AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Students’ Day 2025: ವಿದ್ಯಾರ್ಥಿ ಶಕ್ತಿ ದೇಶದ ಶಕ್ತಿ; ವಿಶ್ವ ವಿದ್ಯಾರ್ಥಿ ದಿನದ ಆಚರಣೆಯ ಹಿಂದಿನ ಉದ್ದೇಶವನ್ನು ತಿಳಿಯಿರಿ

ಪ್ರತಿ ವರ್ಷ ಅಕ್ಟೋಬರ್ 15 ರಂದು ವಿಶ್ವ ವಿದ್ಯಾರ್ಥಿ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಭಾರತದ ಮಾಜಿ ರಾಷ್ಟ್ರಪತಿ ಮತ್ತು ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಗೆ ಸಮರ್ಪಿಸಲಾಗಿದೆ. ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಅವರ ಮಹತ್ವದ ಕೊಡುಗೆಯನ್ನು ಗೌರವಿಸಲು ಅಕ್ಟೋಬರ್ 15 ರಂದು ಅವರ ಜನ್ಮದಿನದ ಸ್ಮರಣಾರ್ಥವಾಗಿ ವಿಶ್ವ ವಿದ್ಯಾರ್ಥಿಗಳ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಆಚರಣೆ ಯಾವಾಗ ಪ್ರಾರಂಭವಾಯಿತು ತಿಳಿಯಿರಿ.

World Students' Day 2025: ವಿದ್ಯಾರ್ಥಿ ಶಕ್ತಿ ದೇಶದ ಶಕ್ತಿ; ವಿಶ್ವ ವಿದ್ಯಾರ್ಥಿ ದಿನದ ಆಚರಣೆಯ ಹಿಂದಿನ ಉದ್ದೇಶವನ್ನು ತಿಳಿಯಿರಿ
ವಿಶ್ವ ವಿದ್ಯಾರ್ಥಿಗಳ ದಿನImage Credit source: Social Media
ಮಾಲಾಶ್ರೀ ಅಂಚನ್​
|

Updated on: Oct 15, 2025 | 9:41 AM

Share

ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವುದರ ಜೊತೆಗೆ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಹೌದು ಶಿಕ್ಷಣವು ವ್ಯಕ್ತಿಯ ಜೀವನ ಗುಣಮಟ್ಟವನ್ನು ಸುಧಾರಿಸುವುದು ಮಾತ್ರವಲ್ಲದೆ, ಆತನ  ಜ್ಞಾನ, ಕೌಶಲ್ಯ, ವ್ಯಕ್ತಿತ್ವವನ್ನು ಅಭಿವೃಧಿಪಡಿಸುತ್ತದೆ.  ಅಷ್ಟೇ ಅಲ್ಲದೇ ಶಿಕ್ಷಣವು ಯಾವುದೇ ಒಂದು ದೇಶ ಅಥವಾ ಸಮಾಜವನ್ನು ಉತ್ತಮವಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಅದೇ ರೀತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ (Dr. APJ Abdul Kalam) ಅವರು ಸಹ  ಶಿಕ್ಷಣವು ಒಬ್ಬ ವ್ಯಕ್ತಿಯನ್ನು ಮಾತ್ರವಲ್ಲದೆ ಇಡೀ ಸಮಾಜವನ್ನು ಪರಿವರ್ತಿಸುವ ಮಾಂತ್ರಿಕ ಶಕ್ತಿ ಎಂದು ನಂಬಿದ್ದವರು. ಜೊತೆಗೆ ವಿದ್ಯಾರ್ಥಿಗಳು ದೇಶದ ಭವಿಷ್ಯ ಎಂದು ನಂಬಿದ್ದ ಅವರು ಶಿಕ್ಷಣವನ್ನು ಉತ್ತೇಜಿಸುವಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಹಲವು ಸುಧಾರಣೆಗಳನ್ನು ಮಾಡುವಲ್ಲಿ ಹಾಗೂ ತಮ್ಮ ಸ್ಪೂರ್ತಿದಾಯಕ ಮಾತಿನ ಮೂಲಕ ಅದೆಷ್ಟೋ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ತರ ಕೊಡುಗೆಯನ್ನು ನೀಡಿದ್ದಾರೆ. ಅಲ್ಲದೆ ಕಲಾಂ ತಮ್ಮ ಇಡೀ ಜೀವನವನ್ನು ಶಿಕ್ಷಣ ಮತ್ತು ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟರು. ಈ ನಿಟ್ಟಿನಲ್ಲಿ ಕಲಾಂ ಅವರ ಜನ್ಮ ದಿನದ ಸವಿ ನೆನಪಿಗಾಗಿ ಪ್ರತಿವರ್ಷ ಅಕ್ಟೋಬರ್‌ 15 ರಂದು ವಿಶ್ವ ವಿದ್ಯಾರ್ಥಿಗಳ (World Students’ Day) ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ವಿದ್ಯಾರ್ಥಿಗಳ ದಿನದ ಇತಿಹಾಸವೇನು?

ಡಾ. ಕಲಾಂ ಒಬ್ಬ ವಿಜ್ಞಾನಿ ಮತ್ತು ಭಾರತದ ಮಿಸೈಲ್ ಮ್ಯಾನ್  ಮಾತ್ರವಲ್ಲದೆ, ಯುವಜನರು ದೊಡ್ಡ ಕನಸು ಕಾಣಲು ಮತ್ತು ಅವುಗ ಳನ್ನು ಸಾಧಿಸಲು ಯಾವಾಗಲೂ ಪ್ರೇರೇಪಿಸುವ ಶಿಕ್ಷಕರೂ ಆಗಿದ್ದರು. ಅವರ ಬೋಧನಾ ಪರಂಪರೆ ಮತ್ತು ಅವರು ಸ್ಥಾಪಿಸಿದ ಆದರ್ಶಗಳನ್ನು ಗೌರವಿಸಲು ವಿಶ್ವಸಂಸ್ಥೆಯು ಅಕ್ಟೋಬರ್ 15 ಅನ್ನು ವಿಶ್ವ ವಿದ್ಯಾರ್ಥಿ ದಿನವೆಂದು ಘೋಷಿಸಿತು. ಮೊದಲ ಬಾರಿಗೆ 2010 ರಲ್ಲಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ 79ನೇ ಜನ್ಮದಿನದಂದು  ವಿಶ್ವ ವಿದ್ಯಾರ್ಥಿಗಳ ದಿನವನ್ನು ಆಚರಿಸಲಾಯಿತು. ಶಿಕ್ಷಣ, ಪ್ರಪಂಚದಾದ್ಯಂತ ವಿದ್ಯಾರ್ಥಿಗಳ ಪ್ರಗತಿಗಾಗಿ ಅವರು ಮಾಡಿದ ಕಾರ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಅವರ  ಮಹತ್ವದ ಕೊಡುಗೆಯನ್ನು ಗೌರವಿಸಲು ವಿಶ್ವ ಸಂಸ್ಥೆಯು ಡಾ. ಎ.ಪಿ.ಜೆ ಅಬ್ದಲ್ ಕಲಾಂ ಅವರ ಜನ್ಮ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವನ್ನಾಗಿ  ಆಚರಿಸಲು ಘೋಷಿಸಿತು. ಅಂದಿನಿಂದ ಪ್ರತಿವರ್ಷ ಅಕ್ಟೋಬರ್ 15 ರಂದು ವಿಶ್ವ ವಿದ್ಯಾರ್ಥಿಗಳ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಮನೆ, ಮನ ಬೆಳಗುವ ಹೆಣ್ಣು ಸಮಾಜದ ಕಣ್ಣು; ಹೆಣ್ಣು ಮಕ್ಕಳ ಬಗ್ಗೆ ತಾತ್ಸಾರ ಸಲ್ಲದು

ಇದನ್ನೂ ಓದಿ
Image
ಮನೆ, ಮನ ಬೆಳಗುವ ಹೆಣ್ಣು ಸಮಾಜದ ಕಣ್ಣು
Image
ಡಿಜಿಟಲ್‌ ಯುಗದಲ್ಲೂ ವಿಶ್ವಾಸಾರ್ಹ ಸೇವೆಯನ್ನು ನೀಡುತ್ತಿರುವ ಅಂಚೆ
Image
ದೇಶದ ಶೌರ್ಯದ ಸಂಕೇತ ವಾಯುಪಡೆ
Image
ರೈತರ ಬದುಕಿನ ಬಿಳಿ ಬಂಗಾರ ಈ ಹತ್ತಿ

ವಿಶ್ವ ವಿದ್ಯಾರ್ಥಿಗಳ ದಿನದ ಮಹತ್ವವೇನು?

  • ಈ ದಿನವು ವಿದ್ಯಾರ್ಥಿಗಳು ದೇಶದ ಭವಿಷ್ಯ ಎಂದು ನಮಗೆ ನೆನಪಿಸುತ್ತದೆ.
  • ಸರಿಯಾದ ಅವಕಾಶಗಳನ್ನು ನೀಡಿದರೆ, ವಿದ್ಯಾರ್ಥಿಗಳು ವಿಶ್ವವನ್ನು ಬದಲಾಯಿಸುವವರಾಗಬಹುದು. ಆದ್ದರಿಂದ, ಈ ದಿನವು ಶಿಕ್ಷಣವು ಪ್ರತಿಯೊಬ್ಬರ ಹಕ್ಕು ಮತ್ತು ಎಲ್ಲರಿಗೂ ಸಮಾನ ಶೈಕ್ಷಣಿಕ ಅವಕಾಶಗಳನ್ನು ಒದಗಿಸಬೇಕು ಎಂಬುದನ್ನು ನೆನಪಿಸುತ್ತದೆ.
  • ಸಮಾನ ಶೈಕ್ಷಣಿಕ ಅವಕಾಶಗಳನ್ನು ಉತ್ತೇಜಿಸುವುದು, ನಾವೀನ್ಯತೆಯ ಮನೋಭಾವವನ್ನು ಪ್ರೋತ್ಸಾಹಿಸುವುದು ಮತ್ತು ವಿದ್ಯಾರ್ಥಿಗಳ ಕೊಡುಗೆಗಳನ್ನು ಗುರುತಿಸುವುದು ವಿಶ್ವ ವಿದ್ಯಾರ್ಥಿ ದಿನದ ಉದ್ದೇಶವಾಗಿದೆ.
  • ಅಲ್ಲದೆ ಶಿಕ್ಷಣವು ವ್ಯಕ್ತಿಗಳನ್ನು ಮಾತ್ರವಲ್ಲದೆ ಇಡೀ ಸಮಾಜಗಳನ್ನು ಪರಿವರ್ತಿಸುತ್ತದೆ ಎಂಬ ಡಾ. ಕಲಾಂ ಅವರ ನಂಬಿಕೆಯನ್ನು ಈ ದಿನ ಸ್ಮರಿಸುತ್ತದೆ.
  • ಈ ದಿನದಂದು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಮಹತ್ವದ ಪಾತ್ರ, ಸಾಧನೆಗಳು ಮತ್ತು ವಿದ್ಯಾರ್ಥಿಗಳಿಗೆ ಅವರು ನೀಡಿದ ಸ್ಫೂರ್ತಿಯನ್ನು ಈ ದಿನದಂದು ಸ್ಮರಿಸಲಾಗುತ್ತದೆ.
  • ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಶಾಲಾ ಕಾಲೇಜುಗಳಲ್ಲಿ ವಿವಿಧ ಚಟುವಟಿಕೆಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ.ಈ ದಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಶಿಕ್ಷಣದ ಮಹತ್ವವನ್ನು ಸಾರಲಾಗುತ್ತದೆ. ಅಲ್ಲದೆ ಮಕ್ಕಳಿಗೆ ಡಾ. ಕಲಾಂ ಅವರ ಜೀವನ ಮತ್ತು ಸಾಧನೆಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ