Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಲಂಗಿ ಎಲೆಯ ಜ್ಯೂಸ್ ಚಳಿಗಾಲದಲ್ಲಿ ಎಷ್ಟು ಮುಖ್ಯ? ಆರೋಗ್ಯಕರ ಗುಣಗಳ ಬಗ್ಗೆ ತಿಳಿಯಿರಿ

ಉತ್ತಮ ಆರೋಗ್ಯಕ್ಕಾಗಿ ಜ್ಯೂಸ್ ರೂಪದಲ್ಲಿ ಮೂಲಂಗಿ ಎಲೆಗಳನ್ನು ಸೇವಿಸಬಹುದು. ಮೂಲಂಗಿ ಎಲೆಗಳು ಪ್ರೋಟೀನ್, ಕಾರ್ಬೋಹೈಡ್ರೇಟ್, ಕ್ಲೋರಿನ್, ಸೋಡಿಯಂ, ಕಬ್ಬಿಣ, ಮೆಗ್ನೀಸಿಯಮ್ ಮತ್ತು ವಿಟಮಿನ್ ಎ, ವಿಟಮಿನ್ ಬಿ ಮತ್ತು ವಿಟಮಿನ್ ಸಿ ನಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ.

ಮೂಲಂಗಿ ಎಲೆಯ ಜ್ಯೂಸ್ ಚಳಿಗಾಲದಲ್ಲಿ ಎಷ್ಟು ಮುಖ್ಯ? ಆರೋಗ್ಯಕರ ಗುಣಗಳ ಬಗ್ಗೆ ತಿಳಿಯಿರಿ
ಮೂಲಂಗಿ ಎಲೆ
Follow us
TV9 Web
| Updated By: preethi shettigar

Updated on: Nov 29, 2021 | 8:29 AM

ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಅನೇಕ ಹಸಿರು ತರಕಾರಿಗಳು ಮಾರುಕಟ್ಟೆಗೆ ಬರುತ್ತವೆ. ಇವುಗಳು ಆರೋಗ್ಯಕ್ಕೆ ಅಸಂಖ್ಯಾತ ಪ್ರಯೋಜನಗಳನ್ನು ನೀಡಲು ಕೆಲಸ ಮಾಡುತ್ತವೆ. ಈ ಹಸಿರು ತರಕಾರಿಗಳಲ್ಲಿ ಮೂಲಂಗಿ ಕೂಡ ಒಂದು. ಚಳಿಗಾಲದಲ್ಲಿ ಮೂಲಂಗಿಯನ್ನು ತುಂಬಾ ಇಷ್ಟಪಡುತ್ತಾರೆ. ಆದರೆ ಅನೇಕ ಬಾರಿ ಮೂಲಂಗಿಯನ್ನು ಕೊಳ್ಳುವಾಗ ಅದರ ಎಲೆಗಳನ್ನು ತೆಗೆದುಕೊಳ್ಳುವುದಿಲ್ಲ. ಒಂದೊಮ್ಮೆ ಎಲೆಗಳನ್ನು ತಂದರು ಅದನ್ನು ಉಪಯೋಗಿಸುವುದಿಲ್ಲ. ಆದರೆ ಮೂಲಂಗಿ ಎಲೆಗಳು (Radish leaves) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ಉತ್ತಮ ಆರೋಗ್ಯಕ್ಕಾಗಿ ಜ್ಯೂಸ್ ರೂಪದಲ್ಲಿ ಮೂಲಂಗಿ ಎಲೆಗಳನ್ನು ಸೇವಿಸಬಹುದು. ಮೂಲಂಗಿ ಎಲೆಗಳು ಪ್ರೋಟೀನ್, ಕಾರ್ಬೋಹೈಡ್ರೇಟ್, ಕ್ಲೋರಿನ್, ಸೋಡಿಯಂ, ಕಬ್ಬಿಣ, ಮೆಗ್ನೀಸಿಯಮ್ ಮತ್ತು ವಿಟಮಿನ್ ಎ, ವಿಟಮಿನ್ ಬಿ ಮತ್ತು ವಿಟಮಿನ್ ಸಿ ನಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ. ಈ ಪೋಷಕಾಂಶಗಳು ದೇಹವನ್ನು ಅನೇಕ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಹಾಗಾದರೆ ಮೂಲಂಗಿ ಎಲೆಗಳ ಜ್ಯೂಸ್ ತಯಾರಿಸುವುದು ಹೇಗೆ? ಇದರಿಂದಾಗುವ ಪ್ರಯೋಜನಗಳಾವುವು ಎಂದು ತಿಳಿಯುವುದು ಸೂಕ್ತ.

ಮೂಲಂಗಿ ಎಲೆಯ ಉಪಯೋಗಗಳು 1. ಜೀರ್ಣಕ್ರಿಯೆಗೆ ಸಹಕಾರಿ ಮೂಲಂಗಿ ಎಲೆಗಳಲ್ಲಿ ಸಾಕಷ್ಟು ಪ್ರಮಾಣದ ಫೈಬರ್ ಕಂಡುಬರುತ್ತದೆ. ಇದು ಪ್ರತಿಯೊಬ್ಬರ ಹೊಟ್ಟೆಗೆ ತುಂಬಾ ಪ್ರಯೋಜನಕಾರಿ. ಮೂಲಂಗಿ ಎಲೆಗಳಿಂದ ತಯಾರಿಸಿದ ಜ್ಯೂಸ್ ಸೇವಿಸಿದರೆ ಜೀರ್ಣಕ್ರಿಯೆಯ ಸಮಸ್ಯೆಯನ್ನು ನಿವಾರಿಸಬಹುದು.

2.ಬೊಜ್ಜು ಕಡಿಮೆಯಾಗುತ್ತದೆ ಚಳಿಗಾಲದಲ್ಲಿ ತೂಕ ಇಳಿಸಿಕೊಳ್ಳಲು ಬಯಸಿದರೆ, ಮೂಲಂಗಿ ಎಲೆ ಎಲ್ಲರಿಗೂ ಉತ್ತಮ ಆಯ್ಕೆಯಾಗಿದೆ. ಹೌದು, ಮೂಲಂಗಿ ಎಲೆಗಳಿಂದ ತಯಾರಿಸಿದ ಜ್ಯೂಸ್ ಸೇವಿಸುವ ಮೂಲಕ ನೀವು ಸುಲಭವಾಗಿ ತೂಕವನ್ನು ಕಡಿಮೆ ಮಾಡಬಹುದು.

3. ಕಡಿಮೆ ರಕ್ತದೊತ್ತಡ ನಿವಾರಣೆ ರಕ್ತದೊತ್ತಡದ ಸಮಸ್ಯೆ ಇದ್ದರೆ, ಅದರಲ್ಲೂ ಕಡಿಮೆ ರಕ್ತದೊತ್ತಡ ರೋಗಿಗಳಿಗೆ ಮೂಲಂಗಿ ಎಲೆಗಳ ಜ್ಯೂಸ್ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಮೂಲಂಗಿ ಎಲೆಗಳು ಉತ್ತಮ ಪ್ರಮಾಣದ ಸೋಡಿಯಂ ಅನ್ನು ಹೊಂದಿರುತ್ತವೆ. ಇದು ದೇಹದಲ್ಲಿ ಉಪ್ಪಿನ ಕೊರತೆಯನ್ನು ಪೂರೈಸಲು ಸಹಾಯ ಮಾಡುತ್ತದೆ.

ಮೂಲಂಗಿ ಎಲೆಗಳ ಜ್ಯೂಸ್ ಹೇಗೆ ತಯಾರಿಸುವುದು? ಮೂಲಂಗಿ ಎಲೆಗಳ ಜ್ಯೂಸ್ ಮಾಡಲು, ಮೊದಲು ತಾಜಾ ಮೂಲಂಗಿ ಎಲೆಗಳು ಬೇಕಾಗುತ್ತವೆ. ಇದರ ನಂತರ ಮೂಲಂಗಿ ಎಲೆಗಳನ್ನು ಶುದ್ಧ ನೀರಿನಿಂದ 2-3 ಬಾರಿ ಚೆನ್ನಾಗಿ ತೊಳೆಯಿರಿ. ಬಳಿಕ ಇದನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ನಂತರ ಎಲೆಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಇದಕ್ಕೆ ರುಚಿಗೆ ತಕ್ಕಂತೆ ಉಪ್ಪು, ಚಿಟಿಕೆ ಕರಿಮೆಣಸಿನ ಪುಡಿ ಮತ್ತು ನಿಂಬೆ ರಸವನ್ನು ಸೇರಿಸಿದರೆ ಮೂಲಂಗಿ ಎಲೆಗಳ ಜ್ಯೂಸ್ ಸವಿಯಲು ಸಿದ್ಧವಾಗುತ್ತದೆ.

ಇದನ್ನೂ ಓದಿ: ಶುಂಠಿ ನೀರು ಕುಡಿಯುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

ಕೊತ್ತಂಬರಿ ಸೊಪ್ಪು ರುಚಿಗಷ್ಟೇ ಎಂಬ ಭ್ರಮೆಯಲ್ಲಿದ್ದರೆ ಇಂದೇ ಹೊರ ಬನ್ನಿ; ಆರೋಗ್ಯಕರ ಅನುಕೂಲದ ಬಗ್ಗೆ ತಿಳಿಯಿರಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ