AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Thinking Day 2025 : ವಿಶ್ವ ಚಿಂತನಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ

ಜಗತ್ತಿನಾದ್ಯಂತ ಫೆಬ್ರವರಿ 22ರಂದು ವಿಶ್ವ ಚಿಂತನಾ ದಿನ ಅಥವಾ ಥಿಂಕಿಂಗ್ ಡೇ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಗರ್ಲ್ ಗೈಡ್ ಮತ್ತು ಗರ್ಲ್ ಸ್ಕೌಟ್ ದಿನ ಎಂದೂ ಕರೆಯಲಾಗುತ್ತದೆ. ಈ ದಿನ ಸ್ಕೌಟಿಂಗ್ ಮತ್ತು ಗೈಡಿಂಗ್ ನ ಸ್ಥಾಪಕರಾದ ಲಾರ್ಡ್ ರಾಬರ್ಟ್ ಬೇಡನ್ ಪೊವೆಲ್ ಮತ್ತು ಅವರ ಪತ್ನಿ ಮತ್ತು ವಿಶ್ವ ಮುಖ್ಯ ಮಾರ್ಗದರ್ಶಿ ಲೇಡಿ ಓಲೇವ್ ಬೇಡನ್ ಪೊವೆಲ್ ಅವರ ಜನ್ಮದಿನ ಕೂಡ ಆಗಿದೆ. ಹಾಗಾದ್ರೆ ಈ ವಿಶ್ವ ಚಿಂತನಾ ದಿನದ ಆಚರಣೆಯೂ ಶುರುವಾದದ್ದು ಯಾವಾಗ? ಈ ದಿನದ ಇತಿಹಾಸ ಹಾಗೂ ಮಹತ್ವವೇನು? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

World Thinking Day 2025 : ವಿಶ್ವ ಚಿಂತನಾ ದಿನವನ್ನು ಏಕೆ ಆಚರಿಸಲಾಗುತ್ತದೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 21, 2025 | 5:20 PM

ಮನುಷ್ಯನ ಜೀವನವು ಒಂದೇ ಕಡೆ ತಟಸ್ಥವಾಗಿರಬಾರದು, ಸದಾ ಹರಿಯುತ್ತಿರಬೇಕು. ಸಕಾರಾತ್ಮಕ ಆಲೋಚನೆಗಳೊಂದಿಗೆ ಉತ್ತಮ ನಿರ್ಧಾರಗಳನ್ನು ಕೈಗೊಳ್ಳಬೇಕು. ಹೊಸ ಹೊಸ ಯೋಚನೆಗಳಿಂದ ಯೋಜನೆಗಳನ್ನು ರೂಪಿಸಿಕೊಂಡರೆ ಮಾತ್ರ ಯಶಸ್ವಿಯಾಗಲು ಸಾಧ್ಯ. ಹೀಗಾಗಿ ಜೀವನದಲ್ಲಿ ಯಾವುದೇ ಸಂದರ್ಭದಲ್ಲಿಯಾದರೂ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ. ಚಿಂತನೆಯ ಮಹತ್ವ ಅರಿತುಕೊಂಡೆ ಅದಕ್ಕಾಗಿ ಒಂದು ದಿನವನ್ನು ಮೀಸಲಾಗಿಡಲಾಗಿದ್ದು, ಅದುವೇ ವಿಶ್ವ ಚಿಂತನಾ ದಿನ. ಎಲ್ಲಾ ಮಹಿಳೆಯರನ್ನು ಪ್ರೋತ್ಸಾಹಿಸಿ, ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುವ ದಿನ ಇದಾಗಿದೆ. ಪ್ರತಿ ವರ್ಷ ಫೆಬ್ರವರಿ 22 ರಂದು ವಿಶ್ವ ಚಿಂತನಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಚಿಂತನಾ ದಿನದ ಇತಿಹಾಸ

1926 ರಲ್ಲಿ ನಡೆದ ನಾಲ್ಕನೇ ಗರ್ಲ್ ಸ್ಕೌಟ್ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಈ ವಿಶ್ವ ಚಿಂತನಾ ದಿನದ ಕುರಿತು ಪ್ರಸ್ತಾನೆ ಮಾಡಲಾಯಿತು. ಫೆಬ್ರವರಿ 22 ರಂದು ಚಿಂತನಾ ದಿನವನ್ನು ಆಚರಿಸಲು ಒಪ್ಪಿಗೆ ದೊರೆಯಿತು. ಹೀಗಾಗಿ ವರ್ಲ್ಡ್ ಅಸೋಸಿಯೇಷನ್ ​​ಆಫ್ ಗರ್ಲ್ ಗೈಡ್ಸ್ ಮತ್ತು ಗರ್ಲ್ ಸ್ಕೌಟ್ಸ್ (WAGGGS) ಪ್ರತಿ ವರ್ಷ ಫೆಬ್ರವರಿ 22 ರಂದು ವಿಶ್ವ ಚಿಂತನಾ ದಿನವನ್ನು ಆಚರಿಸಲಾಗುತ್ತದೆ. ಬಾಯ್ ಸ್ಕೌಟ್ಸ್ ಆಫ್ ಅಮೇರಿಕಾವನ್ನು ಸ್ಥಾಪಿಸಿದ ರಾಬರ್ಟ್ ಬೇಡೆನ್-ಪೊವೆಲ್ ಅವರ ಜನ್ಮದಿನ ಕೂಡ ಹೌದು. ಅವರ ಜನ್ಮದಿನವನ್ನು ನೆನಪಿಸುವ ಮೂಲಕ ವಿಶ್ವ ಚಿಂತನಾ ದಿನ ಮತ್ತು ವಿಶ್ವ ಸ್ಕೌಟ್ ದಿನವನ್ನಾಗಿ ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಮನೆ ಮೇಲಿರುವ ನೀರಿನ ಟ್ಯಾಂಕ್ ಸ್ಪಚ್ಛಗೊಳಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ವಿಶ್ವ ಚಿಂತನಾ ದಿನದ ಮಹತ್ವ

ವಿಶ್ವ ಚಿಂತನಾ ದಿನವು ಮಹಿಳೆಯರು ಹಾಗೂ ಹುಡುಗಿಯರಿಗೆ ತಮ್ಮ ಆಲೋಚನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು, ಆದ್ಯತೆಯ ವಿಷಯಗಳ ಕುರಿತು ಚರ್ಚೆಗಳಲ್ಲಿ ಭಾಗವಹಿಸಲು ಹಾಗೂ ಜಾಗತಿಕ ಪರಿಹಾರಗಳನ್ನು ನೀಡಲು ವೇದಿಕೆಯನ್ನು ಒದಗಿಸುವುದೇ ಈ ದಿನದ ಉದ್ದೇಶವಾಗಿದೆ. ಅದಲ್ಲದೇ, ಗರ್ಲ್ ಸ್ಕೌಟ್‌ಗಳಲ್ಲಿ ಸಹೋದರತ್ವದ ಮಹತ್ವವನ್ನು ಎತ್ತಿ ತೋರಿಸುವ ಸಲುವಾಗಿ ಈ ದಿನ ಮಹತ್ವದ್ದಾಗಿದೆ. ಈ ದಿನದಂದು ಬಾಲಕಿಯರ ಸ್ಕೌಟ್ಸ್ ಮತ್ತು ಗರ್ಲ್ ಗೈಡ್‌ಗಳು ಮಹತ್ವದ ಬಗ್ಗೆ ತಿಳಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಈ ದಿನ ಸ್ಕೌಟ್ ಮತ್ತು ಗೈಡ್‌ಗಾಗಿ ನಿಧಿ ಸಂಗ್ರಹಣೆ ಮಾಡಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್