AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raisin Water Benefits: ಒಣದ್ರಾಕ್ಷಿ ನೆನಸಿದ ನೀರು ಕುಡಿಯುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದು

ಹೃದಯದ ಆರೋಗ್ಯವನ್ನು ಸುಧಾರಿಸುವುದರಿಂದ ಹಿಡಿದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವವರೆಗೆ, ಒಣದ್ರಾಕ್ಷಿ ನೆನಸಿದ ನೀರು ಅನೇಕ ಪ್ರಯೋಜನಗಳಿಂದ ಕೂಡಿದೆ. ಒಣದ್ರಾಕ್ಷಿ ನೀರು ಅನೇಕ ಆರೋಗ್ಯ ಸಮಸ್ಯೆಗಳಿಂದ ನಮ್ಮನ್ನು ದೂರವಿಡಲು ಸಹಾಯ ಮಾಡುತ್ತದೆ.

Raisin Water Benefits: ಒಣದ್ರಾಕ್ಷಿ ನೆನಸಿದ ನೀರು ಕುಡಿಯುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದು
ಪ್ರಾತಿನಿಧಿಕ ಚಿತ್ರ
TV9 Web
| Updated By: shruti hegde|

Updated on: Oct 03, 2021 | 8:14 AM

Share

ಒಣದ್ರಾಕ್ಷಿ ನೆನಸಿದ ನೀರು ಕುಡಿಯುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದು. ಒಣದ್ರಾಕ್ಷಿ ಜನಪ್ರಿಯ ಡ್ರೈ ಫ್ರೂಟ್ಸ್​ಗಳಲ್ಲಿ ಒಂದಾಗಿದೆ. ಇದನ್ನು ಹೆಚ್ಚಾಗಿ ಸಿಹಿತಿಂಡಿಗಳನ್ನು ತಯಾರಿಸಲು ಬಳಸಲಾಗುತ್ತದೆ. ಒಣದ್ರಾಕ್ಷಿ ತುಂಬಾ ರುಚಿಯಾಗಿರುತ್ತವೆ. ರುಚಿಯ ಹೊರತಾಗಿ, ಈ ಒಣದ್ರಾಕ್ಷಿ(Raisin) ನಿಮ್ಮ ಆರೋಗ್ಯಕ್ಕೂ ಪ್ರಯೋಜನಕಾರಿ. ಅದರಲ್ಲೂ ಒಣದ್ರಾಕ್ಷಿ ನೆನಸಿದ ನೀರು ಕುಡಿಯುವುದು ದೇಹಕ್ಕೆ ಅನೇಕ ಆರೋಗ್ಯ ಪ್ರಯೋಜನಗಳೊಂದಿಗೆ ಶಕ್ತಿಯನ್ನು ಒದಗಿಸಲು ಉತ್ತಮ ಮಾರ್ಗವಾಗಿದೆ.

ಹೃದಯದ ಆರೋಗ್ಯವನ್ನು ಸುಧಾರಿಸುವುದರಿಂದ ಹಿಡಿದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವವರೆಗೆ, ಒಣದ್ರಾಕ್ಷಿ ನೆನಸಿದ ನೀರು ಅನೇಕ ಪ್ರಯೋಜನಗಳಿಂದ ಕೂಡಿದೆ. ಒಣದ್ರಾಕ್ಷಿ ನೀರು ಅನೇಕ ಆರೋಗ್ಯ ಸಮಸ್ಯೆಗಳಿಂದ ನಮ್ಮನ್ನು ದೂರವಿಡಲು ಸಹಾಯ ಮಾಡುತ್ತದೆ. ಇದು ಪಿತ್ತಜನಕಾಂಗಕ್ಕೆ ಸಂಬಂಧಿತ ಸಮಸ್ಯೆಗಳ ಚಿಕಿತ್ಸೆಗೆ ಪ್ರಯೋಜನಕಾರಿ. ಒಣದ್ರಾಕ್ಷಿ ನೀರನ್ನು ಮನೆಯಲ್ಲಿ ಹೇಗೆ ತಯಾರಿಸಬಹುದು ಮತ್ತು ಇದನ್ನು ಪ್ರತಿದಿನ ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಎಂದು ತಿಳಿಯುವುದು ಸೂಕ್ತ.

ಒಣದ್ರಾಕ್ಷಿ ನೆನಸಿದ ನೀರನ್ನು ತಯಾರಿಸುವುದು ಹೇಗೆ? 2 ಲೋಟ ನೀರು ಮತ್ತು 150 ಗ್ರಾಂ ಒಣದ್ರಾಕ್ಷಿ ತೆಗೆದುಕೊಳ್ಳಿ. ಪಾತ್ರೆಯಲ್ಲಿ ನೀರನ್ನು ಹಾಕಿ ಮತ್ತು ಅದನ್ನು ಕುದಿಸಿ. ನಂತರ ಒಣದ್ರಾಕ್ಷಿ ಸೇರಿಸಿ ಮತ್ತು ರಾತ್ರಿಯಿಡೀ ನೆನೆಯಲು ಬಿಡಿ. ಬೆಳಿಗ್ಗೆ ಈ ನೀರನ್ನು ಕಡಿಮೆ ಉರಿಯಲ್ಲಿ ಬಿಸಿ ಮಾಡಿ. ಬಳಿಕ ಈ ನೀರನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಒಣದ್ರಾಕ್ಷಿ ನೆನಸಿದ ನೀರನ್ನು ನಿಯಮಿತವಾಗಿ ಸೇವಿಸಿ.

ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ಆಗುವ ಲಾಭಗಳು ಪಿತ್ತಜನಕಾಂಗವನ್ನು ನಿರ್ವಿಷಗೊಳಿಸುತ್ತದೆ ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ನಿಮ್ಮ ದೇಹದಿಂದ ಎಲ್ಲಾ ಹಾನಿಕಾರಕ ಜೀವಾಣುಗಳನ್ನು ಹೊರಹಾಕಬಹುದು. ಇದು ರಕ್ತವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಒಣದ್ರಾಕ್ಷಿ ನೀರು ಪಿತ್ತಜನಕಾಂಗವನ್ನು ಸುಲಭವಾಗಿ ನಿರ್ವಿಷಗೊಳಿಸುತ್ತದೆ.

ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದರೆ ಒಣದ್ರಾಕ್ಷಿ ನೀರನ್ನು ಕುಡಿಯುವುದು ನಿಮಗೆ ಉತ್ತಮ ಪರಿಹಾರವಾಗಿದೆ. ಈ ನೀರು ನಿಮ್ಮ ಹೊಟ್ಟೆಯಲ್ಲಿರುವ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿಯಂತ್ರಿಸುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಒಣದ್ರಾಕ್ಷಿ ನೀರಿನಲ್ಲಿ ಉತ್ಕರ್ಷಣ ನಿರೋಧಕಗಳಿದ್ದು, ಅದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ನೀವು ಒಣದ್ರಾಕ್ಷಿ ನೀರನ್ನು ನಿಮ್ಮ ಆಹಾರದ ಒಂದು ಭಾಗವನ್ನಾಗಿ ಮಾಡಬೇಕು.

ಹೃದಯದ ಆರೋಗ್ಯವನ್ನು ಕಾಪಾಡುತ್ತದೆ ಒಣದ್ರಾಕ್ಷಿ ನೀರು ರಕ್ತವನ್ನು ಶುದ್ಧೀಕರಿಸುವಲ್ಲಿ ಕೆಲಸ ಮಾಡುತ್ತದೆ. ಇದು ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿವಾರಿಸುತ್ತದೆ ಮತ್ತು ನಿಮ್ಮ ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕ್ಯಾನ್ಸರ್ ತಡೆಯುತ್ತದೆ ಒಣದ್ರಾಕ್ಷಿಯಲ್ಲಿರುವ ಆಂಟಿಆಕ್ಸಿಡೆಂಟ್​ಗಳು ನಿಮ್ಮ ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್‌ಗೆ ಕಾರಣವಾಗಬಹುದಾದ ಅಂಶವನ್ನು ದೂರ ಮಾಡುತ್ತದೆ.

ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಬೆಳಿಗ್ಗೆ ಒಣದ್ರಾಕ್ಷಿ ನೀರನ್ನು ಕುಡಿಯುವುದು ಸಹ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಒಣದ್ರಾಕ್ಷಿಯಲ್ಲಿ ಫ್ರಕ್ಟೋಸ್ ಮತ್ತು ಗ್ಲೂಕೋಸ್ ಸಮೃದ್ಧವಾಗಿದ್ದು, ಇದು ನಿಮಗೆ ಶಕ್ತಿಯನ್ನು ತುಂಬುತ್ತದೆ. ಒಣದ್ರಾಕ್ಷಿ ಫೈಬರ್ ಅನ್ನು ಒಳಗೊಂಡಿರುತ್ತವೆ. ಅದು ನಿಮಗೆ ದೀರ್ಘಕಾಲದವರೆಗೆ ಹಸಿವಾಗದಂತೆ ನೋಡಿಕೊಳ್ಳುತ್ತದೆ.

ಇದನ್ನೂ ಓದಿ; ತೂಕ ಇಳಿಸಿಕೊಳ್ಳಲು ಅಂಜೂರ ಹಣ್ಣು ಸಹಾಯಕವೇ? ಈ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ

Weight Loss V/S Fat Loss: ಕೊಬ್ಬು ಮತ್ತು ತೂಕ ಇಳಿಕೆ; ಎರಡರಲ್ಲಿ ಯಾವುದು ಆರೋಗ್ಯಕರ ಆಯ್ಕೆ?

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?