Pearl Millet Benefits: ಸಜ್ಜೆ ರೊಟ್ಟಿ ಮಾಡುವ ವಿಧಾನದ ಜತೆಗೆ ಆರೋಗ್ಯಕರ ಗುಣಗಳ ಕುರಿತು ಇಲ್ಲಿದೆ ಮಾಹಿತಿ

ಚಳಿಗಾಲದಲ್ಲಿ ಸಜ್ಜೆ ರೊಟ್ಟಿ ಉತ್ತಮ ಆಯ್ಕೆಯಾಗಿದೆ. ಇದು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಇದಲ್ಲದೆ ಜೀರ್ಣಾಂಗ ವ್ಯವಸ್ಥೆಯನ್ನು ಸರಿಪಡಿಸುತ್ತದೆ.

Pearl Millet Benefits: ಸಜ್ಜೆ ರೊಟ್ಟಿ ಮಾಡುವ ವಿಧಾನದ ಜತೆಗೆ ಆರೋಗ್ಯಕರ ಗುಣಗಳ ಕುರಿತು ಇಲ್ಲಿದೆ ಮಾಹಿತಿ
ಸಜ್ಜೆ ರೊಟ್ಟಿ
Follow us
| Updated By: preethi shettigar

Updated on: Dec 16, 2021 | 7:30 AM

ಚಳಿಗಾಲ ಶುರುವಾಗಿದೆ. ಈ ಋತುವಿನಲ್ಲಿ ದೇಹವನ್ನು ಒಳಗಿನಿಂದ ಬೆಚ್ಚಗಿಡುವ ಪದಾರ್ಥಗಳನ್ನು ತಿನ್ನುವ ಪ್ರವೃತ್ತಿ ಇದೆ. ಇಂತಹ ಪರಿಸ್ಥಿತಿಯಲ್ಲಿ ಸಜ್ಜೆ ರೊಟ್ಟಿ ಉತ್ತಮ ಆಯ್ಕೆಯಾಗಿದೆ. ಸಜ್ಜೆ ಕ್ಯಾಲ್ಸಿಯಂನಿಂದ ಸಮೃದ್ಧವಾಗಿದೆ. ಇದಲ್ಲದೆ ವಿಟಮಿನ್ ಬಿ, ಫೈಬರ್, ಪ್ರೋಟೀನ್, ಕಾರ್ಬೋಹೈಡ್ರೇಟ್​ಗಳು, ಕಬ್ಬಿಣ, ಖನಿಜಗಳು ಮತ್ತು ಆಂಟಿಆಕ್ಸಿಡೆಂಟ್​ಗಳಾದ ಫೈಟೇಟ್, ಫಿನಾಲ್ ಮತ್ತು ಟ್ಯಾನಿನ್ ಸಹ ಸಜ್ಜೆಯಲ್ಲಿ(Pearl Millet) ಕಂಡುಬರುತ್ತವೆ. ಚಳಿಗಾಲದಲ್ಲಿ ಸಜ್ಜೆ ರೊಟ್ಟಿ ಉತ್ತಮ ಆಯ್ಕೆಯಾಗಿದೆ. ಇದು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಇದಲ್ಲದೆ ಜೀರ್ಣಾಂಗ ವ್ಯವಸ್ಥೆಯನ್ನು ಸರಿಪಡಿಸುತ್ತದೆ.

ಸಜ್ಜೆ ರೊಟ್ಟಿಯನ್ನು ಉದ್ದಿನಬೇಳೆ, ತರಕಾರಿ, ಕರಿಬೇವು, ಬೆಳ್ಳುಳ್ಳಿ ಚಟ್ನಿ ಇತ್ಯಾದಿಗಳೊಂದಿಗೆ ತಿನ್ನಬಹುದು. ಸಜ್ಜೆಯನ್ನು ಹಿಟ್ಟು ಮಾಡಿಕೊಂಡು ಅದನ್ನು ನೀರಿನೊಂದಿಗೆ ಚೆನ್ನಾಗಿ ಗಟ್ಟಿ ಮಾಡಿಕೊಳ್ಳಿ. ಬಳಿಕ ಅದಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಬೆರೆಸಿ. ನಂತರ ರೊಟ್ಟಿ ಆಕಾರಕ್ಕೆ ತಟ್ಟಿ ಬೇಯಿಸಿಕೊಳ್ಳಿ. ಈಗ ರುಚಿಕರವಾದ ಸಜ್ಜೆ ರೊಟ್ಟಿ ಸವಿಯಲು ಸಿದ್ಧ.

ಸಜ್ಜೆ ರೊಟ್ಟಿಯ ಪ್ರಯೋಜನಗಳು ಮಲಬದ್ಧತೆಯನ್ನು ನಿವಾರಿಸುತ್ತದೆ ಸಜ್ಜೆ ಗ್ಲುಟನ್ ಮುಕ್ತವಾಗಿದೆ ಮತ್ತು ಫೈಬರ್‌ನಿಂದ ಸಮೃದ್ಧವಾಗಿದೆ. ನೀವು ಚಳಿಗಾಲದಲ್ಲಿ ಸಜ್ಜೆ ರೊಟ್ಟಿಯನ್ನು ಪ್ರತಿದಿನ ಸೇವಿಸಿದರೆ, ನಿಮ್ಮ ಎಲ್ಲಾ ಹೊಟ್ಟೆ ಸಮಸ್ಯೆಗಳು ದೂರವಾಗುತ್ತವೆ. ಮಲಬದ್ಧತೆಯ ಸಮಸ್ಯೆ ಕೂಡ ಇರುವುದಿಲ್ಲ. ಹೊಟ್ಟೆಯನ್ನು ಆರೋಗ್ಯವಾಗಿ ಇಟ್ಟುಕೊಳ್ಳುವುದಕ್ಕೆ ಇದು ಉತ್ತಮ ಆಯ್ಕೆ.

ತೂಕ ನಷ್ಟ ಮತ್ತು ಮಧುಮೇಹಕ್ಕೆ ಪರಿಹಾರ ಸಜ್ಜೆ ರೊಟ್ಟಿಯನ್ನು ತಿಂದ ನಂತರ ನಿಮ್ಮ ಹೊಟ್ಟೆಯು ದೀರ್ಘಕಾಲದವರೆಗೆ ತುಂಬಿರುತ್ತದೆ. ಆದ್ದರಿಂದ ನೀವು ಅತಿಯಾಗಿ ತಿನ್ನುವುದನ್ನು ತಪ್ಪಿಸಬಹುದು. ತೂಕವನ್ನು ಕಳೆದುಕೊಳ್ಳಲು ಬಯಸುವವರಿಗೆ ಇದು ಉತ್ತಮ ಆಯ್ಕೆಯಾಗಿದೆ. ಇದಲ್ಲದೆ ಈ ಸಜ್ಜೆ ಪ್ರೀ-ಬಯೋಟಿಕ್ ಆಗಿ ಕಾರ್ಯನಿರ್ವಹಿಸುತ್ತದೆ. ಮಧುಮೇಹಿಗಳಿಗೆ ಇದು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ಒಮೆಗಾ 3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದೆ ಒಮೆಗಾ 3 ಕೊಬ್ಬಿನಾಮ್ಲಗಳು ಪ್ರತಿಯೊಬ್ಬರ ದೇಹಕ್ಕೆ ಅತ್ಯಗತ್ಯ. ಇದು ದೇಹದ ಜೀವಕೋಶಗಳನ್ನು ಸರಿಪಡಿಸಲು ಕೆಲಸ ಮಾಡುತ್ತದೆ. ಆದರೆ ದೇಹವು ಅದನ್ನು ಸ್ವಂತವಾಗಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ಸಜ್ಜೆ ಸೇವಿಸಿ. ಇದು ನಿಮ್ಮ ದೇಹಕ್ಕೆ ಒಮೆಗಾ 3 ನೀಡುತ್ತದೆ. ತಜ್ಞರ ಪ್ರಕಾರ ಒಮೆಗಾ 3 ಕೊಬ್ಬಿನಾಮ್ಲಗಳು ಇತರ ಧಾನ್ಯಗಳಿಗಿಂತ ಹೆಚ್ಚು ಸಜ್ಜೆಯಲ್ಲಿ ಕಂಡುಬರುತ್ತವೆ.

ರೋಗನಿರೋಧಕ ಶಕ್ತಿ ಬಲವಾಗಿಸುತ್ತದೆ ಸಜ್ಜೆ ನಿಮ್ಮ ದೇಹದಿಂದ ವಿಷವನ್ನು ಹೊರಹಾಕಲು ಸಹಾಯಕವಾಗಿದೆ ಎಂದು ಪರಿಗಣಿಸಲಾಗಿದೆ. ಮೂತ್ರಪಿಂಡ ಮತ್ತು ಯಕೃತ್ತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಇದು ತಡೆಯುತ್ತದೆ. ಜೊತೆಗೆ ನಿಮ್ಮ ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಬಲಗೊಳ್ಳುತ್ತದೆ.

ಹೃದಯದ ಆರೋಗ್ಯವನ್ನು ಕಾಪಾಡುತ್ತದೆ ಮೆಗ್ನೀಸಿಯಮ್, ಪೊಟ್ಯಾಸಿಯಮ್ ಸಜ್ಜೆಯಲ್ಲಿ ಹೇರಳವಾಗಿ ಕಂಡುಬರುತ್ತದೆ. ಸಜ್ಜೆ ರೊಟ್ಟಿ ಬಿಪಿ ಮತ್ತು ಹೃದ್ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗಿದೆ. ಸಜ್ಜೆ ಸೇವನೆಯಿಂದ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ. ರಕ್ತನಾಳಗಳನ್ನು ಹಿಗ್ಗಿಸಲು ಇದು ಸಹಕಾರಿ. ಇದರಿಂದ ಅಧಿಕ ಬಿಪಿ, ಹೃದಯಾಘಾತದಂತಹ ಸಮಸ್ಯೆಗಳು ದೂರವಾಗುತ್ತದೆ.

ಇದನ್ನೂ ಓದಿ: Carrot Benefits: ಚಳಿಗಾಲದಲ್ಲಿ ಕ್ಯಾರೆಟ್ ಸೇವನೆ ಎಷ್ಟು ಮುಖ್ಯ? ಸಮಸ್ಯೆ ಬಂದ ಮೇಲೆ ಚಿಂತಿಸುವ ಮೊದಲೇ ಎಚ್ಚರ ವಹಿಸಿ

ನಿಂತು ನೀರು ಕುಡಿಯುವ ಅಭ್ಯಾಸ ಇದೆಯೇ? ಆರೋಗ್ಯ ಸಮಸ್ಯೆ ಉಂಟಾಗುವ ಮೊದಲು ಎಚ್ಚರ ವಹಿಸಿ

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​