Peanut Butter: ಕಡಲೆಕಾಯಿಯಲ್ಲೂ ಬೆಣ್ಣೆ ತಯಾರಿಸಬಹುದು; ಇದು ಅನೇಕ ಆರೋಗ್ಯಕರ ಗುಣಗಳಿಂದ ಕೂಡಿದೆ

ಕಡಲೆಕಾಯಿಯಿಂದ ತಯಾರಿಸಿದ ಬೆಣ್ಣೆ ಅನೇಕ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇದು ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Peanut Butter: ಕಡಲೆಕಾಯಿಯಲ್ಲೂ ಬೆಣ್ಣೆ ತಯಾರಿಸಬಹುದು; ಇದು ಅನೇಕ ಆರೋಗ್ಯಕರ ಗುಣಗಳಿಂದ ಕೂಡಿದೆ
ಕಡಲೆಕಾಯಿ ಬೆಣ್ಣೆ
Follow us
TV9 Web
| Updated By: preethi shettigar

Updated on: Sep 01, 2021 | 7:23 AM

ಕಡಲೆಕಾಯಿ ಬೆಣ್ಣೆಯು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದರಲ್ಲಿ ಫೈಬರ್ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಕಡಲೆಕಾಯಿಯಿಂದ ತಯಾರಿಸಿದ ಬೆಣ್ಣೆ ಅನೇಕ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇದು ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಡಲೆಕಾಯಿ ಬೆಣ್ಣೆಯಲ್ಲಿ ವಿಟಮಿನ್ ಇ ಸಮೃದ್ಧವಾಗಿದೆ. ಇದು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಕಡಲೆಕಾಯಿ ಬೆಣ್ಣೆ ಇನ್ನು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅದು ಯಾವುದು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ

ತೂಕ ಇಳಿಕೆಗೆ ಸಹಾಯ ಮಾಡುತ್ತದೆ ಕಡಲೆಕಾಯಿ ಬೆಣ್ಣೆಯಲ್ಲಿ ಹೆಚ್ಚಿನ ಫೈಬರ್ ಇರುತ್ತದೆ. ಇದರಲ್ಲಿ ಕಡಿಮೆ ಕ್ಯಾಲೋರಿ, ಕೊಬ್ಬು ಮತ್ತು ಸೋಡಿಯಂ ಇರುತ್ತದೆ. ಇದನ್ನು ಸಮತೋಲಿತ ಪ್ರಮಾಣದಲ್ಲಿ ತೆಗೆದುಕೊಳ್ಳುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಕೆಲವು ಅಧ್ಯಯನಗಳ ಪ್ರಕಾರ ಕಡಲೆಕಾಯಿ ಬೆಣ್ಣೆಯು ಕರುಳಿನ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ. ಇದು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇದು ರಾಡಿಕಲ್​ಗಳಿಂದ ಉಂಟಾಗುವ ಹಾನಿಯಿಂದ ದೇಹವನ್ನು ರಕ್ಷಿಸುತ್ತದೆ. ಕಡಲೆಕಾಯಿಯಲ್ಲಿರುವ ವಿಟಮಿನ್, ಕೊಲೊನ್, ಶ್ವಾಸಕೋಶ, ಲಿವರ್ ಮತ್ತು ಇತರ ಕ್ಯಾನ್ಸರ್‌ಗಳಿಂದ ರಕ್ಷಿಸುತ್ತದೆ.

ಆರೋಗ್ಯಕರ ಹೃದಯಕ್ಕೆ ಸೂಕ್ತ ಕಡಲೆಕಾಯಿ ಬೆಣ್ಣೆಯು ಪಿ -ಕೋರಿಕ್ ಆಮ್ಲದಿಂದ ಸಮೃದ್ಧವಾಗಿದೆ. ಇದು ಹೃದಯ ಸಂಬಂಧಿ ಕಾಯಿಲೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರ ಹೊರತಾಗಿ ಇದು ಉತ್ತಮ ಕೊಬ್ಬನ್ನು ಹೊಂದಿದ್ದು, ಇದು ಎಲ್​ಡಿಎಲ್​ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಡಲೆಕಾಯಿ ಬೆಣ್ಣೆಯನ್ನು ತಿನ್ನುವುದರಿಂದ ಹೃದಯರಕ್ತನಾಳದ ಮತ್ತು ಹೃದಯ ಸಂಬಂಧಿ ಕಾಯಿಲೆಯ ಅಪಾಯ ಕಡಿಮೆಯಾಗುತ್ತದೆ.

ಬಲವಾದ ಮೂಳೆಗಳಿಗೆ ಸಹಕಾರಿ ಕಡಲೆಕಾಯಿ ಬೆಣ್ಣೆಯಲ್ಲಿ ಕಬ್ಬಿಣ ಮತ್ತು ಕ್ಯಾಲ್ಸಿಯಂ ಇರುತ್ತದೆ. ಆರೋಗ್ಯಕರ ಮೂಳೆಗಳಿಗೆ ಇವು ಒಳ್ಳೆಯದು.

ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಕಡಲೆಕಾಯಿ ಬೆಣ್ಣೆಯನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಇದು ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಡಲೆಕಾಯಿ ಬೆಣ್ಣೆಯ ನಿಯಮಿತ ಸೇವನೆಯು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ತೋರಿಸುತ್ತವೆ, ವಿಶೇಷವಾಗಿ ಟೈಪ್ 2 ಮಧುಮೇಹವನ್ನು ನಿಯಂತ್ರಿಸುತ್ತದೆ.

ಪಿತ್ತಜನಕಾಂಗದಲ್ಲಿನ ಕಲ್ಲು ನಿವಾರಣೆ ಅನೇಕ ಅಧ್ಯಯನಗಳ ಪ್ರಕಾರ, ಕಡಲೆಕಾಯಿ ಬೆಣ್ಣೆಯನ್ನು ಸೇವಿಸುವುದರಿಂದ ಪಿತ್ತಗಲ್ಲುಗಳ ಅಪಾಯವನ್ನು ಕಡಿಮೆ ಮಾಡಬಹುದು. ಕಡಲೆಕಾಯಿ ಬೆಣ್ಣೆಯು ಎಲ್​ಡಿಎಲ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

ಇದನ್ನೂ ಓದಿ: ಸೂರ್ಯಕಾಂತಿ ಬೀಜಗಳ ಸೇವನೆಯ ಆರೋಗ್ಯ ಪ್ರಯೋಜನಗಳು; ಮಧುಮೇಹ ಸಮಸ್ಯೆ ನಿಯಂತ್ರಣಕ್ಕೆ ಉತ್ತಮ ಮಾರ್ಗ

Pumpkin Seeds: ಚೀನಿಕಾಯಿ ಬೀಜದ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದರೆ ಒಂದು ಬೀಜವನ್ನು ಹಾಳುಮಾಡುವುದಿಲ್ಲ

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ