AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Travel and Tourism Festival 2025: ಭಾರತೀಯ ಪ್ರವಾಸೋದ್ಯಮಕ್ಕೆ ಟಿವಿ9 ನೀಡಿದ ಕೊಡುಗೆ ಅಪಾರ: ಸಂಸದ ಮಹೇಶ್ ಶರ್ಮಾ

ಟಿವಿ9 ನೆಟ್‌ವರ್ಕ್ ಹಾಗೂ ರೆಡ್ ಹ್ಯಾಟ್ ಕಮ್ಯುನಿಕೇಷನ್ಸ್ ಜಂಟಿಯಾಗಿ ವರ್ಲ್ಡ್ ಟ್ರಾವೆಲ್ ಅಂಡ್ ಟೂರಿಸಂ ಫೆಸ್ಟಿವಲ್ 2025 ಆಯೋಜಿಸಿದ್ದು, ಮೂರು ದಿನಗಳ ಕಾಲ ನಡೆಯುವ ಉತ್ಸವಕ್ಕೆ ಇಂದು ಚಾಲನೆ ದೊರೆತಿದೆ. ದೆಹಲಿಯ ಮೇಜರ್ ಧ್ಯಾನ್ ಚಂದ್ ಸ್ಟೇಡಿಯಂನಲ್ಲಿ ನಡೆಯುವ ಈ ಉತ್ಸವದಲ್ಲಿ ಭಾಗಿಯಾದ ಬಿಜೆಪಿ ಸಂಸದ ಮಹೇಶ್ ಶರ್ಮಾ, ವಿಶ್ವ ಪ್ರಯಾಣ ಮತ್ತು ಪ್ರವಾಸೋದ್ಯಮ ಉತ್ಸವ'ವನ್ನು ಶ್ಲಾಘಿಸಿದ್ದು, ಭಾರತದ ಶ್ರೀಮಂತ ಸಂಸ್ಕೃತಿಯನ್ನು ಉತ್ತೇಜಿಸುವಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಿದೆ ಎಂದಿದ್ದಾರೆ.

ಸಾಯಿನಂದಾ
| Edited By: |

Updated on:Feb 14, 2025 | 8:21 PM

Share

ಟಿವಿ9 ನೆಟ್‌ವರ್ಕ್ ಹಾಗೂ ರೆಡ್ ಹ್ಯಾಟ್ ಕಮ್ಯುನಿಕೇಷನ್ ಜಂಟಿಯಾಗಿ ಮೂರು ದಿನಗಳ ಕಾಲ ವರ್ಲ್ಡ್ ಟ್ರಾವೆಲ್ ಅಂಡ್ ಟೂರಿಸಂ ಫೆಸ್ಟಿವಲ್ 2025 (World Travel and Tourism Festival 2025) ಆಯೋಜಿಸಿದ್ದು, ಇಂದು ಚಾಲನೆ ದೊರೆತಿದೆ. ಈ ಉತ್ಸವವು ಫೆಬ್ರವರಿ 14 ರಿಂದ 16 ರವರೆಗೆ ಮೂರು ದಿನಗಳ ಕಾಲ ನವದೆಹಲಿಯ ಐಕಾನಿಕ್ ಮೇಜರ್ ಧ್ಯಾನ್‌ ಚಂದ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಇದರಲ್ಲಿ ಭಾಗಿಯಾದ ಬಿಜೆಪಿ ಸಂಸದ ಮಹೇಶ್ ಶರ್ಮಾ, ಪ್ರಯಾಣ ಮತ್ತು ಪ್ರವಾಸೋದ್ಯಮ ವಲಯದಲ್ಲಿ ಅಲೆಗಳನ್ನು ಸೃಷ್ಟಿಸುತ್ತಿದೆ. ಈ ಪ್ರತಿಷ್ಠಿತ ಕಾರ್ಯಕ್ರಮವು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಭೂ ಪ್ರದೇಶಗಳು ಸೌಂದರ್ಯ ಹಾಗೂ ಪ್ರಯಾಣ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಟಿವಿ9 ನ ಸಹಭಾಗಿತ್ವವನ್ನು ಶ್ಲಾಘಿಸಿದ್ದು, ವಿಶೇಷವಾಗಿ ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಇಂತಹ ಕಾರ್ಯಕ್ರಮಗಳು ಭಾರತದ ಪ್ರವಾಸೋದ್ಯಮವನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಬಿಜೆಪಿ ಸಂಸದ ಮಹೇಶ್ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಒಂದು ವಿಶೇಷ ದಿನ

ಭಾರತದ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಮಹತ್ವದ ಕೊಡುಗೆಗಳನ್ನು ಶ್ಲಾಘಿಸಿದ್ದು, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತದ ಪ್ರವಾಸೋದ್ಯಮ ಕ್ಷೇತ್ರವು ಜಾಗತಿಕ ಮನ್ನಣೆಯನ್ನು ಗಳಿಸಿದೆ, ಲಕ್ಷದ್ವೀಪದಂತಹ ತಾಣಗಳು ಈಗ ಮಾಲ್ಡೀವ್ಸ್‌ನಂತಹ ಅಂತಾರಾಷ್ಟ್ರೀಯ ತಾಣಗಳೊಂದಿಗೆ ಸ್ಪರ್ಧಿಸುತ್ತಿವೆ.

ಪ್ರಯಾಣ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ಗಮನಾರ್ಹವಾಗಿ ಸುಧಾರಿಸಿದ್ದು, 30 ಸ್ಥಾನಕ್ಕೆ ಏರಿಕೆ ಕಂಡಿದೆ. ಇದು ದೇಶದ ಹೆಚ್ಚುತ್ತಿರುವ ಜಾಗತಿಕ ಆಕರ್ಷಣೆಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿ: Safer Internet Day 2025: ಸುರಕ್ಷಿತ ಅಂತರ್ಜಾಲ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ

ಅದಲ್ಲದೇ, ಭಾರತದ ಆರ್ಥಿಕತೆಯಲ್ಲಿ ಪ್ರವಾಸೋದ್ಯಮದ ಪ್ರಮುಖ ಪಾತ್ರವನ್ನು ಒಪ್ಪಿಕೊಂಡರು, ಈ ವಲಯವು ಜಿಡಿಪಿಗೆ ಶೇಕಡಾ 6.8 ರಷ್ಟು ಕೊಡುಗೆ ನೀಡುತ್ತದೆ ಹಾಗೂ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಈ ಉತ್ಸವವು ಪ್ರಮುಖ ಪ್ರಯಾಣ ತಾಣವಾಗಿ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:18 pm, Fri, 14 February 25

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್