AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಂಠಿ ನೀರು ಕುಡಿಯುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

Health Tips: ಶೀತ ಮತ್ತು ಜ್ವರದಿಂದ ದೂರ ಉಳಿಯಲು ಶುಂಠಿ ಚಹಾವು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಶುಂಠಿ ನೀರು ಕುಡಿಯುವುದು ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? ಈ ಶುಂಠಿ ನೀರು ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಸಹಕಾರಿಯಾಗಿದೆ.

ಶುಂಠಿ ನೀರು ಕುಡಿಯುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ
ಶುಂಠಿ
TV9 Web
| Updated By: preethi shettigar|

Updated on: Nov 27, 2021 | 7:40 AM

Share

ನಾವು ತರಕಾರಿ ಕೊಳ್ಳಲು ಹೋದಾಗಲೆಲ್ಲಾ ಅದರ ಜೊತೆಗೆ ಶುಂಠಿಯನ್ನೂ ಖರೀದಿಸಬೇಕು. ಏಕೆಂದರೆ ಚಳಿಗಾಲದಲ್ಲಿ ಶುಂಠಿ ಹೆಚ್ಚು ಉಪಯುಕ್ತವಾಗಿದೆ. ಜನರು ಸಾಮಾನ್ಯವಾಗಿ ಚಹಾಕ್ಕಾಗಿ ಶುಂಠಿಯನ್ನು ಖರೀದಿಸುತ್ತಾರೆ. ಈ ಚಳಿಗಾಲದಲ್ಲಿ ಶುಂಠಿ ಚಹಾವನ್ನು ಬಹುತೇಕ ಎಲ್ಲರೂ ಇಷ್ಟಪಡುತ್ತಾರೆ. ಮನೆಗಳಲ್ಲಿ ಶುಂಠಿ(Ginger) ಚಹಾಕ್ಕೆ ಸಾಕಷ್ಟು ಬೇಡಿಕೆಯಿದೆ. ಟೀ ಆರೋಗ್ಯಕ್ಕೆ ಪ್ರಯೋಜನಕಾರಿಯಲ್ಲದಿದ್ದರೂ, ಶುಂಠಿ ಚಹಾವನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಶೀತ ಮತ್ತು ಜ್ವರದಿಂದ ದೂರ ಉಳಿಯಲು ಶುಂಠಿ ಚಹಾವು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಶುಂಠಿ ನೀರು ಕುಡಿಯುವುದು ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? ಈ ಶುಂಠಿ ನೀರು ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಸಹಕಾರಿಯಾಗಿದೆ.

ಚರ್ಮಕ್ಕೆ ಪ್ರಯೋಜನಕಾರಿ ಶುಂಠಿ ನೀರನ್ನು ಕುಡಿಯುವುದು ರಕ್ತವನ್ನು ಶುದ್ಧೀಕರಿಸಲು ಪ್ರಯೋಜನಕಾರಿಯಾಗಿದೆ. ಇದು ಚರ್ಮದ ಮೇಲೆ ನೇರ ಪರಿಣಾಮ ಬೀರುತ್ತದೆ. ಶುಂಠಿ ನೀರಿನಿಂದ ತ್ವಚೆಯ ಹೊಳಪು ಬಹಳಷ್ಟು ಹೆಚ್ಚಾಗುತ್ತದೆ. ಇದರೊಂದಿಗೆ, ಇದು ಮೊಡವೆ ಮತ್ತು ಚರ್ಮದ ಸೋಂಕಿನಂತಹ ಸಮಸ್ಯೆಗಳನ್ನು ಸಹ ತಡೆಯುತ್ತದೆ. ತ್ವಚೆಯಲ್ಲಿ ಹೊಳಪು ಬೇಕೆಂದರೆ ಶುಂಠಿ ನೀರನ್ನು ಸೇವಿಸಬಹುದು.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಶುಂಠಿ ನೀರನ್ನು ಕುಡಿಯುವುದರಿಂದ ದೇಹದ ಇತರ ಸಮಸ್ಯೆಗಳು ದೂರವಾಗುತ್ತವೆ. ಇದರ ಸೇವನೆಯು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಶೀತ-ಕೆಮ್ಮು ಮತ್ತು ವೈರಲ್ ಸೋಂಕಿನಂತಹ ರೋಗಗಳ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಗೆ ಪ್ರಯೋಜನಕಾರಿ ಶುಂಠಿ ನೀರು ಹೊಟ್ಟೆಗೆ ಸಹ ಪ್ರಯೋಜನಕಾರಿಯಾಗಿದೆ. ಶುಂಠಿ ನೀರನ್ನು ಕುಡಿಯುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಮತ್ತು ಆಹಾರವನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದಲ್ಲದೇ ಊಟಕ್ಕೆ ಮೊದಲು ಉಪ್ಪು ಚಿಮುಕಿಸಿದ ಶುಂಠಿಯ ತುಂಡುಗಳನ್ನು ತಿನ್ನುವುದರಿಂದ ಜೊಲ್ಲು ಹೆಚ್ಚುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯ ಸಮಸ್ಯೆಗಳನ್ನು ತಡೆಯುತ್ತದೆ.

ತೂಕ ಇಳಿಸಿಕೊಳ್ಳಲು ಸಹಕಾರಿ ನಿಮ್ಮ ತೂಕವನ್ನು ಕಡಿಮೆ ಮಾಡಲು ನೀವು ಬಯಸಿದರೆ, ಶುಂಠಿ ನೀರು ಪರಿಣಾಮಕಾರಿಯಾಗಿದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ, ದೇಹದ ಹೆಚ್ಚುವರಿ ಕೊಬ್ಬು ಹೊರಹಾಕಲ್ಪಡುತ್ತದೆ. ಇದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕ್ಯಾನ್ಸರ್ ವಿರುದ್ಧ ರಕ್ಷಣೆ ಶುಂಠಿಯಲ್ಲಿ ಕ್ಯಾನ್ಸರ್ ನಂತಹ ರೋಗಗಳ ವಿರುದ್ಧ ಹೋರಾಡಲು ಪರಿಣಾಮಕಾರಿ ಅಂಶಗಳಿವೆ. ಆದ್ದರಿಂದ, ಇದು ಕ್ಯಾನ್ಸರ್ ಬರುವ ಸಾಧ್ಯತೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಇದಲ್ಲದೇ ಶುಂಠಿಯ ಸೇವನೆಯಿಂದ ಹೃದಯದ ಸಮಸ್ಯೆಗಳಿಗೂ ಪರಿಹಾರ ದೊರೆಯುತ್ತದೆ. ಶುಂಠಿಯನ್ನು ಹೃದ್ರೋಗಗಳ ಚಿಕಿತ್ಸೆಯಲ್ಲಿ ಅನೇಕ ವರ್ಷಗಳಿಂದ ಬಳಸಲಾಗುತ್ತಿದೆ.

ಇದನ್ನೂ ಓದಿ: Weight Loss: ಆರೋಗ್ಯಕರ ತೂಕ ನಷ್ಟಕ್ಕೆ ತಜ್ಞರ ಸಲಹೆಗಳೇನು? ಇಲ್ಲಿದೆ ಮಾಹಿತಿ

ಕನ್ನಡಕ ಧರಿಸುವ ಆತಂಕ ಬಿಡಿ; ಕಣ್ಣಿನ ಆರೋಗ್ಯಕ್ಕಾಗಿ ಈ 5 ಥೇರಪಿಗಳ ಮೊರೆ ಹೋಗಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ