World Zoonoses Day 2024: ಝೂನೋಸಸ್ ಕಾಯಿಲೆ ಎಂದರೇನು? ಈ ರೋಗಕ್ಕೆ ಯಾವ ಲಸಿಕೆ ಸೂಕ್ತ

ಜಾಗತಿಕ ಮಟ್ಟದಲ್ಲಿ ಪ್ರತಿ ವರ್ಷ ಜುಲೈ 6 ರಂದು ವಿಶ್ವ ಝೂನೋಸ್ ದಿನ ಅಥವಾ ವಿಶ್ವ ಪ್ರಾಣಿಜನ್ಯ ರೋಗ ದಿನವನ್ನು ಆಚರಿಸಲಾಗುತ್ತದೆ. ಝುನೋಟಿಕ್ ಕಾಯಿಲೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶವನ್ನು ಈ ದಿನವೂ ಹೊಂದಿದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

World Zoonoses Day 2024: ಝೂನೋಸಸ್ ಕಾಯಿಲೆ ಎಂದರೇನು? ಈ ರೋಗಕ್ಕೆ ಯಾವ ಲಸಿಕೆ ಸೂಕ್ತ
ವಿಶ್ವ ಝೂನೋಸಸ್ ದಿನ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 05, 2024 | 2:52 PM

ಝೂನೋಸಸ್ ಒಂದು ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಪ್ರಾಣಿಗಳಿಂದ ಮನುಷ್ಯರಿಗೆ ಬಹುಬೇಗನೇ ಹರಡುತ್ತವೆ. ಒಂದು ವೇಳೆ ಈ ಸೋಂಕಿತ ಪ್ರಾಣಿಯ ರಕ್ತ, ಮೂತ್ರ ಲೋಳೆ, ಮಲ ಅಥವಾ ದೇಹದ ಇತರ ದ್ರವಗಳೊಂದಿಗೆ ನೇರವಾಗಿ ಇಲ್ಲವಾದರೆ ಪರೋಕ್ಷವಾಗಿ ಸಂಪರ್ಕದಿಂದಾಗಿ ಕಾಯಿಲೆಯೂ ಹರಡುವ ಸಾಧ್ಯತೆಯಿದೆ. ರೇಬಿಸ್, ಎಬೋಲಾ, ಹಂದಿ ಜ್ವರ, ಫ್ಲೂ, ಹಕ್ಕಿ ಜ್ವರ ಇವೆಲ್ಲವೂ ಝೂನೋಟಿಕ್ ಕಾಯಿಲೆಗಳ ಸಾಲಿಗೆ ಸೇರುತ್ತದೆ. ಈ ರೋಗಗಳು ಬಾರದಂತೆ ತಡೆಗಟ್ಟಲು ಹಾಗೂ ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜುಲೈ 6 ರಂದು ವಿಶ್ವ ಝೂನೋಸಸ್ ದಿನ ಅಥವಾ ವಿಶ್ವ ಪ್ರಾಣಿ ಜನ್ಯ ರೋಗ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಝೂನೋಸಸ್ ದಿನದ ಇತಿಹಾಸ

ಪ್ರತಿ ವರ್ಷ ಜುಲೈ 6 ರಂದು, ಮೊದಲನೇ ಝೂನೋಟಿಕ್ ಕಾಯಿಲೆಯ ಲಸಿಕೆಯಾದ ‘ರೇಬಿಸ್ ಲಸಿಕೆಯ’ ಅಭಿವೃದ್ಧಿಯನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ. 1885 ರಲ್ಲಿ ಜೂಯಿಸ್ ಪಾಶ್ಚರ್ ಅವರು ಝೂನೋಟಿಕ್ ಕಾಯಿಲೆಯಾದ ರೇಬಿಸ್ ವಿರುದ್ಧ ಮೊದಲ ಲಸಿಕೆಯನ್ನು ಕಂಡುಹಿಡಿದ ದಿನವನ್ನು ನೆನಪಿಸುವ ದಿನವಾಗಿದೆ. 2007 ರಲ್ಲಿ ಈ ಲಸಿಕೆ ನೂರನೇ ವರ್ಷದ ವಾರ್ಷಿಕೋತ್ಸವದ ದಿನದಂದು ಮೊದಲ ವಿಶ್ವ ಝೂನೋಟಿಕ್ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ವಿಶ್ವ ಝೂನೋಸಸ್ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಆರೋಗ್ಯಕ್ಕೆ ಹಿತ ದೊಡ್ಡ ಪತ್ರೆ ಎಲೆಯ ಬಜ್ಜಿ, ರೆಸಿಪಿಯ ವಿಧಾನ ಇಲ್ಲಿದೆ

ವಿಶ್ವ ಝೂನೋಸಸ್ ದಿನದ ಮಹತ್ವ

ಝೂನೋಟಿಕ್ ಕಾಯಿಲೆಯ ಹರಡುವಿಕೆಯನ್ನು ತಡೆಗಟ್ಟಲು, ಈ ಕಾಯಿಲೆಯ ಬಗ್ಗೆ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಈ ದಿನವೂ ಮಹತ್ವಕಾರಿಯಾಗಿದೆ. ಈ ದಿನದಂದು ಸರ್ಕಾರ ಸೇರಿದಂತೆ ಸಂಘ ಸಂಸ್ಥೆಗಳು ರೋಗಗಳ ಕಾರಣಗಳು ಮತ್ತು ಅದನ್ನು ತಡೆಗಟ್ಟುವ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳು, ಅಭಿಯಾನಗಳನ್ನು ಆಯೋಜಿಸುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ