AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Sight Day 2022: ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಬೇಕೆ? ನಿಮ್ಮ ಆಹಾರದಲ್ಲಿ ಏನೇನಿರಬೇಕು?

ಕಣ್ಣುಗಳು ನಮ್ಮ ದೇಹದ ಅತ್ಯಂತ ಅವಿಭಾಜ್ಯ ಅಂಗವಾಗಿದೆ. ನಮ್ಮ ಕಣ್ಣುಗಳ ಮೂಲಕ ನಾವು ಪ್ರಪಂಚದ ಎಲ್ಲಾ ಒಳ್ಳೆಯ ಮತ್ತು ಕೆಟ್ಟ ವಿಷಯಗಳನ್ನು ನೋಡಬಹುದು.

World Sight Day 2022: ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಬೇಕೆ? ನಿಮ್ಮ ಆಹಾರದಲ್ಲಿ ಏನೇನಿರಬೇಕು?
Eye Care
TV9 Web
| Updated By: ನಯನಾ ರಾಜೀವ್|

Updated on: Oct 13, 2022 | 10:17 AM

Share

ಕಣ್ಣುಗಳು ನಮ್ಮ ದೇಹದ ಅತ್ಯಂತ ಅವಿಭಾಜ್ಯ ಅಂಗವಾಗಿದೆ. ನಮ್ಮ ಕಣ್ಣುಗಳ ಮೂಲಕ ನಾವು ಪ್ರಪಂಚದ ಎಲ್ಲಾ ಒಳ್ಳೆಯ ಮತ್ತು ಕೆಟ್ಟ ವಿಷಯಗಳನ್ನು ನೋಡಬಹುದು. ದೇಹದ ಉಳಿದ ಭಾಗಗಳನ್ನು ಆರೋಗ್ಯವಾಗಿಡಲು ಪೌಷ್ಠಿಕಾಂಶದ ಆಹಾರದ ಅಗತ್ಯವಿದೆ, ಅದೇ ರೀತಿಯಲ್ಲಿ, ಕಣ್ಣುಗಳು ಆರೋಗ್ಯವಾಗಿರಲು ಆರೋಗ್ಯಕರ ಆಹಾರದ ಅಗತ್ಯವಿದೆ.

ಇಂದಿನ ಬದಲಾಗುತ್ತಿರುವ ಜೀವನಶೈಲಿ, ತಿನ್ನುವುದು ಮತ್ತು ಕಂಪ್ಯೂಟರ್‌ನಲ್ಲಿ ಗಂಟೆಗಟ್ಟಲೆ ಕಚೇರಿ ಕೆಲಸ ಮಾಡುವುದು ಅಥವಾ ಮೊಬೈಲ್‌ನಲ್ಲಿ ಆಟವಾಡುವುದು ಕಣ್ಣುಗಳನ್ನು ದುರ್ಬಲಗೊಳಿಸುತ್ತಿದೆ.

ಕಣ್ಣುಗಳಿಗೆ ಹಾನಿಯಾಗದಂತೆ ತಡೆಯಲು ಮತ್ತು ಅವುಗಳನ್ನು ಆರೋಗ್ಯವಾಗಿಡಲು, ನಿಮ್ಮ ಆಹಾರದಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಪೋಷಣೆಯಲ್ಲಿ ಸಮೃದ್ಧವಾಗಿರುವ ಆಹಾರವನ್ನು ನೀವು ಸೇರಿಸಿಕೊಳ್ಳಬೇಕು. ಆದ್ದರಿಂದ ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುವ ಅಂತಹ ಆಹಾರಗಳ ಬಗ್ಗೆ ನಿಮಗೆ ತಿಳಿಸುತ್ತೇವೆ.

ಡ್ರೈಫ್ರೂಟ್ಸ್​ ಡ್ರೈಫ್ರೂಟ್ಸ್​ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ವಿಟಮಿನ್-ಇ ಅವುಗಳಲ್ಲಿ ಹೇರಳವಾಗಿ ಕಂಡುಬರುತ್ತದೆ, ಇದು ದೃಷ್ಟಿ ಹೆಚ್ಚಿಸಲು ಸಹಾಯ ಮಾಡುತ್ತದೆ.

2. ಮೊಟ್ಟೆಗಳು ಮೊಟ್ಟೆಗಳನ್ನು ಪ್ರೋಟೀನ್‌ನ ಉತ್ತಮ ಮೂಲವೆಂದು ಪರಿಗಣಿಸಲಾಗುತ್ತದೆ. ಅಷ್ಟೇ ಅಲ್ಲ, ಇದು ಅಮೈನೋ ಆಮ್ಲಗಳು, ಸಲ್ಫರ್, ಲೆಕ್ಟಿನ್, ಲುಟೀನ್, ಸಿಸ್ಟೀನ್ ಮತ್ತು ವಿಟಮಿನ್ ಬಿ 2 ಅನ್ನು ಹೊಂದಿರುತ್ತದೆ. ಜೀವಕೋಶದ ಕಾರ್ಯದಲ್ಲಿ ವಿಟಮಿನ್ ಬಿ ಮುಖ್ಯವಾಗಿದೆ. ಮೊಟ್ಟೆಯ ಸೇವನೆಯು ಕಣ್ಣುಗಳ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

3. ಹಸಿರು ತರಕಾರಿಗಳು ಹಸಿರು ಎಲೆಗಳ ತರಕಾರಿಗಳನ್ನು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಹಸಿರು ಎಲೆಗಳ ತರಕಾರಿಗಳಲ್ಲಿ ಕಬ್ಬಿಣ ಮತ್ತು ವಿಟಮಿನ್‌ಗಳು ಹೇರಳವಾಗಿ ಕಂಡುಬರುತ್ತವೆ, ಇದು ದೃಷ್ಟಿ ಸುಧಾರಿಸಲು ಮತ್ತು ಆರೋಗ್ಯಕರವಾಗಿರಲು ಸಹಾಯ ಮಾಡುತ್ತದೆ.

4. ಬೀನ್ಸ್: ಬೀನ್ಸ್‌ನಲ್ಲಿ ಬಯೋಫ್ಲವೊನೈಡ್‌ಗಳು ಮತ್ತು ಸತುವು ಸಮೃದ್ಧವಾಗಿದೆ. ಇದು ಕಣ್ಣಿನ ರೆಟಿನಾವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಬೀನ್ಸ್ ಅನ್ನು ಆಹಾರದಲ್ಲಿ ಸೇರಿಸುವುದರಿಂದ ಕಣ್ಣಿನ ದೃಷ್ಟಿಯನ್ನು ಹೆಚ್ಚಿಸಬಹುದು.

5. ಸಿಟ್ರಸ್ ಹಣ್ಣುಗಳು: ನಿಮ್ಮ ಆಹಾರದಲ್ಲಿ ಕಿತ್ತಳೆ, ದ್ರಾಕ್ಷಿ, ನಿಂಬೆಹಣ್ಣು ಮತ್ತು ಬೆರ್ರಿ ಹಣ್ಣುಗಳನ್ನು ಸೇರಿಸಿದರೆ, ಕಣ್ಣುಗಳು ಮಾತ್ರವಲ್ಲದೆ ಇಡೀ ದೇಹವನ್ನು ಆರೋಗ್ಯವಾಗಿಡಬಹುದು. ವಿಟಮಿನ್ ಸಿ, ವಿಟಮಿನ್ ಇ ಸಿಟ್ರಸ್ ಹಣ್ಣುಗಳಲ್ಲಿ ಕಂಡುಬರುತ್ತವೆ, ಇದು ದೃಷ್ಟಿ ಹೆಚ್ಚಿಸಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?