AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Youth Skills Day 2026: ವಿಶ್ವ ಯುವ ಕೌಶಲ್ಯ ದಿನದ ಇತಿಹಾಸ, ಮಹತ್ವ ತಿಳಿಯಿರಿ

ಶಿಕ್ಷಣ ಇದ್ದರೆ ಸಾಲದು, ಕೌಶಲ್ಯಗಳು ಅಗತ್ಯ. ಯುವ ಸಮುದಾಯಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ನೀಡುವುದರ ಜತೆಗೆ ಯುವಕ ಯುವತಿಯರು ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲಿ ಸಜ್ಜುಗೊಳಿಸುವುದೇ ಈ ವಿಶ್ವ ಯುವ ಕೌಶಲ್ಯ ದಿನ ಮೂಲ ಉದ್ದೇಶ. ಈ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶ್ವ ಯುವ ಕೌಶಲ್ಯ ದಿನವನ್ನು ಆಚರಿಸಲಾಗುತ್ತದೆ. ಈ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

World Youth Skills Day 2026: ವಿಶ್ವ ಯುವ ಕೌಶಲ್ಯ ದಿನದ ಇತಿಹಾಸ, ಮಹತ್ವ ತಿಳಿಯಿರಿ
ಸಾಂದರ್ಭಿಕ ಚಿತ್ರImage Credit source: Impresionante
ಸಾಯಿನಂದಾ
|

Updated on: Jul 15, 2026 | 10:05 AM

Share

ಇಂದಿನ ಯುವಜನತೆ ತಮ್ಮ ಜೀವನ ಶೈಲಿಯನ್ನು ಸಂಪೂರ್ಣವಾಗಿ ಬದಲಾಯಿಸಿಕೊಂಡಿದ್ದಾರೆ. ಸೇವಿಸುವ ಆಹಾರ, ಉಡುಗೆ ತೊಡುಗೆ ಸೇರಿದಂತೆ ಎಲ್ಲದರಲ್ಲೂ ಸಾಕಷ್ಟು ಬದಲಾವಣೆಯಾಗಿದೆ. ಶಿಕ್ಷಣದ ಜತೆಗೆ ವಿವಿಧ ಕೌಶಲ್ಯಗಳತ್ತ ಗಮನ ಹರಿಸುತ್ತಿದ್ದಾರೆ. ಪ್ರಸ್ತುತ ದಿನಗಳಲ್ಲಿ ಉದ್ಯೋಗ ಅನುಭವದ ಜತೆಗೆ ಕೌಶಲ್ಯಗಳು ಬಹಳ ಮುಖ್ಯ. ಹೀಗಾಗಿ ಯುವ ಜನತೆಯಲ್ಲಿ ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ವಿಶ್ವ ಯುವ ಕೌಶಲ್ಯ ದಿನ (World Youth Skills Day) ಮೀಸಲಿಡಲಾಗಿದೆ. ಪ್ರತಿ ವರ್ಷ ಜುಲೈ 15 ರಂದು ವಿಶ್ವ ಯುವ ಕೌಶಲ್ಯ ದಿನದ ಆಚರಣೆ ಚಾಲ್ತಿಯಲ್ಲಿದೆ.

ವಿಶ್ವ ಯುವ ಕೌಶಲ್ಯ ದಿನದ ಇತಿಹಾಸವೇನು?

ಶ್ರೀಲಂಕಾದ ಉಪಕ್ರಮದ ಮೇರೆಗೆ, ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 2014 ರಂದು ವಿಶ್ವ ಯುವ ಕೌಶಲ್ಯ ದಿನದ ಆಚರಣೆಯನ್ನು ಅಂಗೀಕರಿಸಿತು. ಹೀಗಾಗಿ 2015 ರ ಜುಲೈ 15 ರಂದು ಮೊದಲ ಬಾರಿಗೆ ವಿಶ್ವ ಕೌಶಲ್ಯ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಜುಲೈ 15 ರಂದು ಈ ದಿನದ ಆಚರಣೆ ಚಾಲ್ತಿಯಲ್ಲಿದೆ.

ಇದನ್ನೂ ಓದಿ: ವಿಶ್ವ ಪೇಪರ್‌ ಬ್ಯಾಗ್‌ ದಿನದ ಆಚರಣೆಯ ಇತಿಹಾಸ, ಮಹತ್ವದ ಸಂಪೂರ್ಣ ವಿವರ ಇಲ್ಲಿದೆ

ವಿಶ್ವ ಯುವ ಕೌಶಲ್ಯ ದಿನದ ಮಹತ್ವ, ಆಚರಣೆ ಹೇಗೆ?

ಯುವಕರಿಗೆ ಕೆಲಸ, ಉದ್ಯಮಶೀಲತೆ ಹಾಗೂ ಅಗತ್ಯವಾದ ಅಗತ್ಯವಾದ ಕೌಶಲ್ಯವನ್ನು ಒದಗಿಸಲು ಹಾಗೂ ಯುವಕರನ್ನು ಪ್ರೇರೆಪಿಸುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ. ಯುವಕರಲ್ಲಿ ಕೌಶಲ್ಯ ಅಭಿವೃದ್ಧಿ ಪಡಿಸಲು ಜಾಗೃತಿ ಕಾರ್ಯಕ್ರಮಗಳು, ಕಾರ್ಯಾಗಾರಗಳು, ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನ ಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್