World Suicide Prevention Day 2024 : ಆತ್ಮಹತ್ಯೆ ಮಾಡಿಕೊಂಡವರಲ್ಲಿ ಮಹಿಳೆಯರಿಗಿಂತ ಪುರುಷರೇ ಅಧಿಕ: ಅಂಕಿಅಂಶದಿಂದ ಬಹಿರಂಗ

ಇತ್ತೀಚೆಗಿನ ದಿನಗಳಲ್ಲಿ ಸಾಮಾನ್ಯನಿಂದ ಹಿಡಿದು ಸೆಲೆಬ್ರಿಟಿವರೆಗೂ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿದೆ. ಆದರೆ ಇಂತಹ ವ್ಯಕ್ತಿಗಳಿಗೆ ಮಾನಸಿಕವಾಗಿ ಆತ್ಮಸ್ಥೈರ್ಯ ತುಂಬುವ ಕೆಲಸ ನಮ್ಮ ನಿಮ್ಮೆಲ್ಲರಿಂದಲೂ ಆಗಬೇಕಿದೆ. ಹೀಗಾಗಿ ಈ ಆತ್ಮಹತ್ಯೆ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಬೇಕೆಂಬ ಉದ್ದೇಶದಿಂದ ಪ್ರತೀವರ್ಷ ಸೆ.10ರಂದು ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಗುತ್ತದೆ. ಆದರೆ ಇದೀಗ ಉಳಿದವರಿಗೆ ಹೋಲಿಕೆ ಮಾಡಿದರೆ ಮದುವೆಯಾದ ಪುರುಷರು ಆತ್ಮಹತ್ಯೆ ಮಾಡಿಕೊಳ್ಳುವ ಸಂಖ್ಯೆಯೂ ಹೆಚ್ಚಾಗಿದೆ ಎನ್ನಲಾಗಿದೆ.

World Suicide Prevention Day 2024 : ಆತ್ಮಹತ್ಯೆ ಮಾಡಿಕೊಂಡವರಲ್ಲಿ ಮಹಿಳೆಯರಿಗಿಂತ ಪುರುಷರೇ ಅಧಿಕ: ಅಂಕಿಅಂಶದಿಂದ ಬಹಿರಂಗ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 10, 2024 | 11:33 AM

ಇತ್ತೀಚೆಗಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದೆ. ಕೆಲವರು ಸಣ್ಣಪುಟ್ಟ ಸಮಸ್ಯೆಗಳಿಗೂ ಆತ್ಮಹತ್ಯೆಯೊಂದೇ ಪರಿಹಾರವೆಂದು ಕೊಂಡಿದ್ದಾರೆ. ಕೌಟುಂಬಿಕ ಕಲಹ, ಪ್ರೇಮ ವೈಫಲ್ಯ, ಮಾನಸಿಕ ಒತ್ತಡ, ಆರ್ಥಿಕ ಸಮಸ್ಯೆಗಳು ಹೀಗೆ ನೂರಾರು ಸಮಸ್ಯೆಗಳಿದ್ದರೂ ಆತ್ಮಹತ್ಯೆಯೊಂದೇ ಪರಿಹಾರವಲ್ಲ. ಆದರೆ, ಪ್ರತಿ 40 ಸೆಕೆಂಡಿಗೆ ಒಬ್ಬ ವ್ಯಕ್ತಿಯೂ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ ಎನ್ನುವುದು ಅಂಕಿ ಅಂಶದಿಂದ ಬಹಿರಂಗವಾಗಿದೆ. ಅದಲ್ಲದೇ, 2021 ರಲ್ಲಿ ಅಂಕಿ ಅಂಶದಲ್ಲಿ ಮಹಿಳೆಯರಿಗಿಂತ ವಿವಾಹಿತ ಪುರುಷರೇ ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ ಎನ್ನಲಾಗಿದೆ.

ಪರಸ್ ಜೈನ್ ಹೆಸರಿನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ 2021 ರಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಅಂಕಿಅಂಶವನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಪೋಸ್ಟ್ ನೊಂದಿಗೆ ದೇಶದಲ್ಲಿ ಅತೀ ಹೆಚ್ಚು ತೆರಿಗೆ ಪಾವತಿಸುವವರಲ್ಲಿ ಪುರುಷರಿದ್ದರೂ, ಪ್ರಸ್ತುತ ಬಜೆಟ್ ನಲ್ಲಿ ಅವರ ಕಲ್ಯಾಣ ಹಾಗೂ ಭದ್ರತೆಗಾಗಿ ಯಾವುದೇ ನಿರ್ದಿಷ್ಟ ಯೋಜನೆಗಳು ಮೀಸಲಾಗಿಡಲಿಲ್ಲ ಎನ್ನುವುದೇ ದುರದೃಷ್ಟಕರ ಎಂದು ಬರೆದುಕೊಂಡಿದ್ದಾರೆ.

2021 ರ ಅಂಕಿ ಅಂಶಗಳ ಪ್ರಕಾರವಾಗಿ 6.4 ಸೆಕೆಂಡಿಗೆ ಮದುವೆಯಾಗಿರುವ ಒಬ್ಬ ವ್ಯಕ್ತಿಯೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಹೀಗಾಗಿ ವಿವಾಹಿತ ಹಾಗೂ ಅವಿವಾಹಿತ ಮಹಿಳೆಯರಿಗೆ ಹೋಲಿಕೆ ಮಾಡಿದರೆ ಹೆಚ್ಚಿನ ಸಂಖ್ಯೆಯಲ್ಲಿ ಪುರುಷರೇ ವಿವಿಧ ಕಾರಣಗಳಿಂದ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆಯಂತಹ ದಾರಿ ಹಿಡಿಯುತ್ತಿದ್ದಾರೆ ಎನ್ನುವುದು ತಿಳಿದು ಬಂದಿದೆ.

2021 ರ ಅಂಕಿ ಅಂಶದಲ್ಲಿರುವ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವಿವಾಹಿತ ಮಹಿಳೆಯರಿಗಿಂತ ಅವಿವಾಹಿತ ಪುರುಷರ ಸಂಖ್ಯೆಯೇ ಹೆಚ್ಚಾಗಿದೆ. ಈಗಾಗಲೇ 2021 ರಲ್ಲಿ ಆತ್ಮಹತ್ಯೆಗೆ ಶರಣಾದ ಅವಿವಾಹಿತ ಮಹಿಳೆಯರ ಸಂಖ್ಯೆ 12,095 ವಿದ್ದರೆ, 27,305 ಕ್ಕೂ ಅಧಿಕ ಅವಿವಾಹಿತ ಪುರುಷರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದನ್ನು ಅಂಕಿಅಂಶದಲ್ಲಿ ನೋಡಬಹುದು.

ಇದನ್ನೂ ಓದಿ: ಆತ್ಮಹತ್ಯೆಯಂತಹ ಕೆಟ್ಟ ಆಲೋಚನೆಯಿಂದ ಮಕ್ಕಳನ್ನು ರಕ್ಷಿಸುವುದು ಹೇಗೆ?

ಇನ್ನು ಉಳಿದಂತೆ ಈ ಅಂಕಿಅಂಶದ ಪ್ರಕಾರವಾಗಿ ಆತ್ಮಹತ್ಯೆಯ ಮಾಡಿಕೊಂಡಿರುವ ವಿವಾಹಿತ ಪುರುಷರ ಸಂಖ್ಯೆಯೂ 81,063 ರಷ್ಟಿದ್ದು, ವಿವಾಹಿತ ಮಹಿಳೆಯರ ಸಂಖ್ಯೆ 28,680 ರಷ್ಟು ಇದೆ. ಅದರೊಂದಿಗೆ ಡೈವೋರ್ಸ್ ಸೇರಿದಂತೆ ಇನ್ನಿತ್ತರ ಕಾರಣಗಳಿಂದಲೂ ಜೀವವನ್ನು ಕಳೆದುಕೊಂಡಿದ್ದಾರೆ ಎನ್ನುವುದು ಅಂಕಿಅಂಶದಿಂದ ಬಹಿರಂಗವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು