Health Tips: ಡೈನಿಂಗ್ ಟೇಬಲ್ ಮೇಲೆ ಕೂತು ಊಟ ಮಾಡುತ್ತಿದ್ದೀರಾ? ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ

ಈಗ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಾರೆ. ಇದೇ ಪರಿಸ್ಥಿತಿ ಈಗ ಹೆಚ್ಚಿನ ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಹಾಗಿದ್ದರೆ ಅದ್ಯಾವುದು ಎಂದು ತಿಳಿದುಕೊಳ್ಳೊಣ.

Health Tips: ಡೈನಿಂಗ್ ಟೇಬಲ್ ಮೇಲೆ ಕೂತು ಊಟ ಮಾಡುತ್ತಿದ್ದೀರಾ? ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Oct 26, 2021 | 8:28 AM

ಬದಲಾದ ಕಾಲಕ್ಕೆ ತಕ್ಕಂತೆ ಮನುಷ್ಯನ ಜೀವನಶೈಲಿಯಲ್ಲಿಯೂ ಬದಲಾವಣೆಯಾಗಿದೆ. ಒಂದು ಕಾಲದಲ್ಲಿ ಹೆಚ್ಚು ದೈಹಿಕ ಚಟುವಟಿಕೆ, ಕಡಿಮೆ ಮಾನಸಿಕ ಚಟುವಟಿಕೆ ಇತ್ತು. ಆದರೆ ಈಗ ಪರಿಸ್ಥಿತಿಗಳು ಸಂಪೂರ್ಣವಾಗಿ ಬದಲಾಗಿವೆ. ಜೀವನಶೈಲಿಯಲ್ಲಿನ ಬದಲಾವಣೆಗಳು ಮಾನವನ ಆಹಾರ ಪದ್ಧತಿ ಮತ್ತು ಆಹಾರ ಸೇವನೆಯಲ್ಲಿಯೂ ಕೂಡ ಬದಲಾವಣೆಗಳನ್ನು ತಂದಿದೆ. ಹಿಂದೆ ನೆಲದ ಮೇಲೆ ಎಲ್ಲರೂ ಒಟ್ಟಾಗಿ ಕುಳಿತು ಊಟ ಮಾಡುತ್ತಿದ್ದರು. ಆದರೆ ಈಗ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಾರೆ. ಇದೇ ಪರಿಸ್ಥಿತಿ ಈಗ ಹೆಚ್ಚಿನ ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಹಾಗಿದ್ದರೆ ಅದ್ಯಾವುದು ಎಂದು ತಿಳಿದುಕೊಳ್ಳೊಣ.

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದಾಗುವ ಪ್ರಯೋಜನಗಳು ಸುಲಭವಾಗಿ ಜೀರ್ಣವಾಗುತ್ತದೆ ನೆಲದ ಮೇಲೆ ಕುಳಿತು ಆಹಾರವನ್ನು ಸೇವಿಸುವುದರಿಂದ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ. ತಟ್ಟೆ ಕೆಳಗೆ ಇರುವುದರಿಂದ ಪ್ರತಿ ಬಾರಿಯೂ ಹಿಂದಕ್ಕೆ ಮತ್ತು ಮುಂದಕ್ಕೆ ಚಲಿಸುವಂತೆ ಮಾಡುತ್ತದೆ. ಹೀಗೆ ಮಾಡುವುದರಿಂದ ಹೊಟ್ಟೆಯ ಸ್ನಾಯುಗಳು ಕ್ರಿಯಾಶೀಲವಾಗುತ್ತವೆ. ಇದರೊಂದಿಗೆ ತೆಗೆದುಕೊಂಡ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ.

ತೂಕ ನಷ್ಟ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಕಶೇರುಖಂಡಗಳು ನೆಟ್ಟಗಾಗುತ್ತವೆ. ಅಲ್ಲದೇ ಮಾಹಿತಿಯು ಮೆದುಳಿಗೆ ಸುಲಭವಾಗಿ ತಲುಪುತ್ತದೆ. ಇದರೊಂದಿಗೆ, ಮೆದುಳು ಹೊಟ್ಟೆ ತುಂಬಿದೆ ಎಂದು ತ್ವರಿತವಾಗಿ ಗುರುತಿಸುತ್ತದೆ ಮತ್ತು ಅದು ಎಂದು ಹೇಳುತ್ತದೆ. ಆ ಮೂಲಕ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ.

ಸ್ನಾಯು ನೋವು ಕಡಿಮೆಯಾಗುತ್ತದೆ ಇತ್ತೀಚಿನ ದಿನಗಳಲ್ಲಿ ಚಕ್ಕರಮಟ್ಟೆ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವುದು ಸಂಪೂರ್ಣವಾಗಿ ಕಡಿಮೆಯಾಗಿದೆ. ಹೆಚ್ಚುತ್ತಿರುವ ಕುರ್ಚಿ, ಸೋಫಾಗಳ ಬಳಕೆಯಿಂದ ಎಲ್ಲರೂ ಮೇಲೆ ಕುಳಿತುಕೊಳ್ಳುವಂತಾಗಿದೆ. ಆದರೆ ನೆಲದ ಮೇಲೆ ಕುಳಿತುಕೊಳ್ಳುವುದರಿಂದ ಸ್ನಾಯುಗಳು ಮತ್ತು ಕೀಲುಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಹಾಗೆಯೇ ಬೆನ್ನು ನೋವು ಮತ್ತು ಇನ್ನಿತರ ಸ್ನಾಯು ಸಮಸ್ಯೆ ದೂರವಾಗುತ್ತದೆ.

ರಕ್ತ ಸಂಚಾರ ಉತ್ತಮಗೊಳ್ಳುತ್ತದೆ ನೆಲದ ಮೇಲೆ ಕುಳಿತುಕೊಳ್ಳುವುದರಿಂದ ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಕುರ್ಚಿಗಳ ಮೇಲೆ ಕುಳಿತುಕೊಳ್ಳುವುದರಿಂದ ಹೃದಯಕ್ಕೆ ಸರಿಯಾಗಿ ರಕ್ತ ಪರಿಚಲನೆಯಾಗುವುದಿಲ್ಲ. ಅಂದರೆ ರಕ್ತ ಸಂಚಾರವನ್ನು ಇದು ತಡೆಯುತ್ತದೆ. ಹಾಗಾಗಿ ಊಟ ಮಾಡುವಾಗ ನೆಲದ ಮೇಲೆ ಕುಳಿತು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.

ಇದನ್ನೂ ಓದಿ: Color Rice Benefits: ನಾವು ಸೇವಿಸುವ ಅಕ್ಕಿಯಲ್ಲೂ ಬಣ್ಣಗಳಿವೇ? ಯಾವ ಬಣ್ಣದ ಅಕ್ಕಿ ಆರೋಗ್ಯಕ್ಕೆ ಒಳ್ಳೆಯದು ಗೊತ್ತಾ?

Health Tips: ಸಾತ್ವಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ