D. R. Bendre : ‘ಸಂಸಾರದ ಅರ್ಥವಿರುವುದು ಈ ನಾಲ್ಕೇ ತಂತಿಗಳಲ್ಲಿ’ ನಾಕೇತಂತಿ ಬೇಂದ್ರೆಯಜ್ಜನ ನಾಕೇತಂತಿ

NaakuTanti : ‘ನಾಕು ತಂತಿ’ ಅತ್ಯಂತ ಸರಳ ಕನ್ನಡದಲ್ಲಿ ರಚಿಸಲಾದ ಕವನ. ಆದರೆ ಅಷ್ಟೇ ನಿಗೂಢವಾದ ಕವನ. ಈ ಕವನದಲ್ಲಿ ಪದಗಳಿಗೆ ಅನೇಕ ಅರ್ಥಗಳು ಇರುವಂತೆಯೇ, ಪದಗಳ ನಾದಕ್ಕೂ ಸಹ ಅರ್ಥವಿದೆ. ಲೌಕಿಕ ಹಾಗು ಅಲೌಕಿಕ ಆಯಾಮಗಳಲ್ಲಿ ಈ ಕವನದ ಅರ್ಥವನ್ನು ಅನುಭವಿಸಬೇಕಾಗುತ್ತದೆ.’ ಸುನಾಥ

D. R. Bendre : ‘ಸಂಸಾರದ ಅರ್ಥವಿರುವುದು ಈ ನಾಲ್ಕೇ ತಂತಿಗಳಲ್ಲಿ’ ನಾಕೇತಂತಿ ಬೇಂದ್ರೆಯಜ್ಜನ ನಾಕೇತಂತಿ
ಬೇಂದ್ರೆ
Follow us
ಶ್ರೀದೇವಿ ಕಳಸದ
|

Updated on: Feb 01, 2022 | 7:12 PM

ದ. ರಾ. ಬೇಂದ್ರೆ | D. R. Bendre | ನಾಕು ತಂತಿ | Naaku Tanti : ‘ಅರಳು ಮರಳು’ ಕಾವ್ಯಸಂಗ್ರಹ ಪ್ರಕಟವಾದಾಗ ಬೇಂದ್ರೆಯವರಿಗೆ 60 ವರ್ಷ. ಅದಕ್ಕೂ ಮೊದಲಿನ ಅವರ ಕಾವ್ಯದಲ್ಲಿ ಅತ್ಯುಚ್ಚ ಮಟ್ಟದ ಕಲಾಕೌಶಲವನ್ನು ಹಾಗೂ ಕುಸುರಿ ಕೆಲಸವನ್ನು ಕಾಣಬಹುದು. ‘ಅರಳು ಮರಳು’ ಕಾವ್ಯದಲ್ಲಿ ಕುಸುರಿ ಕೆಲಸದ ಸ್ಥಾನವನ್ನು ‘ಬಯಲ ಭವ್ಯತೆ’ ಆಕ್ರಮಿಸಿಕೊಂಡಿದೆ. ಬೇಲೂರು ಶಿಲಾಬಾಲಿಕೆಯ ಮೋಹಕ ಚೆಲುವಿನ ಬದಲಾಗಿ ಶ್ರವಣಬೆಳಗೊಳದ ಗೊಮ್ಮಟೇಶ್ವರನ ಭವ್ಯತೆ ಅವರ ಕಾವ್ಯದಲ್ಲಿ ವ್ಯಕ್ತವಾಗುತ್ತದೆ. ‘ಅರಳು ಮರಳು’ ನಂತರ ರಚಿಸಿದ ಕಾವ್ಯವಂತೂ ಪೂರ್ಣವಾಗಿ ಬೇರೊಂದು ರೂಪವನ್ನೇ ಪಡೆದಿದೆ. ಲೌಕಿಕ ಮಾರ್ಗಕ್ಕೆ ವಿಮುಖನಾಗಿ, ಅಲೌಕಿಕ ಮಾರ್ಗದಲ್ಲಿ ಕ್ರಮಿಸುತ್ತಿರುವ ಸಂತಕವಿಯ ಕಾವ್ಯವನ್ನು ಇಲ್ಲಿ ಕಾಣಬಹುದು. ಹೀಗಾಗಿ ಈ ಕಾವ್ಯವು ‘ನಿಗೂಢ ಕಾವ್ಯ’ವಾಗಿದೆ. ಮೈಯಲ್ಲಿ ದೇವರು ಬಂದ ಪೂಜಾರಿಗಳು ಒಡನುಡಿಯುವ ಕಾರ್ಣೀಕವನ್ನು ಈ ನಿಗೂಢ ಕಾವ್ಯಕ್ಕೆ ಹೋಲಿಸಬಹುದು. ಬೇಂದ್ರೆಯವರ ‘ನಾಕು ತಂತಿ’ ಕವನವು ಇಂತಹ ಒಡಪಿನ ರೂಪದ ‘ಕಾರ್ಣಿಕ’ದಲ್ಲಿದೆ. ಬೇಂದ್ರೆಮಾಸ್ತರ ಬರೆದ ಅಡಿಟಿಪ್ಪಣಿಯ ಮೂಲಕ ‘ಅಂಬಿಕಾತನಯದತ್ತ’ನ ಒಡನುಡಿಯ ಒಗಟನ್ನು ಬಿಡಿಸಲು ಪ್ರಯತ್ನಪಡಬೇಕು. ಆದರೂ ನಮಗೆ ಕಾಣುವದು ನಮ್ಮ ಕಣ್ಣಿನ ಪರಿಮಿತಿಗೊಳಪಟ್ಟು. ಇದರ ನೆಲೆಯು! 

ಸುನಾಥ (ಸುಧೀಂದ್ರ ದೇಶಪಾಂಡೆ), ಲೇಖಕರು, ಧಾರವಾಡ

*

ಕೊನೆಯದಾದ ನಾಲ್ಕನೆಯ ಭಾಗದಲ್ಲಿ ಎರಡು ನುಡಿಗಳಿವೆ:

‘ನಾನು’ ‘ನೀನು’

‘ಆನು’ ‘ತಾನು’

ನಾಕೆ ನಾಕು ತಂತಿ,

ಕವಿಯು ‘ಸಂಸಾರದ ಅರ್ಥವಿರುವದು ಈ ನಾಲ್ಕೇ ತಂತಿಗಳಲ್ಲಿ (ನಾನು, ನೀನು, ಆನು, ತಾನು)’ ಎಂದು ಪುನರುಚ್ಚರಿಸುತ್ತಾನೆ. ನಾನು ಹಾಗು ನೀನು ಇವು ಆತ್ಮ ಮತ್ತು ಪ್ರಕೃತಿಗೆ ಅಥವಾ ತಂದೆ ಹಾಗು ತಾಯಿಗೆ ಸಂಕೇತವಾದರೆ, ಆನು ಇದು ಅವರ ಸೃಷ್ಟಿಗೆ ಸಂಕೇತವಾಗುತ್ತದೆ. ತಾನು ಎನ್ನುವುದು ಇವೆಲ್ಲವನ್ನೂ ಒಳಗೊಂಡ ಚೈತನ್ಯರೂಪವಾಗಿದೆ. ಈ ಚೌದಂಡಿಗೆಯ ಶ್ರಾವ್ಯ ಮತ್ತು ಶ್ರವಣಾತೀತ ಸ್ವರ ಉಸಿರುವದು ಒಂದೇ ರಾಗ: ‘ಓಂ ದಂತಿ’ ಎಂದು.

ಸೊಲ್ಲಿಸಿದರು

ನಿಲ್ಲಿಸಿದರು

ಓಂ ಓಂ ದಂತಿ!

ಗಣನಾಯಕ

ಮೈ ಮಾಯಕ

ಸೈ ಸಾಯಕ ಮಾಡಿ

ಗುರಿಯ ತುಂಬಿ

ಕುರಿಯ ಕಣ್ಣು

ಧಾತು ಮಾತು

ಕೂಡಿ.

ಇಲ್ಲಿಯವರೆಗೆ ನಾನು, ನೀನು, ಆನು ತಾನು ಮಾತ್ರ ಇದ್ದುದು ಈಗ ‘ದಂತಿ’ಯ ಪ್ರವೇಶವಾಗುತ್ತದೆ. ದಂತಿ ಎಂದರೆ ಗಣಪತಿ. ಆ ಗಣನಾಯಕನೇ ಈ ‘ಮೈ ಮಾಯಕ’ವನ್ನು ,ಕಾವ್ಯವನ್ನು (-ಯಾಕೆಂದರೆ ಕಾವ್ಯವೆಂದರೆ ಕವಿಯ ಮಾಯಾಶರೀರ -) ಸೈ ಸಾಯಕ ಮಾಡಿ (-ಸೈ=ಸರಿಯಾದ, ಸಾಯಕ=ಬಾಣ-) ಪ್ರಯೋಗಿಸಬೇಕು. ಈ ಪ್ರಯೋಗ ಹೇಗಿರಬೇಕೆಂದರೆ, ಅದು ಗುರಿಯ ತುಂಬಿ(=ಗುರಿಯ ಕಡೆಗೆ ಲಕ್ಷ್ಯ ತೊಟ್ಟು), ಕುರಿಯ ಕಣ್ಣು(ಕುರಿತು=ನಿರ್ದಿಷ್ಟವಾಗಿ ದೃಷ್ಟಿಸುತ್ತ) ಅಥವಾ bull’s eyeದಂತೆ ಇರಬೇಕು. ಇದರ ಫಲವೆಂದರೆ ಧಾತು (ಅರ್ಥ) ಮತ್ತು ಮಾತು( ವಾಕ್) ಕೂಡಿರಬೇಕು.

ಬೇಂದ್ರೆಯವರು ತಾವು ಬಳಸುವ ಪದಗಳಿಗೆ ಇತರ ಭಾಷೆಯಲ್ಲಿರುವ ಅರ್ಥಗಳನ್ನೂ ಜೋಡಿಸಿರುತ್ತಾರೆ. ಉದಾಹರಣೆಗೆ ‘ಮೈ ಮಾಯಕ’ದಲ್ಲಿ ಮೈ ಪದವನ್ನು ಮೂರು ಅರ್ಥಗಳಲ್ಲಿ ಬೇಂದ್ರೆ ಬಳಸಿದ್ದಾರೆ.

(೧) ಮೈ= ಶರೀರ (೨) ಮೈ= ಮಹಿಮೆ (೩) ಮೈ= my

ಇದರಂತೆ ‘ಸಾಯಕ’ಕ್ಕೆ ಬಾಣ ಹಾಗು ಸಹಾಯಕ ಎನ್ನುವ ಎರಡೂ ಅರ್ಥಗಳನ್ನು ಉಪಯೋಗಿಸಬಹುದು. ‘ಕುರಿ’ ಎನ್ನುವ ಪದ ಕುರಿತು ಎಂದರೆ ನಿರ್ದಿಷ್ಟ ಎನ್ನುವ ಅರ್ಥ ಕೊಡುವಂತೆಯೇ ‘ಗುರಿ’ ಎನ್ನುವ ಪದಕ್ಕೆ ಧ್ವನಿಸಂವಾದಿ ಪದವೂ ಆಗಿದೆ. ಇದಕ್ಕೆ ಉದಾಹರಣೆಯಾಗಿ ಅವರ ಬೇರೊಂದು ಕವನದ ಎರಡು ಸಾಲುಗಳನ್ನು ಇಲ್ಲಿ ಕೊಡುತ್ತೇನೆ:

“ಘುರ್ರೆ ಘುರ್ರೆ ಘೋಟಕಾ

ನಡೆ ಅಂತಃಸ್ಫೋಟಕಾ”.

ಘುರ್ರೆ ಅನ್ನುವದು ತೆಲುಗಿನ ಕುರ್ರಂ(=ಕುದುರೆ) ಅನ್ನುವ ಪದಕ್ಕೆ ಹಾಗು ಘೋಟಕಾ ಎನ್ನುವದು ಹಿಂದಿ ಭಾಷೆಯ ಘೋಡಾ(=ಕುದುರೆ) ಪದಕ್ಕೆ ಧ್ವನಿಸಂವಾದಿ ಪದಗಳಾಗಿರುವದನ್ನು ಗಮನಿಸಬೇಕು. ಇಂತಹ ಬಳಕೆ ಬೇಂದ್ರೆಯವರ ಕಾವ್ಯದಲ್ಲಿ ಸಾಮಾನ್ಯ.

‘ನಾಕು ತಂತಿ’ ಅತ್ಯಂತ ಸರಳ ಕನ್ನಡದಲ್ಲಿ ರಚಿಸಲಾದ ಕವನ. ಆದರೆ ಅಷ್ಟೇ ನಿಗೂಢವಾದ ಕವನ. ಈ ಕವನದಲ್ಲಿ ಪದಗಳಿಗೆ ಅನೇಕ ಅರ್ಥಗಳು ಇರುವಂತೆಯೇ, ಪದಗಳ ನಾದಕ್ಕೂ ಸಹ ಅರ್ಥವಿದೆ. ಲೌಕಿಕ ಹಾಗು ಅಲೌಕಿಕ ಆಯಾಮಗಳಲ್ಲಿ ಈ ಕವನದ ಅರ್ಥವನ್ನು ಅನುಭವಿಸಬೇಕಾಗುತ್ತದೆ.

(ಇಲ್ಲಿಗೆ ನಾಕುತಂತಿಯ ಒಳಹೂರಣ ಮುಕ್ತಾಯವಾಯಿತು.) 

ಹಿಂದಿನ ಹೂರಣ : D. R. Bendre : ‘ಅಪ್ಪ ಎಂದರೆ ಆತ್ಮ, ಅಮ್ಮ ಎಂದರೆ ಪ್ರಕೃತಿ; ಅಮ್ಮನ ಮುಖದಲ್ಲಿ ಕಾಣುವುದು ಅಪ್ಪನ ಮುಖವೇ’ ನಾಕುತಂತಿಯ ಸತ್ಯ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ