AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World water Day 2024: ಮಿತವಿರಲಿ ನೀರಿನ ಬಳಕೆ, ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಅಮೃತಕ್ಕೆ ಸಮಾನವಾದ ಈ ನೀರು ದಿನನಿತ್ಯದ ಬದುಕಿಗೆ ಅತ್ಯಗತ್ಯ. ಕುಡಿಯುವುದರಿಂದ ಹಿಡಿದು ದಿನನಿತ್ಯದ ಕೆಲಸಕಾರ್ಯಗಳಿಗೆ ನೀರು ಅಗತ್ಯವಾಗಿ ಬೇಕು. ನೀರಿಲ್ಲದೇ ಬದುಕುವುದನ್ನು ಊಹೆ ಮಾಡುವುದಕ್ಕೂ ಅಸಾಧ್ಯ. ಆದರೆ ಬೇಸಿಗೆಯೂ ಆರಂಭವಾಗುತ್ತಿದ್ದಂತೆ ಎಲ್ಲೆಡೆ ನೀರಿನ ಹಾಹಾಕಾರವು ಶುರುವಾಗುತ್ತದೆ. ಈ ಸಮಯದಲ್ಲಿ ಕುಡಿಯಲು ನೀರಿಲ್ಲದೆ ಒದ್ದಾಡುವವರು ಇದ್ದಾರೆ. ಈ ನೀರಿನ ಮಹತ್ವವನ್ನು ಸಾರುವ ಸಲುವಾಗಿ ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಜನರ ಜೀವನದ ಪ್ರಮುಖ ಅವಶ್ಯಕತೆಯಾಗಿರುವ ಜೀವ ಜಲ ದಿನ ಮಹತ್ವವೇನು ಎನ್ನುವುದರ ಮಾಹಿತಿಯು ಇಲ್ಲಿದೆ.

World water Day 2024: ಮಿತವಿರಲಿ ನೀರಿನ ಬಳಕೆ, ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ
ಸಾಯಿನಂದಾ
| Edited By: |

Updated on: Mar 20, 2024 | 5:52 PM

Share

ಈ ಪೃಥ್ವಿಯ ಮೇಲಿರುವ ಸಕಲ ಜೀವ ರಾಶಿಗಳಿಗೆ ಆಹಾರ ಹಾಗೂ ಗಾಳಿ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಈ ನೀರು ಕೂಡ. ಆದರೆ ಈ ಮನುಷ್ಯ ಆಹಾರವಿಲ್ಲದೇ ಹೋದರೂ ಬದುಕಬಹುದು. ಆದರೆ ನೀರಿಲ್ಲದೇ ಹೋದರೆ ಬದುಕಲು ಸಾಧ್ಯವಿಲ್ಲ. ಊಟ ತಿಂಡಿಯಿಲ್ಲದೇ ನೀರು ಕುಡಿದೇ ಎಷ್ಟೋ ವರ್ಷಗಳಿಂದ ಇರುವವರನ್ನು ನೋಡಿರಬಹುದು. ಭೂಮಿಯಲ್ಲಿರುವ ಸಕಲ ಜೀವ ರಾಶಿಗಳಿಗೆ ನೀರು ಅಗತ್ಯವಾಗಿ ಬೇಕು. ಆದರೆ ಮಾನವನ ಸ್ವಾರ್ಥದಿಂದ ಅದೆಷ್ಟೋ ಜಲಮೂಲಗಳು ಅಳಿವಿನಂಚಿನಲ್ಲಿದೆ. ಕಾಡಿನ ನಾಶದಿಂದ ಸರಿಯಾದ ಸಮಯಕ್ಕೆ ಮಳೆ ಬಾರದೆ ಹಳ್ಳ ಕೊಳ್ಳ ಸೇರಿದಂತೆ ನೀರಿನ ಮೂಲಗಳು ಬತ್ತಿ ಹೋಗಿವೆ. ಸಿಹಿ ನೀರಿನ ಮೂಲಗಳನ್ನು ಉಳಿಸಿ, ಮುಂದಿನ ಪೀಳಿಗೆಯವರಿಗೆ ಈ ಜಲವನ್ನು ನೀಡುವ ನಿಟ್ಟಿನಲ್ಲಿ ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿವೆ.

ವಿಶ್ವ ಜಲ ದಿನದ ಇತಿಹಾಸ:

ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನದ ಇತಿಹಾಸದ ಬಗ್ಗೆ ನೋಡುವುದಾದರೆ 1992ರಲ್ಲಿ ರಿಯೊ ಡಿ ಜನೈರೋದಲ್ಲಿ ನಡೆದ ವಿಶ್ವ ಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿಯ ಸಮ್ಮೇಳನದಲ್ಲಿ ಅಂತಾರಾಷ್ಟ್ರೀಯ ಸಿಹಿ ನೀರಿನ ದಿನವನ್ನು ಆಚರಿಸುವ ಬಗ್ಗೆ ಶಿಫಾರಸ್ಸು ಮಾಡಲಾಯಿತು. ಆದಾದ ಬಳಿಕ ಡಿಸೆಂಬರ್ 22ರಂದು ವಿಶ್ವಸಂಸ್ಥೆ ಸಂಸತ್ತಿನಲ್ಲಿ ಈ ನಿರ್ಣಯಕ್ಕೆ ಒಪ್ಪಿಗೆ ಸಿಕ್ಕಿತು. 1993 ಮಾರ್ಚ್‌ 22ರಂದು ಮೊದಲ ವಿಶ್ವ ಜಲ ದಿನವೆಂದು ಘೋಷಿಸಲಾಯಿತು. ಅಂದಿನಿಂದ ಪ್ರತಿ ವರ್ಷ ವಿಶ್ವ ಜಲದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಈ ದ್ವೀಪದಲ್ಲಿ ಬೆಕ್ಕುಗಳದ್ದೇ ಸಾಮ್ರಾಜ್ಯ, ಈ ದ್ವೀಪ ಕ್ಯಾಟ್ ಐಲ್ಯಾಂಡ್ ಆಗಿದ್ದು ಹೇಗೆ?

ವಿಶ್ವ ಜಲ ದಿನದ ಮಹತ್ವ:

ವಿಶ್ವ ಜಲ ದಿನವನ್ನು ಆಚರಿಸುವುದರ ಹಿಂದಿನ ಪ್ರಮುಖ ಉದ್ದೇಶವೇನೆಂದರೆ ಸಿಹಿನೀರಿನ ಮೂಲಗಳನ್ನು ಕಾಪಾಡುವ ಮೂಲಕ ಮುಂದಿನ ಪೀಳಿಗೆಯವರಿಗೆ ನೀರನ್ನು ಒದಗಿಸುವುದು. ಈ ದಿನದಂದು ಸಿಹಿ ನೀರಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಗಾಗಿ ಆಚರಿಸಲಾಗುತ್ತದೆ. ಹೀಗಾಗಿ ನೀರನ್ನು ಮಿತವಾಗಿ ಬಳಸಿ ನೀರಿನ ಮೂಲಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ. ಈ ದಿನದಂದು ವಿವಿಧ ಸಂಸ್ಥೆಗಳು, ಎನ್‌ಜಿಒಗಳು ಹಾಗೂ ಖಾಸಗಿ ಸಂಸ್ಥೆಗಳು ನೀರಿನ ಸಂರಕ್ಷಣೆಯ ಬಗ್ಗೆ ಮಾಹಿತಿ ಕಾರ್ಯಾಗಾರಗಳು ಹಾಗೂ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು