AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Suicide Prevention Day 2025: ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ, ಈಸಬೇಕು ಇದ್ದು ಜಯಿಸಬೇಕು

ಸಮಸ್ಯೆಗಳು ಬಂದಾಗ ಅದನ್ನು ಸರಿಯಾದ ರೀತಿಯಲ್ಲಿ ಎದುರಿಸಲಾಗದೆ ಖಿನ್ನತೆಗೆ ಒಳಗಾಗಿಯೋ ಅಥವಾ ಅಥವಾ ದುಡುಕಿಯೋ ಆತ್ಮಹತ್ಯೆಗೆ ಯತ್ನಿಸುವ ಬಹಳ ಮಂದಿ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಆತ್ಮಹತ್ಯೆ ಎನ್ನುವಂತಹದ್ದು ಜಾಗತಿಕ ಮಟ್ಟದಲ್ಲಿ ಗಂಭೀರ ಸಮಸ್ಯೆಯಾಗಿ ಪರಿಗಣಿಸಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಹಾಗೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುವವರ ಮನಃ ಪರಿವರ್ತನೆ ಮಾಡಲು, ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್‌ 10 ರಂದು ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಗುತ್ತದೆ.

World Suicide Prevention Day 2025: ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ, ಈಸಬೇಕು ಇದ್ದು ಜಯಿಸಬೇಕು
ವಿಶ್ವ ಆತ್ಮಹತ್ಯೆ ತಡೆ ದಿನImage Credit source: Getty Images
ಮಾಲಾಶ್ರೀ ಅಂಚನ್​
|

Updated on: Sep 10, 2025 | 9:24 AM

Share

ಜೀವನ (Life) ಎನ್ನುವಂತಹದ್ದು ತುಂಬಾನೇ ಅಮೂಲ್ಯವಾವದ್ದು, ಇಂತಹ ಶ್ರೇಷ್ಠ ಮಾನವ ಜೀವನದಲ್ಲಿ ನೋವು-ನಲಿವು, ಸುಖ-ದುಃಖ, ಕಷ್ಟ ಕಾರ್ಪಣ್ಯ ಎಲ್ಲವೂ ಇದ್ದೇ ಇರುತ್ತದೆ. ಆದರೆ ಅನೇಕರು ಕಷ್ಟ ಬಂತೆಂದು ಅದನ್ನು ಎದುರಿಸಲಾಗದೆ, ಇದ್ದು ಜಯಿಸಲಾಗದೆ ತಮ್ಮ ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವೆಂದು, ದುಡುಕಿ ತಮ್ಮ ಅಮೂಲ್ಯವಾದ ಜೀವವನ್ನೇ ಕಳೆದುಕೊಳ್ಳುತ್ತಾರೆ. ಇದೊಂದು ಗಂಭೀರ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ, ಹಾಗೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುವವರ ಮನಃ ಪರಿವರ್ತನೆ ಮಾಡಲು, ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು  ಜಾಗತಿಕವಾಗಿ ಸೆಪ್ಟೆಂಬರ್‌ 10 ರಂದು ವಿಶ್ವ ಆತ್ಮಹತ್ಯೆ ತಡೆ (World Suicide Prevention Day) ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಹಿನ್ನೆಲೆ ಮತ್ತು ಮಹತ್ವದ ಕುರಿತ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ವಿಶ್ವ ಆತ್ಮಹತ್ಯೆ ತಡೆ ದಿನದ ಇತಿಹಾಸ:

ಇಂಟರ್‌ ನ್ಯಾಷನಲ್‌ ಅಸೋಸಿಯೇಷನ್‌ ಫಾರ್‌ ಸುಸೈಡ್‌ ಪ್ರಿವೆನ್ಷನ್‌ (IASP) ಎಂಬ ಸಂಸ್ಥೆ 2003 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಸಹಯೋಗದೊಂದಿಗೆ ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲು ಪ್ರಾರಂಭಿಸಿತು.  ಇದು ಜಾಗತಿಕ ಜಾಗೃತಿ ಅಭಿಯಾನವಾಗಿದ್ದು, ಆತ್ಮಹತ್ಯೆಯನ್ನು ತಡೆಗಟ್ಟಲು ಮತ್ತು ಆತ್ಮಹತ್ಯೆಗೆ ಯತ್ನಿಸುವವರ ಮನಃ ಪರಿವರ್ತನೆ ಮಾಡುವ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ. ಈ ಸಂಸ್ಥೆಗಳು ಆತ್ಮಹತ್ಯೆ ತಡೆ ಜಾಗೃತಿ ಕಾರ್ಯಕ್ರಮಗಳನ್ನು ಪ್ರಪಂಚದಾದ್ಯಂತ ನಡೆಸುತ್ತವೆ.

ವಿಶ್ವ ಆತ್ಮಹತ್ಯೆ ತಡೆ ದಿನದ ಉದ್ದೇಶ:

ಆತ್ಮಹತ್ಯೆ ಗಂಭೀರ ಜಾಗತಿಕ ಸಮಸ್ಯೆಯಾಗಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳು, ಒತ್ತಡ, ಒಂಟಿತನ, ಸಾಮಾಜಿಕ ಅಥವಾ ಆರ್ಥಿಕ ಒತ್ತಡಗಳು ಮುಂತಾದ ಹಲವು ಅಂಶಗಳಿಂದ ಜನ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಾರೆ. ಹಾಗಾಗಿ ಜನರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವುದು ಮತ್ತು ಮಾನಸಿಕ ಆರೋಗ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ.

ಇದನ್ನೂ ಓದಿ
Image
ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಉದ್ದೇಶವನ್ನು ತಿಳಿಯಿರಿ
Image
ಶಿಕ್ಷಕರ ದಿನದ ಆಚರಣೆಯ ಹಿನ್ನೆಲೆಯ ಬಗ್ಗೆ ತಿಳಿಯಿರಿ
Image
ತೆಂಗು ದಿನದ ಆಚರಣೆಯ ಹಿನ್ನೆಲೆ, ಮಹತ್ವದ ಬಗ್ಗೆ ನಿಮ್ಗೊತ್ತಾ?
Image
ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಇತಿಹಾಸ, ಮಹತ್ವ ತಿಳಿಯಿರಿ

ಇದನ್ನೂ ಓದಿ: ಸಾಕ್ಷರತೆಯಿಂದ ದೇಶದ ಅಭಿವೃದ್ಧಿ ಸಾಧ್ಯ; ಸಾಕ್ಷರತಾ ದಿನಾಚರಣೆಯ ಉದ್ದೇಶವನ್ನು ತಿಳಿಯಿರಿ

ಆತ್ಮಹತ್ಯೆ ಪ್ರಕರಣಗಳನ್ನು  ಹೇಗೆ ತಡೆಯಬಹುದು?

  • ಮಾನಸಿಕ ಆರೋಗ್ಯ ಸೇವೆಗಳನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡುವುದು, ಜಾಗೃತಿ ಅಭಿಯಾನಗಳನ್ನು ನಡೆಸುವುದು
  • ಪ್ರೀತಿಪಾತ್ರರ ನಡವಳಿಕೆಯಲ್ಲಿನ ಬದಲಾವಣೆಗಳಿಗೆ ಗಮನ ಕೊಡಿ, ಮಾತನಾಡಿ, ಅವರಿಗೆ ಭಾವನಾತ್ಮಕ ಬೆಂಬಲವನ್ನು ನೀಡಿ
  • ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಮತ್ತು ಸಮಾಲೋಚನೆ ಸೇವೆಗಳನ್ನು ಒದಗಿಸುವುದು.
  • ದೈಹಿಕ ಚಟುವಟಿಕೆ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವುದರಿಂದ ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಮತ್ತು ಆತ್ಮಹತ್ಯೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ