Sleeping Position: ನೀವು ಮಲಗುವ ಭಂಗಿ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು

ನಿಮ್ಮ ಮಲಗುವ ಭಂಗಿಯು ನಿಮಗೆ ಆರಾಮದಾಯಕ ಎಂದು ಅನಿಸಿದರೂ ಕೂಡ ಇದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು.

Sleeping Position: ನೀವು ಮಲಗುವ ಭಂಗಿ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು
ಸಾಂದರ್ಭಿಕ ಚಿತ್ರImage Credit source: Times of India
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on: Dec 11, 2022 | 2:00 PM

ನಿಮ್ಮ ದೇಹ ಮತ್ತು ಮನಸ್ಸಿಗೆ ನಿದ್ರೆ ಬಹಳ ಮುಖ್ಯವಾಗಿದೆ. ಆದ್ದರಿಂದಲೇ ನಿದ್ರಾಹೀನತೆಯಂತಹ(Insomnia) ಸಮಸ್ಯೆಗಳು ನಿಮ್ಮ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮಗಳನ್ನು ಉಂಟುಮಾಡಬಹುದು. ಇದರಿಂದಾಗಿ ನಿಮ್ಮ ಯೋಚನಾ ಶಕ್ತಿ, ಏಕಾಗ್ರತೆ, ಭಾವನೆಗಳು ಮತ್ತು ದೈಹಿಕ ಯೋಗಕ್ಷೇಮದ ಮೇಲೆ ಅಡ್ಡ ಪರಿಣಾಮವನ್ನುಂಟು ಮಾಡುತ್ತದೆ. ಆದ್ದರಿಂದ ಸರಿಯಾದ ನಿದ್ದೆಯ ಬಗ್ಗೆ ಹೆಚ್ಚು ಗಮನಹರಿಸುವುದು ಅತ್ಯಂತ ಅಗತ್ಯವಾಗಿದೆ.

ನೀವು ಮಲಗುವ ಭಂಗಿ(Sleeping position): ಸಾಮಾನ್ಯ ನೀವು ಮಲಗುವ ಭಂಗಿಯನ್ನು ಮೂರು ಭಾಗಗಳಾಗಿ ವಿಂಗಡಿಸಬಹುದಾಗಿದೆ. ಹೊಟ್ಟೆಯ ಮೇಲೆ ಮಲಗುವುದು, ಒಂದು ಬದಿಗೆ ಮಲಗುವುದು ಹಾಗೂ ಬೆನ್ನಿನ ಮೇಲೆ ಮಲಗುವುದು. ನಿಮ್ಮ ಮಲಗುವ ಭಂಗಿಯು ನಿಮಗೆ ಆರಾಮದಾಯಕ ಎಂದು ಅನಿಸಿದರೂ ಕೂಡ ಇದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು.

1.ಬೆನ್ನಿನ ಮೇಲೆ ಮಲಗುವುದು(On your back):

ಈ ರೀತಿಯಲ್ಲಿ ಮಲಗುವುದು ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಮ್ಮ ಬೆನ್ನಿನ ಮೇಲೆ ಮಲಗುವುದು ನಿಮ್ಮ ಬೆನ್ನುಮೂಳೆಗೆ ಒಳ್ಳೆಯದು. ಈ ರೀತಿಯಾಗಿ ಮಲಗುವುದರಿಂದ ನಿಮ್ಮ ಬೆನ್ನು ಮತ್ತು ಕತ್ತಿನ ಸ್ನಾಯುಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಜೊತೆಗೆ ಈ ಭಂಗಿ ನಿಮ್ಮ ಚರ್ಮದಲ್ಲಿ ವಿಶೇಷವಾಗಿ ಮಹಿಳೆರಯ ಎದೆಯ ಭಾಗದಲ್ಲಿ ಸುಕ್ಕು ಬರದಿರಲು ಸಹಾಯಕವಾಗಿದೆ.

ಇದನ್ನೂ ಓದಿ: ನಿಮಗೆ ನಿದ್ರಾಹೀನತೆ ಕಾಡುತ್ತಿದೆಯಾ ಈ ಮನೆ ಮದ್ದು ಪ್ರಯತ್ನಿಸಿ

2. ಒಂದು ಬದಿ ಮಲಗುವುದು(On your side):

ನಿಮ್ಮ ದೇಹದ ಎಡ ಅಥವಾ ಬಲ ಭಾಗದಲ್ಲಿ ನೀವು ಪ್ರತಿ ದಿನ ಮಲಗುವುದು ಅಭ್ಯಾಸ ಮಾಡಿಕೊಂಡಿದ್ದೀರಾ? ಈ ಅಭ್ಯಾಸ ನಿಮಗೆ ಆರಾಮದಾಯಕ ಎಂದು ಎನಿಸಿದರೂ ಕೂಡ ಇದು ನಿಮ್ಮ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮವನ್ನುಂಟು ಮಾಡುತ್ತದೆ. ನೀವು ನಿರಂತರವಾಗಿ ಒಂದು ಬದಿಯಲ್ಲಿ ಮಲಗಿದಾಗ ನಿಮ್ಮ ತೋಳುಗಳು ಮತ್ತು ಕಾಲುಗಳಲ್ಲಿ ನೋವು ಉಂಟಾಗಬಹುದು. ನಿಮ್ಮ ದೇಹದ ಬಲಭಾಗದಲ್ಲಿ ಮಲಗುವುದು ನಿಮ್ಮ ಜೀರ್ಣಕ್ರಿಯೆ ಹಾಗೂ ಎದೆಯ ಭಾಗದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಇದರಿಂದಾಗುವ ಒಂದು ಪ್ರಯೋಜನವೆಂದರೆ ನೀವು ಈ ಭಂಗಿಯಲ್ಲಿ ಮಲಗುವುದರಿಂದ ಗೊರಕೆ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಮೈ-ಕೈ ನೋವು ದೂರ ಮಾಡಲು ಈ ಅಭ್ಯಾಸ ಅಳವಡಿಸಿಕೊಳ್ಳಿ

3. ನಿಮ್ಮ ಹೊಟ್ಟೆಯ ಮೇಲೆ ಮಲಗುವುದು(On your stomach):

ನಿಮ್ಮ ಹೊಟ್ಟೆಯ ಮೇಲೆ ಮಲಗುವ ಅಭ್ಯಾಸ ನಿಮಗಿದ್ದರೆ, ಈ ಅಭ್ಯಾಸ ನಿಮಗೆ ಆರಾಮದಾಯಕವೆನಿಸಿದರೂ ಕೂಡ, ಈ ಅಭ್ಯಾಸವನ್ನು ಇವತ್ತೇ ಬಿಟ್ಟು ಬಿಡಿ. ಯಾಕೆಂದರೆ ಇದು ನಿಮ್ಮ ಆರೋಗ್ಯವನ್ನು ಸಂಪೂರ್ಣವಾಗಿ ಹದಗೆಡಿಸುತ್ತದೆ. ಇದರಿಂದಾಗಿ ನಿಮ್ಮ ಬೆನ್ನು ಮತ್ತು ಕುತ್ತಿಗೆ ನೋವು ಉಂಟಾಗಲು ಕಾರಣವಾಗುತ್ತದೆ. ಜೊತೆಗೆ ನಿಮ್ಮ ಬೆನ್ನು ಮೂಳೆ ವಿಚಿತ್ರವಾದ ಆಕಾರವನ್ನು ಪಡೆದುಕೊಳ್ಳಲು ಕಾರಣವಾಗಬಹುದು. ಆದ್ದರಿಂದ ಈ ಅಭ್ಯಾಸವನ್ನು ಇಂದೇ ಬಿಟ್ಟು ಬಿಡಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ