AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Late Night Eating: ರಾತ್ರಿ ತಡವಾಗಿ ಊಟ ಮಾಡುವ ಅಭ್ಯಾಸ ಇದೆಯೇ? ಅಪಾಯದ ಬಗ್ಗೆ ಎಚ್ಚರ ಇರಲಿ

ಪ್ರತಿದಿನ ನಾವು ರಾತ್ರಿ ಮಲಗುವ 90 ನಿಮಿಷಗಳ ಮೊದಲು ಊಟ ಮಾಡಬೇಕು. ಆಗ ಮಾತ್ರ ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಬಹುದು.

Late Night Eating: ರಾತ್ರಿ ತಡವಾಗಿ ಊಟ ಮಾಡುವ ಅಭ್ಯಾಸ ಇದೆಯೇ? ಅಪಾಯದ ಬಗ್ಗೆ ಎಚ್ಚರ ಇರಲಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Aug 17, 2021 | 8:54 AM

ಸರಿಯಾದ ಸಮಯದಲ್ಲಿ ಊಟ ಮಾಡುವುದು ಬಹಳ ಮುಖ್ಯ. ಆಗ ಮಾತ್ರ ದೇಹಕ್ಕೆ ಸಾಕಷ್ಟು ಶಕ್ತಿ ಸಿಗುತ್ತದೆ. ತಡವಾಗಿ ತಿನ್ನುವುದರಿಂದ ನಮ್ಮ ದೇಹಕ್ಕೆ ಸಾಕಷ್ಟು ಹಾನಿಯಾಗುತ್ತದೆ. ತಡರಾತ್ರಿಯಲ್ಲಿ(Late Night Eating) ತಿನ್ನುವುದು ದೇಹದಲ್ಲಿನ ಅನೇಕ ರೋಗಗಳಿಗೆ ಆವಾಸಸ್ಥಾನವಾಗಿ ಪರಿಣಮಿಸಲಿದೆ. ಸಂಶೋಧನೆಯ ಪ್ರಕಾರ, ಊಟ ಮತ್ತು ನಿದ್ರೆಯ ನಡುವೆ 3 ಗಂಟೆಗಳ ಸಮಯವಿರಬೇಕು. ಪ್ರತಿದಿನ ನಾವು ರಾತ್ರಿ ಮಲಗುವ 90 ನಿಮಿಷಗಳ ಮೊದಲು ಊಟ ಮಾಡಬೇಕು. ಆಗ ಮಾತ್ರ ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಬಹುದು. ಇಲ್ಲದಿದ್ದರೆ ಅನೇಕ ಅನಾಹುತಗಳು ಸಂಭವಿಸುತ್ತವೆ. ತಡರಾತ್ರಿಯಲ್ಲಿ ಆಹಾರ ಸೇವಿಸುವುದರಿಂದ ಆಗುವ ಅಪಾಯಗಳು ಈ ಕೆಳಗಿನಂತಿವೆ.

ಸ್ಥೂಲಕಾಯ ವಾಯುವ್ಯ ವಿಶ್ವವಿದ್ಯಾಲಯದ ಪ್ರಕಾರ, ಮಲಗುವ ಸಮಯದಲ್ಲಿ ತಿನ್ನುವುದು ಸ್ಥೂಲಕಾಯದ ಅಪಾಯವನ್ನು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ, ಹೆಚ್ಚುವರಿ ಕ್ಯಾಲೊರಿ ದೇಹದಲ್ಲಿ ದೀರ್ಘಕಾಲದವರೆಗೆ ಸಂಗ್ರಹವಾಗುತ್ತದೆ. ಇದು ಕೊನೆಗೆ ಕೊಬ್ಬಿನ ರೂಪಕ್ಕೆ ತಿರುಗುತ್ತದೆ. ಪರಿಣಾಮ ದೇಹದಲ್ಲಿ ಬೊಜ್ಜು ಕೂಡ ಹೆಚ್ಚಾಗುತ್ತದೆ.

ರಕ್ತದೊತ್ತಡ, ಮಧುಮೇಹ ಮತ್ತು ಹೃದ್ರೋಗದ ಅಪಾಯ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ನಡೆಸಿದ ಸಂಶೋಧನೆಯ ಪ್ರಕಾರ, ತಡರಾತ್ರಿಯಲ್ಲಿ ತಿನ್ನುವುದು ಅಧಿಕ ಬಿಪಿ ಮತ್ತು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಇದು ಗ್ಲೂಕೋಸ್ ಅನ್ನು ಹೆಚ್ಚಿಸುತ್ತದೆ. ರಕ್ತದಲ್ಲಿ ನಿರ್ದಿಷ್ಟ ಕೊಬ್ಬನ್ನು ಹೆಚ್ಚಿಸಲು ಕಾರಣವಾಗುತ್ತದೆ. ಅಲ್ಲದೆ ಇದು ಹೃದಯ ಕಾಯಿಲೆಯ ಅಪಾಯವನ್ನು ಮತ್ತಷ್ಟು ಹೆಚ್ಚಿಸುತ್ತದೆ.

ನೆನಪಿನ ಶಕ್ತಿಯ ಮೇಲೆ ಪರಿಣಾಮ ಲಾಸ್ ಏಂಜಲೀಸ್​ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಸಂಶೋಧಕರು ಮಲಗುವ ವೇಳೆ ಆಹಾರ ತಿನ್ನುವುದರಿಂದ ಜ್ಞಾಪಕಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ. ಹಾಗೆಯೇ ಕಲಿಯುವ ಸಾಮರ್ಥ್ಯವೂ ಕಡಿಮೆಯಾಗುತ್ತದೆ ಎಂದು ಕಂಡುಬಂದಿದೆ.

ಅಸ್ವಸ್ಥತೆ ತಡರಾತ್ರಿಯಲ್ಲಿ ತಿನ್ನುವುದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಹೆಚ್ಚಾಗುತ್ತದೆ. ವಾಸ್ತವವಾಗಿ, ಆಯಾಸದಿಂದಾಗಿ ಇದು ಸಂಭವಿಸುತ್ತದೆ. ಆಯಾಸದಿಂದಾಗಿ ವ್ಯಕ್ತಿಯು ಬೇಗನೆ ಶಕ್ತಿಯನ್ನು ಪಡೆಯಲು ಆಹಾರವನ್ನು ಸೇವಿಸುವುದು ಅಗತ್ಯ.

ಜೀರ್ಣಕಾರಿ ಸಮಸ್ಯೆಗಳು ರಾತ್ರಿಯಲ್ಲಿ ಕಡಿಮೆ ದೈಹಿಕ ಚಟುವಟಿಕೆ ಇರುತ್ತದೆ. ಇದು ಚಯಾಪಚಯವನ್ನು ನಿಧಾನಗೊಳಿಸುತ್ತದೆ. ದೇಹವು ಆಹಾರವನ್ನು ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ. ಪರಿಣಾಮವಾಗಿ, ದೇಹವು ಸರಿಯಾದ ಪೋಷಣೆಯನ್ನು ಪಡೆಯುವುದಿಲ್ಲ.

ಇದನ್ನೂ ಓದಿ: Dangerous Food: ಒಂದೇ ಬಾರಿ ಎರಡು ಪದಾರ್ಥಗಳನ್ನು ಸೇವಿಸುವ ಮುನ್ನ ನಿಮ್ಮ ಗಮನ ಆರೋಗ್ಯದ ಹಿತದೃಷ್ಟಿ ಮೇಲೆ ಇರಲಿ

Cashew Benefits: ಗೋಡಂಬಿಯಲ್ಲಿನ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದರೆ ಒಂದು ಗೋಡಂಬಿಯನ್ನು ಕೂಡ ಬಿಡುವುದಿಲ್ಲ

ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್