Health Tips: ಬಿಸಿ ನೀರು ಕುಡಿಯುವಾಗ ಈ 3 ಪದಾರ್ಥಗಳನ್ನು ಸೇರಿಸಿ; ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಲು ಬಿಸಿ ನೀರು ತುಂಬಾ ಉಪಯುಕ್ತವಾಗಿದೆ. ತೂಕ ಇಳಿಸುವಲ್ಲಿಯೂ ಇದು ಉಪಯುಕ್ತವಾಗಿವೆ. ಬಿಸಿ ನೀರಿನಲ್ಲಿ ಕೆಲವು ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳು ಕಡಿಮೆಯಾಗುವುದಲ್ಲದೆ ಹೆಚ್ಚಿನ ಫಲಿತಾಂಶಗಳನ್ನು ಸಹ ಪಡೆಯಬಹುದು.

Health Tips: ಬಿಸಿ ನೀರು ಕುಡಿಯುವಾಗ ಈ 3 ಪದಾರ್ಥಗಳನ್ನು ಸೇರಿಸಿ; ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ
ಸಂಗ್ರಹ ಚಿತ್ರ
Follow us
TV9 Web
| Updated By: preethi shettigar

Updated on: Oct 18, 2021 | 7:10 AM

ಬಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ದೇಹದಲ್ಲಿರುವ ಅನೇಕ ರೋಗಗಳು ನಿವಾರಣೆಯಾಗುತ್ತವೆ. ಅಲ್ಲದೆ, ಪ್ರತಿದಿನ ಉಗುರುಬೆಚ್ಚಗಿನ ನೀರನ್ನು ಕುಡಿಯುವುದರಿಂದ ದೇಹದ ಮೇಲೆ ವಿಷಕಾರಿ ಪರಿಣಾಮ ಕಡಿಮೆಯಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಲು ಬಿಸಿ ನೀರು ತುಂಬಾ ಉಪಯುಕ್ತವಾಗಿದೆ. ತೂಕ ಇಳಿಸುವಲ್ಲಿಯೂ ಇದು ಉಪಯುಕ್ತವಾಗಿವೆ. ಬಿಸಿ ನೀರಿನಲ್ಲಿ ಕೆಲವು ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯ ಸಮಸ್ಯೆಗಳು ಕಡಿಮೆಯಾಗುವುದಲ್ಲದೆ ಹೆಚ್ಚಿನ ಫಲಿತಾಂಶಗಳನ್ನು ಸಹ ಪಡೆಯಬಹುದು. ಹಾಗಿದ್ದರೆ ಬಿಸಿ ನೀರಿನೊಂದಿಗೆ ಯಾವ ಪದಾರ್ಥಗಳನ್ನು ಸೇವಿಸಬೇಕು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

1. ಅರಿಶಿಣ ಒಂದು ಚಿಟಿಕೆ ಅರಿಶಿಣವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಹಾಕಿ ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ. ಇದು ಕರ್ಕ್ಯುಮಿನ್ ಎಂಬ ಅಂಶವನ್ನು ಹೊಂದಿದೆ. ಇದು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅರಿಶಿಣವನ್ನು ಬಿಸಿ ನೀರಿನ ಜತೆ ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇವುಗಳ ಹೊರತಾಗಿ ಕಫದಂತಹ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಅರಿಶಿಣ ದೇಹದಲ್ಲಿನ ಆಂತರಿಕ ಗಾಯಗಳನ್ನು ಕಡಿಮೆ ಮಾಡುತ್ತದೆ. ಹಾಗೆಯೇ ರಕ್ತವನ್ನು ಶುದ್ಧಗೊಳಿಸುತ್ತದೆ ಆ ಮೂಲಕ ದೇಹವನ್ನು ಆರೋಗ್ಯವಾಗಿರಿಸುತ್ತದೆ.

2. ಬೆಳ್ಳುಳ್ಳಿ ಬೆಳ್ಳುಳ್ಳಿಯನ್ನು ಪ್ರತಿದಿನ ಬಿಸಿ ನೀರಿನ ಜತೆ ಸೇವಿಸಿದರೆ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಹಾಗೆಯೇ ಹೃದಯಕ್ಕೆ ಇದು ಒಳ್ಳೆಯದು. ಅಧಿಕ ಕೊಲೆಸ್ಟ್ರಾಲ್ ಇರುವ ರೋಗಿಗಳು ಪ್ರತಿದಿನ ಬೆಳ್ಳುಳ್ಳಿಯನ್ನು ಬಿಸಿ ನೀರಿನೊಂದಿಗೆ ಸೇವಿಸಬೇಕು. ಏಕೆಂದರೆ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಲಬದ್ಧತೆಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಬೆಳ್ಳುಳ್ಳಿಯಲ್ಲಿ ಅನೇಕ ಉತ್ಕರ್ಷಣ ನಿರೋಧಕಗಳಿವೆ. ಇದು ಅಧಿಕ ರಕ್ತದೊತ್ತಡ ರೋಗಿಗಳಿಗೆ ಕೂಡ ಪರಿಣಾಮಕಾರಿಯಾಗಿದೆ.

3. ನಿಂಬೆ ರಸ ಮತ್ತು ಜೇನುತುಪ್ಪ ನಿಂಬೆ ರಸವನ್ನು ಬಿಸಿ ನೀರಿನಲ್ಲಿ ಜೇನುತುಪ್ಪದೊಂದಿಗೆ ಬೆರೆಸಿದರೆ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಜೇನುತುಪ್ಪವು ಅನೇಕ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇವುಗಳು ದೇಹವನ್ನು ಸೋಂಕಿನಿಂದ ರಕ್ಷಿಸಲು ಸಹಾಯ ಮಾಡುತ್ತವೆ. ನಿಂಬೆಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ನಿಂಬೆ ಮತ್ತು ಜೇನುತುಪ್ಪವನ್ನು ಬಿಸಿ ನೀರಿನಲ್ಲಿ ನಿಯಮಿತವಾಗಿ ಸೇವಿಸುವುದರಿಂದ ಅನೇಕ ಕಾಲೋಚಿತ ರೋಗಗಳನ್ನು ತಡೆಯಬಹುದು. ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಹೊಟ್ಟೆಯಲ್ಲಿನ ಗ್ಯಾಸ್ ಸಮಸ್ಯೆಗಳನ್ನು ಮತ್ತು ಮಲಬದ್ಧತೆಯನ್ನು ಸಹ ನಿವಾರಿಸುತ್ತದೆ. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ತೆಗೆದುಕೊಳ್ಳುವುದು ಹೆಚ್ಚು ಪ್ರಯೋಜನಕಾರಿ.

ಇದನ್ನೂ ಓದಿ: ಶ್ವಾಸಕೋಶದ ಆರೋಗ್ಯವನ್ನು ಸುಧಾರಿಸಲು ಈ ಯೋಗ ಭಂಗಿಗಳು ಸಹಾಯಕ

ಸರಿಯಾಗಿ ನಿದ್ರೆ ಮಾಡದೆ ಹೋದರೆ ಈ ಸಮಸ್ಯೆಗಳಿಗೆ ಗುರಿಯಾಗಬೇಕಾಗುತ್ತದೆ ಎಚ್ಚರ ಇರಲಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ