Sign In

By signing in or creating an account, you agree with Associated Broadcasting Company's Terms & Conditions and Privacy Policy.

Competition : ಕನ್ನಡದ ಕಥೆಗಾರರೇ ಇತ್ತ ಗಮನಿಸಿ; ‘ಬುಕ್‌ ಬ್ರಹ್ಮ’ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ

Book Brahma : ಕನ್ನಡ ಕಥಾ ಪ್ರಪಂಚದಲ್ಲಿ ಹಲವು ಮಹತ್ವದ ವಾರ್ಷಿಕ ಸ್ಪರ್ಧೆಗಳು ಚಾಲ್ತಿಯಲ್ಲಿವೆ. ಆ ಹರಿವ ನದಿಗೆ ಈಗ ‘ಬುಕ್ ಬ್ರಹ್ಮ’ ತೊರೆ ಸೇರಲಿದೆ. ಪ್ರತಿ ವರ್ಷ ದೇಶದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಈ ಸ್ಪರ್ಧೆಯನ್ನು ಸಂಸ್ಥೆಯು ನಡೆಸಲಿದೆ.

Competition : ಕನ್ನಡದ ಕಥೆಗಾರರೇ ಇತ್ತ ಗಮನಿಸಿ; ‘ಬುಕ್‌ ಬ್ರಹ್ಮ’ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:May 01, 2022 | 9:52 AM

Book Brahma : ಭಾರತದ 75ನೇ ಸ್ವಾತಂತ್ರ್ಯೋತ್ಸವ ಮತ್ತು ಸಂಸ್ಥೆಯ ಮೂರನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ‘ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ 2022’ನ್ನು ಏರ್ಪಡಿಸಲಾಗಿದೆ ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯಲಿರುವ ಕಥೆಗೆ ರೂ.50,000; ದ್ವೀತಿಯ ಸ್ಥಾನಕ್ಕೆ 25,000, ತೃತೀಯ ಸ್ಥಾನಕ್ಕೆ ರೂ. 15,000 ಮತ್ತು ಉಳಿದಂತೆ ಮೂರು ಕತೆಗಳಿಗೆ ತಲಾ ರೂ.5000 ಸಮಾಧಾನಕರ ಬಹುಮಾನ ನೀಡಲಾಗುವುದು. ಕನ್ನಡದ ಸಮೃದ್ಧ ಕಥಾ ಪರಂಪರೆ ಇನ್ನೂ ಹೆಚ್ಚು ಶ್ರೀಮಂತವಾಗಲಿ, ಮತ್ತಷ್ಟು ಮೌಲ್ಯಯುತವಾದ ಕಥೆಗಳು ಹೊರಹೊಮ್ಮಲಿ ಎನ್ನುವುದೇ ‘ಬುಕ್ ಬ್ರಹ್ಮ- ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ’ಯ ಮೂಲ ಉದ್ದೇಶ. ಕನ್ನಡ ಕಥಾ ಪ್ರಪಂಚದಲ್ಲಿ ಹಲವು ಮಹತ್ವದ ವಾರ್ಷಿಕ ಸ್ಪರ್ಧೆಗಳು ಈಗಾಗಲೇ ಚಾಲ್ತಿಯಲ್ಲಿವೆ. ಆ ಝುಳು ಝುಳು ಹರಿವ ನದಿಗೆ ಹೊಸದಾಗಿ ಈಗ ‘ಬುಕ್ ಬ್ರಹ್ಮ’ ತೊರೆ ಸೇರಲಿದೆ. ಪ್ರತಿ ವರ್ಷ ದೇಶದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಈ ಸ್ಪರ್ಧೆಯನ್ನು ಸಂಸ್ಥೆಯು ನಡೆಸಲಿದೆ.

ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ. 1. ಕತೆಯು ಸ್ವತಂತ್ರವಾಗಿರಬೇಕು. ಅನುವಾದ, ಅನುಕರಣವಾಗಿರಬಾರದು. 2. ಕತೆಯು ಅಪ್ರಕಟಿತವಾಗಿಬೇಕು. ಮುದ್ರಣ ಅಥವಾ ಯಾವುದೇ ವಿದ್ಯುನ್ಮಾನ ಮಾಧ್ಯಮ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರಬಾರದು. 3. ಕತೆಯು 5000 ಪದಗಳಿಗೆ ಮೀರದಂತಿರಬೇಕು. 4. ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ವಯಸ್ಸಿನ ನಿರ್ಬಂಧ ಇಲ್ಲ 5. ಹಸ್ತಪ್ರತಿ ಅಥವಾ ಟೈಪ್ ಮಾಡಿದ ಕತೆಯಿರುವ ಪುಟಗಳಲ್ಲಿ ತಮ್ಮ ಹೆಸರನ್ನು ದಾಖಲಿಸಬಾರದು. ಕತೆ ಮುಗಿದ ನಂತರ ಪ್ರತ್ಯೇಕ ಪುಟದಲ್ಲಿ ತಮ್ಮ ಹೆಸರು, ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆ ಇರಬೇಕು. 6. ಕತೆಗಾರರು ನಿಬಂಧನೆಗಳಿಗೆ ಒಪ್ಪಿದ ಮತ್ತು ಸಹಿ ಮಾಡಿದ ಪ್ರತ್ಯೇಕ ಒಂದು ಪತ್ರ ಇಡಬೇಕು. 7. ಬುಕ್‌ಬ್ರಹ್ಮ ಪ್ರೈವೇಟ್ ಲಿಮಿಟೆಡ್ (Book Brahma Private Limited), ಫರ್ಬೆಂಡನ್‌ ಪ್ರೈವೇಟ್ ಲಿಮಿಟೆಡ್ (Verbinden Private Limited) ಮತ್ತು ಕಾಗ್ನಿಕ್ವೆಸ್ಟ್‌ ಪ್ರೈವೇಟ್ ಲಿಮಿಟೆಡ್ (Cogniquest Private Limited) ಸಂಸ್ಥೆಯ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಸ್ಫರ್ಧೆಯಲ್ಲಿ ಭಾಗವಹಿಸುವಂತಿಲ್ಲ. 8. ಕನ್ನಡದ ಪ್ರಮುಖ ಕತೆಗಾರರು/ವಿಮರ್ಶಕರು ಸ್ಪರ್ಧೆಯ ನಿರ್ಣಾಯಕರಾಗಿರುತ್ತಾರೆ. 9. ಆಯ್ಕೆಗೆ ಸಂಬಂಧಿಸಿದಂತೆ ’ಬುಕ್ ಬ್ರಹ್ಮ’ ಆಡಳಿತ ಮಂಡಳಿಯ ನಿರ್ಣಯವೇ ಅಂತಿಮ. 10. ಕತೆಗಳನ್ನು ಕಳುಹಿಸಲು ಕೊನೆಯ ದಿನ ಬುಧವಾರ, ಜೂನ್‌ 15, 2022. 11. ಶುಕ್ರವಾರ, ಆಗಸ್ಟ್‌ 5, 2022 ರಂದು ಅಂತಿಮ ಸುತ್ತನ್ನು ಪ್ರವೇಶಿಸುವ 20 ಕಥೆಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. 12. ಸೋಮವಾರ, ಆಗಸ್ಟ್ 15, 2022 ರಂದು ನಡೆಯಲಿರುವ ಸಮಾರಂಭದಲ್ಲಿ ಅಂತಿಮ ಸುತ್ತಿನ ನಂತರ ಪ್ರಶಸ್ತಿಗಳಿಗೆ ಅರ್ಹವಾದ ಕತೆಗಳ ಘೋಷಣೆ ಮತ್ತು ಪ್ರಶಸ್ತಿ ವಿತರಣೆ ಎರಡನ್ನೂ ಮಾಡಲಾಗುವುದು. 13. ಅಂತಿಮ ಸುತ್ತಿಗೆ ಆಯ್ಕೆಯಾದ 20 ಕತೆಗಳನ್ನು ’ಬುಕ್ ಬ್ರಹ್ಮ’ ವೆಬ್‌ಸೈಟ್‌ ನಲ್ಲಿ ಹಾಗೂ ಪುಸ್ತಕ, ಇ-ಪುಸ್ತಕ, ಆಡಿಯೋ ಪುಸ್ತಕದ ರೂಪದಲ್ಲಿ ಪ್ರಕಟಿಸಲಾಗುತ್ತದೆ. ಈ 20 ಕತೆಗಳ ಪೈಕಿ ಬಹುಮಾನ ಪಡೆಯದೇ ಉಳಿಯುವ 14 ಕತೆಗಳಿಗೆ ತಲಾ ರೂ.1000 ಗೌರವ ಧನ ನೀಡಲಾಗುವುದು. ಈ ಎಲ್ಲ 20 ಕತೆಗಳ ಹಕ್ಕುಸ್ವಾಮ್ಯ ಕತೆಗಾರರು ಮತ್ತು ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಇಬ್ಬರಿಗೂ ಜಂಟಿಯಾಗಿ (ಶೇಕಡಾ 50) ಸೇರಿರುತ್ತದೆ. 14. ಒಬ್ಬರು ಒಂದು ಕತೆಯನ್ನು ಮಾತ್ರ ಕಳಿಸಬೇಕು. 15. ಕತೆಗಳನ್ನು ಈ-ಮೇಲ್ ಮೂಲಕ (ನುಡಿ / ಯೂನಿಕೋಡ್ ಫಾಂಟ್ ಬಳಸಿ ಟೈಪ್ ಮಾಡಿದ ಪ್ರತಿ)

BBKathaSpardhe2022@bookbrahma.com ಅಥವಾ ಹಸ್ತಪ್ರತಿಯನ್ನು ಇಲ್ಲಿಗೆ ಕಳುಹಿಸಿ.

ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ ಕನ್ನಡ ಮೂರನೇ ಮಹಡಿ, ಆರ್ ಕೆ ಕಾಂಪ್ಲೆಕ್ಸ್ ಕೆಎಸ್ಎಸ್ಐಡಿಸಿ ಕಾಂಪೌಂಡ್, ಎಲೆಕ್ಟ್ರಾನಿಕ್ಸ್ ಸಿಟಿ ಮೊದಲ ಹಂತ, ಬೆಂಗಳೂರು-560100 ಕ್ಕೆ ಕಳುಹಿಸಿಕೊಡಬಹುದು.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:  78926 08118

ಇದನ್ನೂ ಓದಿ : Toto Awards 2022 : ‘ಕವಿತೆ ಒಳಗಿಳಿಸಿಕೊಳ್ಳಬೇಕಿತ್ತು, ಓದನ್ನು ಅರ್ಧಕ್ಕೇ ನಿಲ್ಲಿಸಿದೆ’ ಟೊಟೊ ಪುರಸ್ಕೃತ ಕೃಷ್ಣ ದೇವಾಂಗಮಠ

ಇದನ್ನು ಓದಿ : Booker Shortlist 2022: ಗೀತಾಂಜಲಿ ಶ್ರೀ ಕಾದಂಬರಿ ‘ಟಾಂಬ್ ಆಫ್ ಸ್ಯಾಂಡ್’ ಬೂಕರ್ ಪ್ರಶಸ್ತಿಯ ಅಂತಿಮ ಘಟ್ಟಕ್ಕೆ

Published On - 9:50 am, Sun, 1 May 22

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!