Hypothyroidism: ಥೈರಾಯ್ಡ್ ಸಮಸ್ಯೆ ಇರುವವರು ಯಾವ ಆಹಾರ ಸೇವಿಸಬಹುದು ಹಾಗೂ ಯಾವುದನ್ನು ಸೇವಿಸಬಾರದು?

ಥೈರಾಯ್ಡ್ ಸಮಸ್ಯೆಯನ್ನು ಕಡಿಮೆ ಮಾಡಲು ಯಾವುದೇ ಚಿಕಿತ್ಸೆ, ನಿರ್ದಿಷ್ಟ ಆಹಾರದ ಯೋಜನೆ ಇಲ್ಲ. ಆದರೆ ಸರಿಯಾದ ಆಹಾರವನ್ನು ಸೇವಿಸುವುದರಿಂದ ರೋಗಲಕ್ಷಣಗಳ ತೀವ್ರತೆಯನ್ನು ಕಡಿಮೆ ಮಾಡಬಹುದು. ನಮ್ಮ ದೇಹದ ಸರಿಯಾದ ಕಾರ್ಯನಿರ್ವಹಣೆಗೆ ಖನಿಜಗಳು ಅತ್ಯಗತ್ಯ.

Hypothyroidism: ಥೈರಾಯ್ಡ್ ಸಮಸ್ಯೆ ಇರುವವರು ಯಾವ ಆಹಾರ ಸೇವಿಸಬಹುದು ಹಾಗೂ ಯಾವುದನ್ನು ಸೇವಿಸಬಾರದು?
ಸಂಗ್ರಹ ಚಿತ್ರ
Follow us
TV9 Web
| Updated By: preethi shettigar

Updated on: Oct 13, 2021 | 12:16 PM

ಥೈರಾಯ್ಡ್ ಗ್ರಂಥಿಗಳು ಸರಿಯಾಗಿ ಕಾರ್ಯನಿರ್ವಹಿಸಲು ವಿಫಲವಾಗುವಂತೆ ಮಾಡುತ್ತದೆ ಅಥವಾ ಟಿಎಸ್​ಹೆಚ್​, ಟಿ3 ಮತ್ತು ಟಿ4 ಹಾರ್ಮೋನುಗಳ ಅಸಮತೋಲಿತ ಮಟ್ಟವನ್ನು ಉತ್ಪಾದಿಸುತ್ತವೆ. ಇದರಿಂದಾಗಿ ಆಹಾರ ಸೇವಿಸುವಾಗ ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಸಾಮಾನ್ಯ ಮತ್ತು ಗಂಭೀರವಾದ ಥೈರಾಯ್ಡ್ ಸಮಸ್ಯೆಗಳಲ್ಲಿ ಹೈಪೋಥೈರಾಯ್ಡಿಸಮ್ ಕೂಡ ಒಂದು. ಈ ಸ್ಥಿತಿಯಲ್ಲಿ, ದೇಹವು ಸಾಕಷ್ಟು ಥೈರಾಯ್ಡ್ ಹಾರ್ಮೋನುಗಳನ್ನು ಉತ್ಪಾದಿಸಲು ವಿಫಲವಾಗುತ್ತದೆ ಮತ್ತು ಇದು ವ್ಯಕ್ತಿಯ ದೈನಂದಿನ ಕಾರ್ಯಚಟುವಟಿಕೆ ಹಾಗೂ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಈ ಕಾಯಿಲೆಗೆ ಆರಂಭಿಕ ರೋಗಲಕ್ಷಣಗಳು ನಿರ್ಣಾಯಕವಾಗಿದೆ ಮತ್ತು ಅದಕ್ಕೆ ಸಮಗ್ರ ರೀತಿಯಲ್ಲಿ ಚಿಕಿತ್ಸೆ ನೀಡುವುದು ಅತ್ಯಗತ್ಯ. ಕೇವಲ ಔಷಧಿಯು ರೋಗವನ್ನು ಗುಣಪಡಿಸಲು ಸಾಧ್ಯವಿಲ್ಲ, ಆದ್ದರಿಂದ ವ್ಯಕ್ತಿಯ ಆಹಾರ ಕ್ರಮವು ಕೂಡ ಮುಖ್ಯವಾಗಿದೆ.

ಥೈರಾಯ್ಡ್ ಗ್ರಂಥಿಯಿಂದ ಉತ್ಪತ್ತಿಯಾಗುವ ಹಾರ್ಮೋನುಗಳು ಮೂಡ್ ಡಿಸಾರ್ಡರ್ಸ್, ತೂಕ ಬದಲಾವಣೆ, ಆಯಾಸದ ಮಟ್ಟ ಮತ್ತು ಚರ್ಮವನ್ನು ಆರೋಗ್ಯವಾಗಿಡಲು ಪ್ರಮುಖ ಪಾತ್ರವಹಿಸುತ್ತವೆ. ಆದ್ದರಿಂದ, ಶಕ್ತಿಯ ಮಟ್ಟವನ್ನು ಹೆಚ್ಚಿಸುವ, ಹಾರ್ಮೋನ್ ಮಟ್ಟವನ್ನು ಹೆಚ್ಚಿಸುವ ಮತ್ತು ಕಾರ್ಯನಿರ್ವಹಣೆಯನ್ನು ಉಳಿಸಿಕೊಳ್ಳುವ ಆಹಾರವನ್ನು ಸೇವಿಸುವುದು ಸೂಕ್ತ.

ಥೈರಾಯ್ಡ್ ಸಮಸ್ಯೆಯನ್ನು ಕಡಿಮೆ ಮಾಡಲು ಯಾವುದೇ ಚಿಕಿತ್ಸೆ, ನಿರ್ದಿಷ್ಟ ಆಹಾರದ ಯೋಜನೆ ಇಲ್ಲ. ಆದರೆ ಸರಿಯಾದ ಆಹಾರವನ್ನು ಸೇವಿಸುವುದರಿಂದ ರೋಗಲಕ್ಷಣಗಳ ತೀವ್ರತೆಯನ್ನು ಕಡಿಮೆ ಮಾಡಬಹುದು. ನಮ್ಮ ದೇಹದ ಸರಿಯಾದ ಕಾರ್ಯನಿರ್ವಹಣೆಗೆ ಖನಿಜಗಳು ಅತ್ಯಗತ್ಯ. ಅಯೋಡಿನ್ ಒಂದು ಖನಿಜವಾಗಿದ್ದು, ಅದು ಸರಿಯಾದ ಥೈರಾಯ್ಡ್ ಕಾರ್ಯಕ್ಕೆ ಸಂಬಂಧಿಸಿದೆ. ಅಯೋಡಿನ್ ಮಟ್ಟದಲ್ಲಿನ ತೊಂದರೆ, ಥೈರಾಯ್ಡ್​ನ ತೀವ್ರತೆಗೆ ಕಾರಣ ಆಗಬಹುದು.

ಥೈರಾಯ್ಡ್ ಸಮಸ್ಯೆಯಿಂದ ದೂರವಿರಲು ಈ ಆಹಾರವನ್ನು ಸೇವಿಸಿ ಜನರು ವಿಟಮಿನ್ ಡಿ, ಸೆಲೆನಿಯಮ್, ಟೈರೋಸಿನ್ ಮತ್ತು ಸತು ಸೇರಿದಂತೆ ಪ್ರಮುಖವಾದ ಜೀವಸತ್ವಗಳು, ಖನಿಜಗಳು ಮತ್ತು ಪೋಷಕಾಂಶಗಳನ್ನು ಸೇವಿಸುವತ್ತ ಗಮನ ಹರಿಸಬೇಕು. ಇವುಗಳು ಹೈಪೋಥೈರಾಯ್ಡಿಸಮ್​ಗೆ ಸಂಬಂಧಿಸಿದ ಹಲವಾರು ರೋಗಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

ನೀವು ಹೈಪೋಥೈರಾಯ್ಡಿಸಮ್ ಹೊಂದಿದ್ದರೆ, ಸೊಪ್ಪು, ತರಕಾರಿ, ದ್ವಿದಳ ಧಾನ್ಯಗಳನ್ನು ಸೇವಿಸಿ. ದ್ವಿದಳ ಧಾನ್ಯಗಳು ಬಿ-ಜೀವಸತ್ವಗಳು, ಸತು ಮತ್ತು ಅಮೈನೋ ಆಮ್ಲಗಳ ಸಮೃದ್ಧ ಮೂಲಗಳಾಗಿವೆ. ಗೆಣಸು, ಸೇಬು, ಕುಂಬಳಕಾಯಿ ಮತ್ತು ಪಾಲಕ್​ ಸೊಪ್ಪಿನಲ್ಲಿ ಹೆಚ್ಚಿನ ಪೋಷಕಾಂಶಗಳಿವೆ. ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಮತ್ತು ತೂಕ ಹೆಚ್ಚಾಗುವುದನ್ನು ನಿರ್ವಹಿಸಲು ಸಹಾಯ ಮಾಡುತ್ತವೆ.

ಈ ಆಹಾರ ಪದಾರ್ಥಗಳಿಂದ ದೂರವಿರಿ ಜಂಕ್ ಫುಡ್​, ಸಂಸ್ಕರಿಸಿದ ಆಹಾರ, ಕೊಬ್ಬು ತುಂಬಿದ ಆಹಾರಗಳನ್ನು ಸೇವಿಸಬೇಡಿ. ಥೈರಾಯ್ಡ್ ಸಮಸ್ಯೆ ಇರುವವರು ಸೋಯಾ ಬೀನ್​, ಸೋಯಾ ಸಾಸ್‌ಗಳಂತಹ ಆಹಾರವನ್ನು ಕಡಿಮೆ ಮಾಡಬೇಕು ಅಥವಾ ತಪ್ಪಿಸಬೇಕು. ಹೂಕೋಸು, ಎಲೆಕೋಸು ಅನ್ನು ನಿಯಮಿತ ಪ್ರಮಾಣದಲ್ಲಿ ಸೇವಿಸಬೇಕು.

ಇದನ್ನೂ ಓದಿ: Thyroid Patients: ಥೈರಾಯ್ಡ್​​ ಸಮಸ್ಯೆ ಇರುವವರು ಈ ಆಹಾರಗಳನ್ನು ಸೇವಿಸಲೇಬಾರದು! ಕಾರಣ ತಿಳಿಯಿರಿ

Health Tips: ಥೈರಾಯ್ಡ್​ ಸಮಸ್ಯೆ ನಿಯಂತ್ರಿಸಲು ಈ ಹಣ್ಣುಗಳನ್ನು ಸೇವಿಸಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್