ಮಲಗುವ ಮುನ್ನ ಒಂದು ಲೋಟ ಬಿಸಿ ನೀರಿಗೆ ನಿಂಬೆ ರಸ ಹಾಕಿ ಕುಡಿಯಿರಿ; ಪ್ರಯೋಜನ ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸವನ್ನು ಬೆರೆಸಿ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಅವುಗಳು ಯಾವುವು ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ.
ಮಾನವ ದೇಹವು ಸುಮಾರು 60 ಪ್ರತಿಶತದಷ್ಟು ನೀರಿನಿಂದ ಕೂಡಿದ್ದು, ದೇಹವನ್ನು ಆರೋಗ್ಯವಾಗಿಡುವಲ್ಲಿ ನೀರು ಪ್ರಮುಖ ಪಾತ್ರ ವಹಿಸುತ್ತದೆ. ನೀರು ಕುಡಿಯುವುದು ಮತ್ತು ಆ ಮೂಲಕ ದೇಹದ ತೇವಾಂಶ ಹೆಚ್ಚಿಸಿಕೊಳ್ಳುವುದು ಎಷ್ಟು ಮುಖ್ಯ ಎಂದು ನಮಗೆಲ್ಲರಿಗೂ ತಿಳಿದಿದೆ. ದೇಹದಿಂದ ವಿಷವನ್ನು ಹೊರಹಾಕಲು ನೀರು ಸಹಾಯ ಮಾಡುತ್ತದೆ. ಇದಲ್ಲದೇ, ಇದು ಕೂದಲು ಮತ್ತು ಚರ್ಮದ ಹೊಳಪು ಹೆಚ್ಚಿಸಲು ಸಹಾಯ ಮಾಡುತ್ತದೆ.
ಸದ್ಯ ಕುತೂಹಲಕಾರಿ ಅಂಶ ಏನೆಂದರೆ, ನಿಂಬೆ ರಸವನ್ನು ನೀರಿನೊಂದಿಗೆ ಬೆರೆಸಿದಾಗ, ಅದರ ಪ್ರಯೋಜನಗಳು ಅನೇಕ ಪಟ್ಟು ಹೆಚ್ಚಾಗುತ್ತದೆ. ಅದೇ ರೀತಿ ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸವನ್ನು ಬೆರೆಸಿ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಅವುಗಳು ಯಾವುವು ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ.
ಒಂದು ಲೋಟ ಬೆಚ್ಚಗಿನ ನೀರಿಗೆ ನಿಂಬೆ ರಸ ಹಾಕಿ ಕುಡಿಯುವುದರಿಂದ ಆಗುವ ಲಾಭಗಳು 1. ವಿಟಮಿನ್ ಸಿ ಯ ಮುಖ್ಯ ಮೂಲ ನಿಂಬೆಹಣ್ಣು ಒಂದು ಸಿಟ್ರಸ್ ಆಹಾರವಾಗಿದ್ದು, ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ನಿಂಬೆ ರಸವನ್ನು ನಿಯಮಿತವಾಗಿ ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಇದು ದೇಹದಲ್ಲಿ ವಿಟಮಿನ್ ಸಿ ಕೊರತೆಯನ್ನು ನೀಗಿಸಲು ಸಹಾಯ ಮಾಡುತ್ತದೆ.
2. ದೇಹವನ್ನು ಹೈಡ್ರೇಟ್ ಆಗಿರಿಸುತ್ತದೆ ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ನೀರಿಗೆ ನಿಂಬೆ ರಸ ಹಾಕಿ ಕುಡಿಯುವುದರಿಂದ ದೇಹವು ತೇವಾಂಶದಿಂದ ಕೂಡಿರುತ್ತದೆ. ಇದರ ಹೊರತಾಗಿ, ನಿಂಬೆ ರಸ ಚರ್ಮಕ್ಕೆ ಪ್ರಯೋಜನಕಾರಿ. ಈ ನೀರು ಚರ್ಮವನ್ನು ಚೆನ್ನಾಗಿ ತೇವವಾಗಿಡಲು ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಸಿ ಇದ್ದು, ಇದು ಚರ್ಮವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.
3. ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಸಕ್ಕರೆ ರಹಿತ ಪಾನೀಯವು ಕೊಬ್ಬನ್ನು ಸುಡಲು ಸಹಾಯ ಮಾಡುತ್ತದೆ. ನೀವು ತೂಕ ಇಳಿಕೆಯ ಗುರಿಯನ್ನು ಹೊಂದಿದ್ದರೆ. ಇದು ಸಹಾಯ ಮಾಡುತ್ತದೆ. ಆದ್ದರಿಂದ, ಮಲಗುವ ಮುನ್ನ ಬಿಸಿ ನೀರಿಗೆ ನಿಂಬೆ ರಸ ಹಾಕಿ ಕುಡಿಯಿರಿ. ಇದು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
4. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಆರೋಗ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸಮಸ್ಯೆಗಳು ಕಳಪೆ ಜೀರ್ಣಕ್ರಿಯೆಯಿಂದಾಗಿವೆ. ಆದ್ದರಿಂದ, ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಂಡರೆ, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು. ಆದ್ದರಿಂದ, ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ನೀರಿಗೆ ನಿಂಬೆ ರಸ ಹಾಕಿ ಸೇವಿಸುವುದರಿಂದ ಜೀರ್ಣಕ್ರಿಯೆ ಉತ್ತೇಜಿಸುತ್ತದೆ ಮತ್ತು ಚಯಾಪಚಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
5. ಮೌತ್ ಫ್ರೆಶ್ನರ್ ಆಗಿ ಕಾರ್ಯನಿರ್ವಹಿಸುತ್ತದೆ ಇದು ಸುಲಭವಾಗಿ ತಯಾರಿಸಬಹುದಾದ ಪಾನೀಯವಾಗಿದ್ದು, ನೈಸರ್ಗಿಕ ಬಾಯಿ ಫ್ರೆಶ್ನರ್ ಆಗಿ ಕಾರ್ಯನಿರ್ವಹಿಸುತ್ತದೆ. ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ನೀರಿಗೆ ನಿಂಬೆ ರಸ ಹಾಕಿ ಕುಡಿದರೆ ಬಾಯಿಯ ದುರ್ವಾಸನೆ ತಡೆಯಬಹುದು. ಇದು ಹೈಡ್ರೇಟಿಂಗ್ ಪಾನೀಯವಾಗಿದ್ದು, ಇದು ಬಾಯಿಯನ್ನು ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ.
6. ಮೂತ್ರಪಿಂಡದ ಕಲ್ಲುಗಳನ್ನು ತಡೆಯುತ್ತದೆ ಮೂತ್ರಪಿಂಡವು ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಆದ್ದರಿಂದ, ಆರೋಗ್ಯವಾಗಿರಲು ಮೂತ್ರಪಿಂಡದ ಸಮಸ್ಯೆಗಳಿಂದ ದೂರವಿರುವುದು ಬಹಳ ಮುಖ್ಯ. ಒಂದು ಲೋಟ ಬೆಚ್ಚಗಿನ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳನ್ನು ತಡೆಗಟ್ಟಬಹುದು. ಇದು ಕ್ಯಾಲ್ಸಿಯಂ ಕಲ್ಲುಗಳ ರಚನೆಯನ್ನು ತಡೆಯುವ ಸಿಟ್ರಿಕ್ ಆಮ್ಲವನ್ನು ಹೊಂದಿರುತ್ತದೆ.
ಇದನ್ನೂ ಓದಿ: Health Benefits: ನಿಂಬೆ ಹಣ್ಣಿನ ಜ್ಯೂಸ್ ಅಜೀರ್ಣಕ್ಕೆ ಮಾತ್ರವಲ್ಲ, ಇನ್ನಿತರ ಕಾಯಿಲೆಗಳಿಂದಲೂ ನಮ್ಮನ್ನು ರಕ್ಷಿಸುತ್ತದೆ
Aloe Vera Benefits: ನಿತ್ಯ ಸೇವಿಸುವ ಆಹಾರದ ಜತೆಗೆ ಅಲೋವೆರಾ ಬಳಕೆ ಹೇಗೆ?