AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Water Day 2026: ನೀರನ್ನು ಮಿತವಾಗಿ ಬಳಸುವ ಮೂಲಕ ಜೀವಜಲವನ್ನು ಸಂರಕ್ಷಿಸೋಣ

ಭೂಮಿಯ ಮೇಲಿರುವ ಜೀವ ಸಂಕುಲಗಳಿಗೆ ಗಾಳಿ ಎಷ್ಟು ಮುಖ್ಯವೋ ನೀರು ಕೂಡ ಅಷ್ಟೇ ಮುಖ್ಯ. ನೀರಿಲ್ಲದೆ ಬದುಕನ್ನು ಕಲ್ಪಿಸಿಕೊಳ್ಳಲು ಸಹ ಸಾಧ್ಯವಿಲ್ಲ. ಆದರೆ ಇಂದು ಸಿಹಿ ನೀರಿನ ಮೂಲಗಳು ಕಲುಷಿತಗೊಳ್ಳುತ್ತಿವೆ, ಬತ್ತಿ ಹೋಗುತ್ತಿವೆ. ಹೆಚ್ಚುತ್ತಿರುವ ಈ ನೀರಿನ ಕೊರತೆಯು ಗಂಭೀರ ಕಳವಳಕಾರಿ ಸಂಗತಿಯಾಗಿದ್ದು, ಈ ನಿಟ್ಟಿನಲ್ಲಿ ಜಲಮೂಲವನ್ನು ಸಂರಕ್ಷಣೆ ಮಾಡಬೇಕು, ಭವಿಷ್ಯದ ಪೀಳಿಗೆಗಳಿಗಾಗಿ ಜೀವಜಲವನ್ನು ಕಾಪಾಡಬೇಕು ಎಂಬ ಉದ್ದೇಶದಿಂದ ಪ್ರತಿವರ್ಷ ಮಾರ್ಚ್‌ 22 ರಂದು ವಿಶ್ವ ಜಲ ದಿನವನ್ನು ಆಚರಿಸಲಾಗುತ್ತದೆ.

World Water Day 2026: ನೀರನ್ನು ಮಿತವಾಗಿ ಬಳಸುವ ಮೂಲಕ ಜೀವಜಲವನ್ನು ಸಂರಕ್ಷಿಸೋಣ
ವಿಶ್ವ ಜಲ ದಿನImage Credit source: png magic
ಮಾಲಾಶ್ರೀ ಅಂಚನ್​
|

Updated on: Mar 22, 2026 | 10:24 AM

Share

ನೀರು (Water) ಜೀವನದ ಅಡಿಪಾಯ.  ಭೂಮಿಯ ಮೇಲಿರುವ ಜೀವ ಸಂಕುಲಗಳ ಜೀವನವು ನೀರಿನ ಮೇಲೆಯೇ ಅವಲಂಬಿತವಾಗಿದೆ. ನೀರಿಲ್ಲದೆ ಬದುಕನ್ನು ಕಲ್ಪಿಸಿಕೊಳ್ಳಲು ಸಹ ಸಾಧ್ಯವಿಲ್ಲ.  ಹೌದು ನಮ್ಮ ದಿನನಿತ್ಯದ ಜೀವನ ಆರಂಭವಾಗುವುದೇ ನೀರಿನಿಂದ. ನಾಗರಿಕತೆಗಳು ಅಭಿವೃದ್ಧಿ ಹೊಂದಿರುವುದು ಸಹ ನೀರಿನ ಮೂಲಗಳ ಬಳಿ. ಹೀಗೆ ನೀರು ಜೀವನಕ್ಕೆ ಜನ್ಮ ನೀಡಿದ್ದು ಮಾತ್ರವಲ್ಲದೆ ಸಂಸ್ಕೃತಿ, ಆರ್ಥಿಕತೆ ಮತ್ತು ಸಮಾಜವನ್ನು ಸಹ ರೂಪಿಸಿತು. ಆದರೆ ಇಂದು ಇದೇ ನೀರಿನ ಮೂಲ ಮಾನವನ ಸ್ವಾರ್ಥದ ಕಾರಣದಿಂದಾಗಿ ಅಪಾಯದ ಅಂಚಿನಲ್ಲಿನಲ್ಲಿದೆ. ನದಿ, ಕೆರೆಗಳಂತಹ ಸಿಹಿ ನೀರಿನ ಮೂಲಗಳು ಕುಲುಷಿತಗೊಳ್ಳುತ್ತಿವೆ, ಬತ್ತಿ ಹೋಗುತ್ತಿವೆ, ಅಂತರ್ಜಲವು ಅತ್ಯಂತ ವೇಗವಾಗಿ ಕ್ಷೀಣಿಸುತ್ತಿದೆ. ಅಷ್ಟೇ ಅಲ್ಲದೆ ಪ್ರಪಂಚದ ಅನೇಕ ಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ ತೀವ್ರ ಕೊರತೆ ಕೂಡ ಎದುರಾಗುತ್ತಿವೆ. ನೀರಿನ ಈ ಗಂಭೀರ ಸಮಸ್ಯೆಯನ್ನು ಪರಿಗಣಿಸಿ, ಜಲಜೀವವನ್ನು ಭವಿಷ್ಯದ ಪೀಳಿಗೆಗಾಗಿ ಸಂರಕ್ಷಿಸಬೇಕು ಎನ್ನುವ ನಿಟ್ಟಿನಲ್ಲಿ ನೀರಿನ ಮಹತ್ವ, ಅದರ ಸಂರಕ್ಷಣೆ ಮತ್ತು ಶುದ್ಧ ನೀರಿನ ಲಭ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 22 ರಂದು ವಿಶ್ವ ಜಲ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಜಲ ದಿನದ ಇತಿಹಾಸವೇನು?

ವಿಶ್ವ ಜಲ ದಿನವನ್ನು 1992 ರಲ್ಲಿ ವಿಶ್ವಸಂಸ್ಥೆಯು ಪ್ರಾರಂಭಿಸಿತು. 1992 ರಲ್ಲಿ ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ ಭೂ ಶೃಂಗಸಭೆಯು ನೀರಿನ ಸಂರಕ್ಷಣೆಗಾಗಿ ಜಾಗತಿಕ ಉಪಕ್ರಮವನ್ನು ಪ್ರಾರಂಭಿಸಿತು. ಇದರ ನಂತರ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಮಾರ್ಚ್ 22 ರಂದು ವಿಶ್ವ ಜಲ ದಿನವನ್ನು ಆಚರಿಸುವುದಾಗಿ ಘೋಷಿಸಿತು. ಆನಂತರ ಪ್ರತಿವರ್ಷ ವಿಶ್ವ ಜಲ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ. ಈ ಜಾಗೃತಿ ದಿನ ನೀರು ಅಮೂಲ್ಯವಾದ ಸಂಪತ್ತು ಅದನ್ನು ಉಳಿಸಿ, ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂಬುದನ್ನು ನೆನಪಿಸುತ್ತದೆ.

ಇದನ್ನೂ ಓದಿ: ಹಸಿರೇ ಉಸಿರು… ಕಾಡನ್ನು ಬೆಳೆಸಿ ನಾಡನ್ನು ಉಳಿಸೋಣ

ವಿಶ್ವ ಜಲ ದಿನದ ಮಹತ್ವವೇನು?

  • ವಿಶ್ವ ಜಲ ದಿನವು ನೀರು ಕೇವಲ ಒಂದು ಸಂಪನ್ಮೂಲವಲ್ಲ, ನಮ್ಮ ಜೀವನದ ಅಡಿಪಾಯ ಎಂದು ನಮಗೆ ನೆನಪಿಸುತ್ತದೆ. ಭವಿಷ್ಯದ ಪೀಳಿಗೆಗೆ ಅದರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಅದನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬುದರ ಬಗ್ಗೆ ಈ ದಿನ ಜಾಗೃತಿ ಮೂಡಿಸಲಾಗುತ್ತದೆ.
  • ನೀರಿನ ಮಹತ್ವ, ಅದರ ಸಂರಕ್ಷಣೆ ಮತ್ತು ಶುದ್ಧ ನೀರಿನ ಲಭ್ಯತೆಯ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ ಜಲ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.
  • ಈ ದಿನದಂದು, ಶಾಲೆಗಳು, ಕಾಲೇಜುಗಳು ಮತ್ತು ವಿವಿಧ ಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ರ್ಯಾಲಿಗಳು ಮತ್ತು ಅಭಿಯಾನಗಳನ್ನು ಆಯೋಜಿಸಲಾಗುತ್ತದೆ. ನೀರನ್ನು ಸಂರಕ್ಷಿಸಲು, ಮಳೆನೀರನ್ನು ಕೊಯ್ಲು ಮಾಡಲು ಮತ್ತು ನೀರನ್ನು ವಿವೇಚನೆಯಿಂದ ಬಳಸಲು ಜನರನ್ನು ಪ್ರೋತ್ಸಾಹಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?