದಾದ ಅಪಘಾತ, ಅನಾರೋಗ್ಯಗಳನ್ನು ತಡೆಯುವ ಬಗ್ಗೆ ಕೆಲಸಗಾರರಿಗೆ, ಕಂಪನಿಗಳಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ […]

World Day of Safety and Health at Work 2022: ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಆರೋಗ್ಯದ ಅಂತರಾಷ್ಟ್ರೀಯ ದಿನ ಇಂದು; ಏನಿದರ ಮಹತ್ವ?
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Apr 28, 2022 | 10:22 AM

Share

ಇಂದು ಏಪ್ರಿಲ್​ 28. ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಆರೋಗ್ಯ ಅಂತಾರಾಷ್ಟ್ರೀಯ ದಿನಾಚರಣೆ (World Day of Safety and Health at Work 2022).  ವಿಶ್ವದಾದ್ಯಂತ ಕೋಟ್ಯಂತರ ಜನರು ಕೆಲಸಕ್ಕೆಂದು ವಿವಿಧ ಕಂಪನಿ, ಕಾರ್ಖಾನೆಗಳಿಗೆ ಹೋಗುತ್ತಾರೆ. ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡವರಿದ್ದಾರೆ. ಅಂಥವರಿಗೆ ಕೆಲಸ ಮಾಡುವ ಸ್ಥಳದಲ್ಲಿ ಸುರಕ್ಷತೆ ತುಂಬ ಮುಖ್ಯ. ಹಾಗೇ, ಇವರ ಆರೋಗ್ಯಕ್ಕೂ ಒತ್ತು ಕೊಡಬೇಕಾಗುತ್ತದೆ. ಹೀಗಾಗಿ ಕೆಲಸದ ಸ್ಥಳದಲ್ಲಿ ಉಂಟಾಗಬಹುದಾದ ಅಪಘಾತ, ಅನಾರೋಗ್ಯಗಳನ್ನು ತಡೆಯುವ ಬಗ್ಗೆ ಕೆಲಸಗಾರರಿಗೆ, ಕಂಪನಿಗಳಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ದಿನವನ್ನು ಪ್ರತಿವರ್ಷ ಏಪ್ರಿಲ್​ 28ರಂದು ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತದೆ. ಹಾಗೇ  ಜಾಗತಿಕವಾಗಿ ಈಗಾಗಲೇ ಅನೇಕರು ತಮ್ಮ ಕೆಲಸದ ಸ್ಥಳದಲ್ಲಿ ಗಾಯಗೊಂಡವರಿದ್ದಾರೆ. ಕೆಲಸ ಮಾಡುತ್ತಲೇ ಮೃತಪಟ್ಟವರೂ ಇದ್ದಾರೆ. ಅವರೆಲ್ಲರ ಸ್ಮರಣೆಗಾಗೂ ಈ ದಿನವನ್ನು ಮೀಸಲಾಗಿಡಲಾಗುತ್ತದೆ.

ಒಂದು ದಿನದಲ್ಲಿ ಹೆಚ್ಚಿನ ಸಮಯವನ್ನು ನಾವೆಲ್ಲ ನಮ್ಮ ಕೆಲಸದ ಸ್ಥಳದಲ್ಲಿಯೇ ಕಳೆಯುತ್ತೇವೆ. ಹೀಗಾಗಿ ಆ ಸ್ಥಳ ನಮ್ಮೆಲ್ಲರ ಪಾಲಿಗೆ ಅತ್ಯಂತ ಮಹತ್ವದ್ದು. ಅಲ್ಲಿ ಸುರಕ್ಷತೆ ಇರಬೇಕು. ಆರೋಗ್ಯಕ್ಕೆ ಪೂರಕವಾದ ವಾತಾವರಣ ಇರಬೇಕು. ಸೌಹಾರ್ದಯುತ ಪರಿಸರವೂ ಬಹಳ ಮುಖ್ಯ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ, ಈ ಆಚರಣೆ ನಡೆಸಲಾಗುತ್ತಿದೆ.  ಇಂಥದ್ದೊಂದು ದಿನ ಬೇಕು ಎಂದು ಮೊದಲು ಘೋಷಿಸಿ, ಅನುಷ್ಠಾನಕ್ಕೆ ತಂದಿದ್ದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ (ILO). ಔದ್ಯೋಗಿಕ ಸುರಕ್ಷತೆ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಅಭಿಯಾನ ನಡೆಸುವುದೇ ಇದರ ಪರಮೋದ್ದೇಶ.

ಈ ಬಾರಿಯ ಥೀಮ್ ಏನು?

ಪ್ರತಿವರ್ಷವೂ ಒಂದೊಂದು ಥೀಮ್​​ನೊಂದಿಗೆ ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಆರೋಗ್ಯ ವಿಶ್ವ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ‘ಸಕಾರಾತ್ಮಕ ಸುರಕ್ಷತೆ ಮತ್ತು ಆರೋಗ್ಯ ಸಂಸ್ಕೃತಿ ನಿರ್ಮಾಣಕ್ಕಾಗಿ ಒಟ್ಟಾಗಿ ಕಾರ್ಯನಿರ್ವಹಿಸೋಣ’ ಎಂಬ ಥೀಮ್​​ನಡಿ ಆಚರಣೆ ನಡೆಯುತ್ತಿದೆ. ಅಂದರೆ ಕೆಲಸದ ಸ್ಥಳಗಳಲ್ಲಿ ಸುರಕ್ಷತೆ ಮತ್ತು ಆರೋಗ್ಯಕ್ಕೆ ಪೂರಕ ವಾತಾವರಣ ನಿರ್ಮಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂಬ ಉದ್ದೇಶವನ್ನು ಇದು ಒಳಗೊಂಡಿದೆ.

ಆಚರಣೆ ಹೇಗಿರುತ್ತದೆ?

ಈ ದಿನವನ್ನು ವಿವಿಧ ಕಾರ್ಮಿಕ ಸಂಘಟನೆಗಳು ಒಟ್ಟಾಗಿ ಆಚರಿಸುತ್ತವೆ. ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ ಬಹುಮುಖ್ಯ ಪಾತ್ರ ವಹಿಸುತ್ತದೆ. ವಿವಿಧ ಕಾರ್ಮಿಕ ಸಮುದಾಯಗಳು ಒಂದಾಗಿ ಅಭಿಯಾನದಲ್ಲಿ ಪಾಲ್ಗೊಳ್ಳುತ್ತವೆ. ಕೆಲಸದ ಸ್ಥಳದಲ್ಲಿ ಯಾವೆಲ್ಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬಹುದು? ಉಂಟಾಗಬಹುದಾದ ಆರೋಗ್ಯ ಸಮಸ್ಯೆಯಿಂದ ಪಾರಾಗಲು ಏನು ಮಾಡಬಹುದು ಎಂಬಿತ್ಯಾದಿ ವಿಚಾರಗಳ ಚರ್ಚೆಯೂ ನಡೆಯುತ್ತದೆ.

ಇದನ್ನೂ ಓದಿ: ತಾಯಿಯ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ನಟಿ ತಾರಾ ಅನುರಾಧ; ಇಲ್ಲಿದೆ ವಿಡಿಯೋ

Published On - 9:49 am, Thu, 28 April 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ