World Stroke Day: ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುವ ಆಹಾರಗಳು ಮತ್ತು ದೈಹಿಕ ಚಟುವಟಿಕೆಗಳು

ಪಾರ್ಶ್ವವಾಯುವನ್ನು ತಡೆಗಟ್ಟುವ ಮತ್ತು ಎರಡನೇ ಸ್ಟ್ರೋಕ್‌ನ ಸಾಧ್ಯತೆಗಳನ್ನು ಕಡಿಮೆ ಮಾಡುವ ಜೀವನಶೈಲಿಯ ಬದಲಾವಣೆಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಪಾರ್ಶ್ವವಾಯು ದಿನ ಸೂಕ್ತ ಸಮಯವಾಗಿದೆ.

World Stroke Day: ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುವ ಆಹಾರಗಳು ಮತ್ತು ದೈಹಿಕ ಚಟುವಟಿಕೆಗಳು
ವಿಶ್ವ ಪಾರ್ಶ್ವವಾಯು ದಿನImage Credit source: ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Oct 28, 2022 | 11:20 AM

ಬದಲಾದ ಜೀವನಶೈಲಿಯಿಂದಾಗಿ ವಿಶ್ವದಲ್ಲಿ ಅನೇಕರು ಪಾರ್ಶ್ವವಾಯು (Stroke) ವಿಗೆ ತುತ್ತಾಗಿದ್ದಾರೆ. ಹೀಗಾಗಿ ಪಾರ್ಶ್ವವಾಯುವನ್ನು ತಡೆಗಟ್ಟುವಲ್ಲಿ ಜೀವನಶೈಲಿಯ ಬದಲಾವಣೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಪಾರ್ಶ್ವವಾಯು ಅಪಾಯವನ್ನು ತಪ್ಪಿಸಲು, ಒಬ್ಬರು ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ಅಧಿಕ ಬಿಪಿ , ಮಧುಮೇಹ , ಅಧಿಕ ಕೊಲೆಸ್ಟ್ರಾಲ್ , ಬೊಜ್ಜು ಮತ್ತು ಹೃದ್ರೋಗಗಳಂತಹ ದೀರ್ಘಕಾಲದ ಕಾಯಿಲೆಗಳನ್ನು ನಿರ್ವಹಿಸುವುದಾಗಿದೆ. ಮದ್ಯಪಾನ, ಧೂಮಪಾನ ಅಭ್ಯಾಸ ಇದ್ದರೆ ತ್ಯಜಿಸುವುದು ಉತ್ತಮ, ನಿಯಮಿತ ವ್ಯಾಯಾಮ ಮಾಡುವ ಮೂಲಕ ಹೆಚ್ಚುವರಿ ತೂಕ ಕಳೆದುಕೊಳ್ಳುಬೇಕು. ಈ ಎಲ್ಲವನ್ನು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅ.29ರಂದು ವಿಶ್ವದಾದ್ಯಂತ ಪಾರ್ಶ್ವವಾಯು ದಿನ (World Stroke Day)ವನ್ನು ಆಚರಿಸಲಾಗುತ್ತಿದೆ.

ಸಮತೋಲಿತ ಆಹಾರದ ಸೇವನೆ ನಿಮ್ಮ ಜೀವನಶೈಲಿಯಲ್ಲಿ ನೀವು ಮಾಡಬಹುದಾದ ಸುಲಭ ಮತ್ತು ತ್ವರಿತ ಬದಲಾವಣೆಯಾಗಿದೆ. ನಿಮ್ಮ ಆಹಾರದಲ್ಲಿ ಹಣ್ಣುಗಳು ಮತ್ತು ತರಕಾರಿಗಳು, ಧಾನ್ಯಗಳು, ನಾರುಗಳು, ಪ್ರೋಟೀನ್ ಮತ್ತು ಇತರ ಅಗತ್ಯ ಪೋಷಕಾಂಶಗಳನ್ನು ಸೇರಿಸುವುದರಿಂದ ಯಾವುದೇ ದೀರ್ಘಕಾಲದ ಕಾಯಿಲೆಯನ್ನು ನಿರ್ವಹಿಸಲು ಮತ್ತು ಅಪಧಮನಿಗಳ ಅಡಚಣೆಯನ್ನು ತಡೆಯಲು ಸಹಾಯಕವಾಗಿದೆ. ದೆಹಲಿಯ ಕೈಲಾಶ್ ದೀಪಕ್ ಆಸ್ಪತ್ರೆ ನಿರ್ದೇಶಕ ಡಾ.ವಿಕಾಸ್ ಗುಪ್ತಾ ಅವರು, ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಲು ಆಹಾರದದಲ್ಲಿ ಮಾಡಬೇಕಾದ ಬದಲಾವಣೆಗಳನ್ನು ತಿಳಿಸಿದ್ದಾರೆ. ಅವುಗಳು ಈ ಕೆಳಗಿನಂತಿವೆ.

  1. ಹಣ್ಣುಗಳು ಮತ್ತು ತರಕಾರಿಗಳು: ಇವುಗಳ ಸೇವನೆ ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ಹಣ್ಣು ತರಕಾರಿಗಳಲ್ಲಿ ಫೈಬರ್ ಅಂಶಗಳು ಸಮೃದ್ಧವಾಗಿದ್ದು, ಕೊಬ್ಬು ಮತ್ತು ಕ್ಯಾಲೋರಿಗಳಲ್ಲಿ ನೈಸರ್ಗಿಕವಾಗಿ ಕಡಿಮೆ ಮಾಡಲು ಸಹಕಾರಿಯಾಗಿದೆ. ಹಣ್ಣುಗಳು ಮತ್ತು ತರಕಾರಿಗಳು ಪೊಟ್ಯಾಸಿಯಮ್, ಫೈಬರ್, ಫೋಲೇಟ್, ವಿಟಮಿನ್ ಎ ಮತ್ತು ವಿಟಮಿನ್ ಸಿ ನಂತಹ ಅಗತ್ಯ ಪೋಷಕಾಂಶಗಳನ್ನು ಹೊಂದಿರುತ್ತವೆ. ಬಿಳಿ ಆಲೂಗಡ್ಡೆ, ಬಾಳೆಹಣ್ಣುಗಳು, ಟೊಮ್ಯಾಟೊ, ಒಣದ್ರಾಕ್ಷಿ, ಕಲ್ಲಂಗಡಿ ಮತ್ತು ಸೋಯಾಬೀನ್‌ಗಳಂತಹ ಪೊಟ್ಯಾಸಿಯಮ್ ಸಮೃದ್ಧ ಆಹಾರಗಳು ನಿಮ್ಮ ರಕ್ತದೊತ್ತಡವನ್ನು ಸಾಮಾನ್ಯ ವ್ಯಾಪ್ತಿಯಲ್ಲಿ ಇರಿಸಲು ಸಹಾಯ ಮಾಡುತ್ತದೆ. ಪಾಲಕ್‌ನಂತಹ ಮೆಗ್ನೀಸಿಯಮ್ ಅಧಿಕವಾಗಿರುವ ಆಹಾರವು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಲು ಮತ್ತು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ನೀವು ಕನಿಷ್ಟ ಎರಡು ಬಾರಿ ಹಣ್ಣುಗಳನ್ನು ಮತ್ತು ತರಕಾರಿಗಳನ್ನು ಸೇವಿಸಬೇಕು.
  2. ಮೀನಿನ ಸೇವನೆ: ಒಮೆಗಾ -3 ಕೊಬ್ಬಿನಾಮ್ಲಗಳು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಮೀನಿನ ಸೇವನೆ ಮಾಡಬೇಕು. ನಿಮ್ಮ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತವೆ.
  3. ಧಾನ್ಯಗಳು: ಫೈಬರ್, ವಿಟಮಿನ್ ಬಿ (ಫೋಲೇಟ್ ಮತ್ತು ಥಯಾಮಿನ್), ಮೆಗ್ನೀಸಿಯಮ್ ಮತ್ತು ಕಬ್ಬಿಣದಿಂದ ತುಂಬಿರುವ ಧಾನ್ಯಗಳ ಸೇವನೆಯು ಪಾರ್ಶ್ವವಾಯು ಸಾಧ್ಯತೆಯನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ಧಾನ್ಯದ ಬ್ರೆಡ್ ಮತ್ತು ಏಕದಳ, ಓಟ್​ಮಿಲ್ ಮತ್ತು ಕಂದು ಅಕ್ಕಿಯನ್ನು ಆಯ್ಕೆ ಮಾಡಲು ಶಿಫಾರಸು ಮಾಡಲಾಗಿದೆ. ಸಂಸ್ಕರಿಸಿದ ಬಿಳಿ ಬ್ರೆಡ್ ಬದಲಿಗೆ ಧಾನ್ಯದ ಬ್ರೆಡ್ ಸೇವನೆ ಉತ್ತಮವಾಗಿದೆ.
  4. ಕಡಿಮೆ ಕೊಬ್ಬಿನ ಡೈರಿ ಉತ್ಪನ್ನಗಳು: ಕೊಬ್ಬು ರಹಿತ ಹಾಲು, ಮೊಸರು ಟೈಪ್-2 ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  5. ಅಧಿಕ ಕೊಲೆಸ್ಟ್ರಾಲ್ ಆಹಾರದಿಂದ ದೂರವಿರಿ: ಬರ್ಗರ್, ಚೀಸ್ ಮತ್ತು ಐಸ್ ಕ್ರೀಂನಂತಹ ತ್ವರಿತ ಆಹಾರಗಳು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸಬಹುದು. ಹೀಗಾಗಿ ಇಂತಹ ಆಹಾರಗಳಿಂದ ಆದಷ್ಟು ದೂರವಿರಿ.

ಪಾರ್ಶ್ವವಾಯು ತಡೆಗಟ್ಟಲು ದೈಹಿಕ ಚಟುವಟಿಕೆಗಳು

  • ವಾರದಲ್ಲಿ ಕನಿಷ್ಠ ನಾಲ್ಕು ಬಾರಿ ಇಪ್ಪತ್ತು ನಿಮಿಷಗಳ ವೇಗದ ನಡಿಗೆಯನ್ನು ಅಭ್ಯಾಸ ಮಾಡಬೇಕು. ಹೀಗೆ ಮಾಡುವುದನ್ನು ಉತ್ತಮ ವ್ಯಾಯಾಮವೆಂದು ಪರಿಗಣಿಸಲಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ.
  • ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯವೂ ಉತ್ತಮವಾಗಿರುತ್ತದೆ.
  • ನಿಮ್ಮ ದೈನಂದಿನ ಜೀವನದಲ್ಲಿ ಸಕ್ರಿಯರಾಗಿರಿ. ಒಂದಷ್ಟು ದೂರದಲ್ಲಿ ಕೆಲಸ ಕಾರ್ಯಗಳು ಇದ್ದರೆ ವಾಹನಗಳ ಬದಲು ನಡೆದುಕೊಂಡ ಹೋಗಿ, ಮಹಡಿಗಳನ್ನು ಹತ್ತುವಾಗ ಲಿಫ್ಟ್ ಬದಲು ಮೆಟ್ಟಿಲುಗಳನ್ನೇ ಬಳಕೆ ಮಾಡಿ. ತೋಟಗಾರಿಕೆ ಮತ್ತು ಮನೆಗೆಲಸದಂತಹ ಸಣ್ಣ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ. ಇದು ನಿಮ್ಮ ಆರೋಗ್ಯಕ್ಕೂ ಉತ್ತಮ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ