Year Ender 2024: ಈ ವರ್ಷ ಇಸ್ರೋ ಮಾಡಿದ ಮಹತ್ವದ ಸಾಧನೆಗಳಿವು

2024 ಕ್ಕೆ ವಿದಾಯ ಹೇಳುವ ಸಮಯ ಬಂದೆ ಬಿಟ್ಟಿದೆ. ಇದೀಗ ನಾವೆಲ್ಲರೂ ಈ ವರ್ಷದ ಕೊನೆಯ ತಿಂಗಳಿಗೆ ಕಾಲಿಟ್ಟಿದ್ದು, ಹೊಸ ವರ್ಷಕ್ಕೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಈಗಾಗಲೇ ಹೊಸ ವರ್ಷವನ್ನು ಭರ ಮಾಡಿಕೊಳ್ಳಲು ಸಾಕಷ್ಟು ಸಿದ್ಧತೆಗಳು ಆಗುತ್ತಲೇ ಇದೆ. ಆದರೆ ಈ ವರ್ಷ ಕೂಡ ಭಾರತೀಯ ಬಾಹ್ಯಾಕಾಶ ಸಂಸ್ಥೆ ಬಾಹ್ಯಾಕಾಶದಲ್ಲಿ ಈಗಾಗಲೇ ಸಾಕಷ್ಟು ಐತಿಹಾಸಿಕ ಸಾಧನೆಗಳನ್ನು ಮಾಡಿ ಭಾರತೀಯರು ಹೆಮ್ಮೆ ಪಡೆಯುವಂತೆ ಮಾಡಿದೆ. 2024 ರಲ್ಲಿ ಇಸ್ರೋ ಮಾಡಿದ ಸಾಧನೆಗಳೇನು? ಹಾಗೂ ಬಾಹ್ಯಾಕಾಶಕ್ಕೆ ಯಾವೆಲ್ಲಾ ಉಪಗ್ರಹಗಳನ್ನು ಉಡಾವಣೆ ಮಾಡುವಲ್ಲಿ ಯಶಸ್ವಿಯಾಗಿದೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Year Ender 2024: ಈ ವರ್ಷ ಇಸ್ರೋ ಮಾಡಿದ ಮಹತ್ವದ ಸಾಧನೆಗಳಿವು
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 18, 2024 | 10:47 AM

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಹೆಮ್ಮೆಯಾಗಿದೆ. ಕಳೆದ ವರ್ಷ ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್‌ ಸೇರಿದಂತೆ ಅನೇಕ ಮಹತ್ವದ ಸಾಧನೆಗಳಿಂದ ಇಸ್ರೋ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಆದರೆ, 2024 ರಲ್ಲಿ ಅನೇಕ ಸಾಧನೆಗಳನ್ನು ಮಾಡುವಲ್ಲಿ ಯಶಸ್ವಿಯಾಗಿದೆ. ಈಗಾಗಲೇ ತನ್ನ ಸಾಧನೆಯ ಮೂಲಕವೇ ವಿಶ್ವ ಮಟ್ಟದಲ್ಲಿ ಗಮನ ಸೆಳೆದಿರುವ ಇಸ್ರೋದ ಈ ವರ್ಷದ ಸಾಧನೆಗಳ ಪಟ್ಟಿ ಇಲ್ಲಿದೆ.

  • ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ 2024 ರ ಮೊದಲ ದಿನವೇ ಉಪಗ್ರಹ ಉಡಾವಣೆ ಮೂಲಕ ಇತಿಹಾಸವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. 2024 ರ ಜನವರಿ 1 ರಂದು ಇಸ್ರೋ ಪಿಎಸ್‌ಎಲ್‌ವಿ-ಸಿ58/ಎಕ್ಸ್‌ಪೋಸ್ಯಾಟ್ ಉಡಾವಣೆ ಮಾಡಿತು. ಬಾಹ್ಯಾಕಾಶದಲ್ಲಿರುವ ಕಪ್ಪುಕುಳಿ (ಬ್ಲಾಕ್ ಹೋಲ್) ಸೇರಿದಂತೆ ಅಲ್ಲಿ ಹೊರಹೊಮ್ಮುವ ಎಕ್ಸ್ ಕಿರಣಗಳ ಮೂಲವನ್ನು ಅಧ್ಯಯನ ಮಾಡುವ ಉದ್ದೇಶದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C58) ರಾಕೆಟ್, ತನ್ನ 60 ನೇ ಕಾರ್ಯಾಚರಣೆಯಲ್ಲಿ ಪೇಲೋಡ್ ‘ಎಕ್ಸ್‌ಪೋಸ್ಯಾಟ್’ ಸೇರಿದಂತೆ 10 ಇತರ ಉಪಗ್ರಹಗಳನ್ನು ಹೊತ್ತೊಯುವಲ್ಲಿ ಯಶಸ್ವಿಯಾಗಿದೆ.
  • 2024 ರಲ್ಲಿ ಇಸ್ರೋ ಇನ್ಸಾಟ್‌-3ಡಿಎಸ್‌ ಎಂಬ ಹವಾಮಾನ ಮುನ್ಸೂಚನೆ ನೀಡುವ ಉಪಗ್ರಹವೊಂದನ್ನು ಉಡಾವಣೆ ಮಾಡಿತು. ಇನ್ಸಾಟ್-3ಡಿಎಸ್ ಉಪಗ್ರಹ ವಿವಿಧ ಹವಾಮಾನಶಾಸ್ತ್ರದ ಸ್ಪೆಕ್ಟ್ರಲ್ ಚಾನೆಲ್‌ಗಳನ್ನು ಬಳಸಿಕೊಳ್ಳುತ್ತವೆ. ಈ ಮೂಲಕ ಭೂಮಿಯ ಮೇಲ್ಮೈ ಹಾಗೂ ಸಾಗರ ವೀಕ್ಷಣೆ ನಡೆಸಲು ಪ್ರಯತ್ನಿಸುತ್ತದೆ. ವಿವಿಧ ಮಾಹಿತಿ ಸಂಗ್ರಹಣಾ ವ್ಯವಸ್ಥೆಗಳಿಂದ ಹವಾಮಾನಕ್ಕೆ ಸಂಬಂಧ ಪಟ್ಟ ಮಾಹಿತಿಗಳನ್ನು ಕಲೆ ಹಾಕಿ ಹಂಚಿಕೊಳ್ಳುತ್ತವೆ.
  • 2024 ರ ಆಗಸ್ಟ್ 16 ರಂದು ಇಸ್ರೋ ತನ್ನ ಹೊಸ ಉಪಗ್ರಹವನ್ನು (SSLV-D3-EOS-08) ಯಶಸ್ವಿಯಾಗಿ ಉಡಾವಣೆ ಮಾಡಿತು. ಈ ರಾಕೆಟ್ ಹೊಸ ಭೂ ವೀಕ್ಷಣಾ ಉಪಗ್ರಹ EOS-8 ವನ್ನು ಒಳಗೊಂಡಿದೆ. ಇದರೊಂದಿಗೆ ಸಣ್ಣ ಉಪಗ್ರಹ SR-0 DEMOSAT ಅನ್ನು ಉಡಾವಣೆ ಮಾಡಲಾಗಿದೆ. ವಿಪತ್ತುಗಳಿಂದ ಮುನ್ಸೂಚನೆಯನ್ನು ನೀಡುವ ಉದ್ದೇಶದಿಂದಾಗಿ ಈ ಎರಡು ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದ್ದು, ಇದು ಭೂಮಿಯಿಂದ 475 ಕಿ.ಮೀ ಎತ್ತರದಲ್ಲಿ ವೃತ್ತಾಕಾರದ ಕಕ್ಷೆಯಲ್ಲಿ ಸುತ್ತುತ್ತವೆ.
  • ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಸೂರ್ಯನ ಅಧ್ಯಯನಕ್ಕೆ ಕಳುಹಿಸಿದ್ದ ಆದಿತ್ಯ – ಎಲ್ 1ನೌಕೆ ತನ್ನ ಮೊದಲ ಹ್ಯಾಲೊ ಆರ್ಬಿಟ್ ಈ ವರ್ಷವೇ ತನ್ನ ಪ್ರದಕ್ಷಿಣೆ ಪೂರ್ಣಗೊಳಿಸಿದೆ. ಆದಿತ್ಯ- ಎಲ್ 1 ಮಿಷನ್ ಲಗ್ರಾಂಜಿಯನ್ ಪಾಯಿಂಟ್ ಎಲ್ 1 ನಲ್ಲಿ ಭಾರತದ ಮೊದಲ ಸೌರ ವೀಕ್ಷಣಾಲಯವಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ 2, 2023 ರಂದು ಉಡಾವಣೆ ಮಾಡಲಾಗಿತ್ತು. ಆದರೆ ಈ ವರ್ಷ ಆದಿತ್ಯ – ಎಲ್ 1 ನೌಕೆ ತನ್ನ ಮೊದಲ ಹ್ಯಾಲೊ ಆರ್ಬಿಟ್ ಪ್ರದಕ್ಷಿಣೆ ಪೂರ್ಣಗೊಳಿಸಿದ್ದು, ಇದು ಇಸ್ರೋದ ಮತ್ತೊಂದು ಮಹತ್ವದ ಸಾಧನೆಯಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:46 am, Wed, 18 December 24

Karnataka Winter Session Live: ಬೆಳಗಾವಿ ಚಳಿಗಾಲದ ಅಧಿವೇಶನ ಲೈವ್​
Karnataka Winter Session Live: ಬೆಳಗಾವಿ ಚಳಿಗಾಲದ ಅಧಿವೇಶನ ಲೈವ್​
ಕಿತ್ತಾಟದಿಂದ ರದ್ದಾಯ್ತು ಟಾಸ್ಕ್; ದೊಡ್ಡ ಪರಿಣಾಮ ಎದುರಿಸಿದ ಮನೆ ಮಂದಿ
ಕಿತ್ತಾಟದಿಂದ ರದ್ದಾಯ್ತು ಟಾಸ್ಕ್; ದೊಡ್ಡ ಪರಿಣಾಮ ಎದುರಿಸಿದ ಮನೆ ಮಂದಿ
ಜಪ ಮಾಲೆಯಲ್ಲಿನ 108 ಮಣಿಗಳ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
ಜಪ ಮಾಲೆಯಲ್ಲಿನ 108 ಮಣಿಗಳ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಹೇಳಿಕೆಗಳಲ್ಲಿ ವ್ಯತ್ಯಾಸ!
ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಹೇಳಿಕೆಗಳಲ್ಲಿ ವ್ಯತ್ಯಾಸ!
ವಿಜಯೇಂದ್ರರನ್ನು ಟೀಕಿಸುವುದು ಬಿಡದ ಯತ್ನಾಳ್, ಪುನಃ ಟೀಕಾಪ್ರಹಾರ!
ವಿಜಯೇಂದ್ರರನ್ನು ಟೀಕಿಸುವುದು ಬಿಡದ ಯತ್ನಾಳ್, ಪುನಃ ಟೀಕಾಪ್ರಹಾರ!