ಟಿವಿ9 ನೆಟ್‌ವರ್ಕ್ ಹಾಗೂ ರೆಡ್ ಹ್ಯಾಟ್ ಕಮ್ಯುನಿಕೇಷನ್ ಜಂಟಿಯಾಗಿ ಮೂರು ದಿನಗಳ ಕಾಲ ವರ್ಲ್ಡ್ ಟ್ರಾವೆಲ್ ಅಂಡ್ ಟೂರಿಸಂ ಫೆಸ್ಟಿವಲ್ 2025 (World Travel and Tourism Festival 2025) ಆಯೋಜಿಸಿದ್ದು, ಇಂದು ಚಾಲನೆ ದೊರೆತಿದೆ. ಈ ಉತ್ಸವವು ಫೆಬ್ರವರಿ 14 ರಿಂದ 16 ರವರೆಗೆ ಮೂರು ದಿನಗಳ ಕಾಲ ನವದೆಹಲಿಯ ಐಕಾನಿಕ್ ಮೇಜರ್ ಧ್ಯಾನ್ ಚಂದ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಇದರಲ್ಲಿ ಭಾಗಿಯಾದ ಬಿಜೆಪಿ ಸಂಸದ ಮಹೇಶ್ ಶರ್ಮಾ, ಪ್ರಯಾಣ ಮತ್ತು ಪ್ರವಾಸೋದ್ಯಮ ವಲಯದಲ್ಲಿ ಅಲೆಗಳನ್ನು ಸೃಷ್ಟಿಸುತ್ತಿದೆ. ಈ ಪ್ರತಿಷ್ಠಿತ ಕಾರ್ಯಕ್ರಮವು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಭೂ ಪ್ರದೇಶಗಳು ಸೌಂದರ್ಯ ಹಾಗೂ ಪ್ರಯಾಣ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಟಿವಿ9 ನ ಸಹಭಾಗಿತ್ವವನ್ನು ಶ್ಲಾಘಿಸಿದ್ದು, ವಿಶೇಷವಾಗಿ ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಇಂತಹ ಕಾರ್ಯಕ್ರಮಗಳು ಭಾರತದ ಪ್ರವಾಸೋದ್ಯಮವನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಬಿಜೆಪಿ ಸಂಸದ ಮಹೇಶ್ ಶರ್ಮಾ ತಿಳಿಸಿದ್ದಾರೆ.
ಇದನ್ನೂ ಓದಿ: ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಒಂದು ವಿಶೇಷ ದಿನ
ಭಾರತದ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಮಹತ್ವದ ಕೊಡುಗೆಗಳನ್ನು ಶ್ಲಾಘಿಸಿದ್ದು, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತದ ಪ್ರವಾಸೋದ್ಯಮ ಕ್ಷೇತ್ರವು ಜಾಗತಿಕ ಮನ್ನಣೆಯನ್ನು ಗಳಿಸಿದೆ, ಲಕ್ಷದ್ವೀಪದಂತಹ ತಾಣಗಳು ಈಗ ಮಾಲ್ಡೀವ್ಸ್‌ನಂತಹ ಅಂತಾರಾಷ್ಟ್ರೀಯ ತಾಣಗಳೊಂದಿಗೆ ಸ್ಪರ್ಧಿಸುತ್ತಿವೆ.
ಪ್ರಯಾಣ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ಗಮನಾರ್ಹವಾಗಿ ಸುಧಾರಿಸಿದ್ದು, 30 ಸ್ಥಾನಕ್ಕೆ ಏರಿಕೆ ಕಂಡಿದೆ. ಇದು ದೇಶದ ಹೆಚ್ಚುತ್ತಿರುವ ಜಾಗತಿಕ ಆಕರ್ಷಣೆಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.
ಇದನ್ನೂ ಓದಿ: Safer Internet Day 2025: ಸುರಕ್ಷಿತ ಅಂತರ್ಜಾಲ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ
ಅದಲ್ಲದೇ, ಭಾರತದ ಆರ್ಥಿಕತೆಯಲ್ಲಿ ಪ್ರವಾಸೋದ್ಯಮದ ಪ್ರಮುಖ ಪಾತ್ರವನ್ನು ಒಪ್ಪಿಕೊಂಡರು, ಈ ವಲಯವು ಜಿಡಿಪಿಗೆ ಶೇಕಡಾ 6.8 ರಷ್ಟು ಕೊಡುಗೆ ನೀಡುತ್ತದೆ ಹಾಗೂ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಈ ಉತ್ಸವವು ಪ್ರಮುಖ ಪ್ರಯಾಣ ತಾಣವಾಗಿ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:18 pm, Fri, 14 February 25