AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಂಸ್ಕೃತಿ ಇಲಾಖೆಯ ಅನುದಾನ ಮೊತ್ತಕ್ಕೆ ಮಿತಿ; ಯೋಗ್ಯರಿಗೆ ಪಾರದರ್ಶಕವಾಗಿ ಅನುದಾನ ಹಂಚಿಕೆ ಮಾಡಲು ಆದೇಶ

ಕೊರೊನಾ ಅವಧಿಯ ಅನುದಾನ ಪಡೆಯಲು ಪ್ರಯತ್ನ ಮಾಡಲಾಗಿದೆ. ಯೋಗ್ಯರಿಗೆ ಪಾರದರ್ಶಕವಾಗಿ ಅನುದಾನ ಹಂಚಿಕೆ ಮಾಡಿ. ಅನುದಾನ ಹಂಚಿಕೆಯ ಹೊಸ ಪಟ್ಟಿ ಸದ್ಯದಲ್ಲೇ ಪ್ರಕಟ ಮಾಡುತ್ತೇವೆ ಎಂದು ಕನ್ನಡ, ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಸೂಚನೆ ಕೊಟ್ಟಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆಯ ಅನುದಾನ ಮೊತ್ತಕ್ಕೆ ಮಿತಿ; ಯೋಗ್ಯರಿಗೆ ಪಾರದರ್ಶಕವಾಗಿ ಅನುದಾನ ಹಂಚಿಕೆ ಮಾಡಲು ಆದೇಶ
ಸಚಿವ ಸುನಿಲ್ ಕುಮಾರ್
TV9 Web
| Updated By: ganapathi bhat|

Updated on:Mar 18, 2022 | 1:16 PM

Share

ಬೆಂಗಳೂರು: ಕನ್ನಡ, ಸಂಸ್ಕೃತಿ ಇಲಾಖೆಯಲ್ಲಿ ಅನುದಾನ ಮೊತ್ತಕ್ಕೆ ಮಿತಿ ಹೇರಲಾಗಿದೆ. ಅನುದಾನದ ಗರಿಷ್ಠ ಮೊತ್ತ 2.5 ಲಕ್ಷ ರೂಪಾಯಿಗೆ ಸೀಮಿತ ಮಾಡಲಾಗಿದೆ. ಕನ್ನಡ, ಸಂಸ್ಕೃತಿ ಇಲಾಖೆಯಿಂದ ವಾರ್ಷಿಕ ಅನುದಾನ‌ ನೀಡಲಾಗುತ್ತಿತ್ತು. ನೋಂದಾಯಿತ ಸಂಘ- ಸಂಸ್ಥೆಗಳಿಗೆ ನೀಡುತ್ತಿದ್ದ ಅನುದಾನ‌ಕ್ಕೆ ಇದೀಗ ಮಿತಿ ಹೇರಲಾಗಿದೆ. ಅನುದಾನ ಪಡೆಯಲು ಕೆಲವೇ ಸಂಘ, ಸಂಸ್ಥೆ ಏಕಸ್ವಾಮ್ಯ ಸಾಧಿಸಿರುವ ಆರೋಪ ಹಿನ್ನೆಲೆಯಲ್ಲಿ ಮಿತಿ ಹೇರಲಾಗಿದೆ. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಿಂದ ನೋಂದಾಯಿತ ಸಂಘ- ಸಂಸ್ಥೆಗಳಿಗೆ ನೀಡುತ್ತಿದ್ದ ವಾರ್ಷಿಕ ಅನುದಾನ‌ದಲ್ಲಿ ಕಡಿತಗೊಳಿಸಲಾಗಿದೆ. ಅನುದಾನ ಪಡೆಯುವಲ್ಲಿ ಕೆಲವೇ ಸಂಘ- ಸಂಸ್ಥೆಗಳು ಏಕಸ್ವಾಮ್ಯ ಸಾಧಿಸಿರುವ ಆರೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಹತ್ತಾರು ವರ್ಷಗಳಿಂದ 10- 15 ಲಕ್ಷ ರೂಪಾಯಿ ಅನುದಾನ ಹಿನ್ನೆಲೆ ಅನುದಾನ ಪಡೆದ ಸಂಸ್ಥೆಗಳಿಗೆ ಈ ಬಾರಿ ನೆರವು ಕಡಿತಗೊಳಿಸಲಾಗಿದೆ. ಆನ್​ಲೈನ್ ಅರ್ಜಿಗೆ ಗರಿಷ್ಠ ₹2.5 ಲಕ್ಷ ಮಾತ್ರ ಅನುದಾನ ಎಂದು ಹೇಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಿ ಅನುದಾನ ಅರ್ಜಿ ಸ್ವೀಕಾರ ಮಾಡಲಾಗುತ್ತದೆ. ಕಾರ್ಯಕ್ರಮ ಆಯೋಜಿಸದೆ ಅನುದಾನ ಪಡೆಯಲು ಯತ್ನಿಸಲಾಗಿದೆ. ಕೊರೊನಾ ಅವಧಿಯ ಅನುದಾನ ಪಡೆಯಲು ಪ್ರಯತ್ನ ಮಾಡಲಾಗಿದೆ. ಯೋಗ್ಯರಿಗೆ ಪಾರದರ್ಶಕವಾಗಿ ಅನುದಾನ ಹಂಚಿಕೆ ಮಾಡಿ. ಅನುದಾನ ಹಂಚಿಕೆಯ ಹೊಸ ಪಟ್ಟಿ ಸದ್ಯದಲ್ಲೇ ಪ್ರಕಟ ಮಾಡುತ್ತೇವೆ ಎಂದು ಕನ್ನಡ, ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಸೂಚನೆ ಕೊಟ್ಟಿದ್ದಾರೆ.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ; ಮಹತ್ವದ ವಿಚಾರಗಳ ಚರ್ಚೆ ಸಾಧ್ಯತೆ

ಇತ್ತ ಇಂದು (ಮಾರ್ಚ್ 18) ಸಿಎಂ ಬಸವರಾಜ ಬೊಮ್ಮಾಯಿ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ ಸರ್ವಪಕ್ಷ ಸಭೆ ನಡೆಯಲಿದೆ. ಸಿಎಂ, ವಿಪಕ್ಷ ನಾಯಕ ಸೇರಿದಂತೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್​ನ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ. ಅಂತರ್ ರಾಜ್ಯ ಜಲ ವಿವಾದಗಳ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ ಎಂದು ಮಾಹಿತಿ ಲಭಿಸಿದೆ.

ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವ ಕುರಿತು ಮಹತ್ವದ ನಿರ್ಣಯ ಸಾಧ್ಯತೆ ಇದೆ. ಅದಷ್ಟು ಬೇಗ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳುವಂತೆ ಸರ್ಕಾರಕ್ಕೆ ಕಾಂಗ್ರೆಸ್, ಜೆಡಿಎಸ್ ನಾಯಕರು ಒತ್ತಾಯ ಮಾಡಲಿದ್ದಾರೆ. ಯೋಜನೆಗೆ ಇರುವಂಥ ಕಾನೂನು ತೊಡಕುಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ಸಭೆಯಲ್ಲಿ ರಾಜ್ಯದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಲಗಿ ಕೂಡ ಭಾಗಿ ಆಗಲಿದ್ದಾರೆ. ಮುಖ್ಯವಾಗಿ ಪರ್ಮಿಷನ್ ಬೇಕಾಗಿರೋದು ಪರಿಸರ ಇಲಾಖೆಯಿಂದ, ಹೀಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇಲ್ಲವಾದಲ್ಲಿ ಕೇಂದ್ರಕ್ಕೆ ಆಲ್ ಪಾರ್ಟಿ ಸದಸ್ಯರ ನಿಯೋಗ ಕರೆದೊಯ್ಯಬೇಕು ಎಂದು ವಿಪಕ್ಷ ನಾಯಕರು ಒತ್ತಾಯಸಲಿದ್ದಾರೆ.

ಇದೇ ವೇಳೆ ಮಹದಾಯಿ ಯೋಜನೆ ಬಗ್ಗೆಯೂ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಒತ್ತಾಯಿಸಲಿದ್ದಾರೆ. ಗೋವಾ ಸೇರಿದಂತೆ ತ್ರಿಬಲ್ ಇಂಜಿನ್ ಸರ್ಕಾರ ಇದೆ. ಅಲ್ಲಿರುವ ಕಾನೂನು ತೊಡಕುಗಳ ಬಗ್ಗೆ ಚರ್ಚೆ ನಡೆಯಲಿದೆ. ಕೇಂದ್ರ, ರಾಜ್ಯ, ಗೋವಾದಲ್ಲಿ ಬಿಜೆಪಿ ಸರ್ಕಾರವೇ ಇದೆ. ಯೋಜನೆಗಿರುವ ತೊಡಕುಗಳನ್ನು ಶೀಘ್ರವೇ ಬಗೆಹರಿಸಬೇಕು ಅಂತಾ ಒತ್ತಾಯ ಕೇಳಿಬರಲಿದೆ. ಸಭೆಯಲ್ಲಿ ಫ್ಲೋರ್ ಲೀಡರ್ಸ್ ಭಾಗಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬೆಂಗಳೂರು: ರವೀಂದ್ರ ಕಲಾಕ್ಷೇತ್ರದ ಮಾದರಿ 4 ಕಲಾಕ್ಷೇತ್ರ ನಿರ್ಮಾಣಕ್ಕೆ ಯೋಜನೆ; ಸಚಿವ ಸುನಿಲ್ ಕುಮಾರ್ ಮಾಹಿತಿ

ಇದನ್ನೂ ಓದಿ: ಮೇ ತಿಂಗಳಲ್ಲಿ ಹಾವೇರಿ ಸಾಹಿತ್ಯ ಸಮ್ಮೇಳನ, ಲಾಂಛನ ಧ್ಯೇಯವಾಕ್ಯ ಆಹ್ವಾನಿಸಿದ ಕಸಾಪ ಅಧ್ಯಕ್ಷ ಮಹೇಶ ಜೋಶಿ

Published On - 1:09 pm, Fri, 18 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ