Communal Clashes: ಕವಿತೆ ಅವಿತಿಲ್ಲ; ನಿಮ್ಮ ಜೈಶ್ರೀರಾಮ ಘೋಷಣೆಯ ಬರಿ ಹರಣ ಹರಣ ಹರಣ

Nuggikere Dharwad : ‘ನಮ್ಮ ಮನೆಯಂಗಳದಲ್ಲಿ ದಿವ್ಯ ರಾಮ ಸಂಕೀರ್ತನ, ನಿಮ್ಮ ಮನಗಳಲ್ಲಿ ರಾಮಭಕ್ತಿಗಿಂತ ತುಂಬಿ ರಹೀಮ ಹಗೆತನ‘ ಪ್ರತಿಭಾ ನಂದಕುಮಾರ್

Communal Clashes: ಕವಿತೆ ಅವಿತಿಲ್ಲ; ನಿಮ್ಮ ಜೈಶ್ರೀರಾಮ ಘೋಷಣೆಯ ಬರಿ ಹರಣ ಹರಣ ಹರಣ
ಕವಿ ಪ್ರತಿಭಾ ನಂದಕುಮಾರ
Follow us
ಶ್ರೀದೇವಿ ಕಳಸದ
|

Updated on: Apr 11, 2022 | 10:04 AM

ಕವಿತೆ ಅವಿತಿಲ್ಲ : ನಬೀಸಾಬ್, ಧಾರವಾಡದ ಹಣ್ಣಿನ ವ್ಯಾಪಾರಿ. ಹದಿನೈದು ವರ್ಷಗಳಿಂದಲೂ ಇಲ್ಲಿಯ ನುಗ್ಗೀಕೆರೆ ಹನುಮಂತನಗುಡಿಯ ಪ್ರಾಂಗಣದಲ್ಲಿ ವ್ಯಾಪಾರಕ್ಕೆ ತೊಡಗಿರುವಂಥವರು. ನಿನ್ನೆ ಶ್ರೀರಾಮ ಸೇನೆಯ ತುಕಡಿಯೊಂದು ಅವರ ವ್ಯಾಪಾರಕ್ಕೆ ಅಡ್ಡಪಡಿಸಿ ಬರೋಬರಿ ಐದು ಕ್ವಿಂಟಾಲ್​ ಕಲ್ಲಂಗಡಿಯನ್ನು ಧ್ವಂಸಗೊಳಿಸಿದ ದೃಶ್ಯ ಕಣ್ಣಪಾಪೆಗಂಟಿ ಕುಳಿತಿದೆ. ನಮ್ಮೆಲ್ಲರ ಧಮನಿಗಳಲ್ಲಿ ಹರಿಯುತ್ತಿರುವ ಬಣ್ಣ, ಬಿರಿದ ಆ ಕಲ್ಲಂಗಡಿಯ ಒಡಲು. ಯಾಕೋ ಈ ರೂಪಕ ಇನ್ನೇನೋ ಸೂಚಿಸುಂತಿದೆ. ಯಾವುದೂ ಒಮ್ಮೆಲೇ ಭುಗಿಲೇಳುವುದಿಲ್ಲ, ಅದು ಕೆಟ್ಟದ್ದೇ ಆಗಿರಲಿ ಒಳ್ಳೆಯದೇ ಆಗಿರಲಿ, ಬಿತ್ತದೆ ಬೆಳೆಯುವುದುಂಟೆ?; ಪುಂಡರೇ, ನೀವು ಯಾವ ಧರ್ಮದಲ್ಲಿಯೇ ಹುಟ್ಟಿರಲಿ, ಯಾವ ಜಾತಿಯವರೇ ಆಗಿರಲಿ, ಯಾವ ಭಾಗದವರೇ ಆಗಿರಲಿ, ಯಾವ ಪಕ್ಷದವರೇ ಆಗಿರಲಿ, ಯಾರೇ ನಿಮಗೆ ರೊಕ್ಕ ಮುಕ್ಕಿಸುತ್ತ, ವಿಷ ಕಕ್ಕಿಸುತ್ತಿರಲಿ, ಯಾರೇ ನಿಮ್ಮೊಳಗಿನ ಗೂಳಿತನಕ್ಕೆ ಕೆಂಪು ತೋರಿಸಿ ಇಂಥ ಸಾಲು ಪ್ರಕರಣಗಳೊಳಗೆ ನುಗ್ಗಿಸುತ್ತಿರಲಿ. ಇನ್ನಾದರೂ ಯೋಚಿಸಿ. ನಿಮ್ಮ ಹಿಂದೆ ಹೆತ್ತ ಒಡಲ ಸಂಕಟಗಳ ಮೂಟೆಯಿದೆ. ನಿಮ್ಮ ಮುಂದೆ ನಿಮ್ಮದೇ ಕುಡಿಗಳು ಕನಸು ಕಂಗಳುಗಳಿವೆ. ಹೆಗಲಿಗೆ ಹೆಗಲಿಲ್ಲದೆ ಬದುಕಬಂಡಿ ಚಲಿಸದೆನ್ನುವ ಸತ್ಯದ ಗಾಲಿಗಳನ್ನು ಮುರಿದು ಆತ್ಮದ್ರೋಹ ಮಾಡಿಕೊಳ್ಳದಿರಿ; ಮನಸ್ಸು ವಿಷಣ್ಣವಾಗಿದೆ. ಆಕ್ರೋಶ ಅವಡುಗಚ್ಚಿ ಕುಳಿತಿದೆ. ಮಾತು ಸೋಲುತ್ತಿವೆ. ಅದೆಷ್ಟು ಅಗೆಯುತ್ತೀರೋ ಅಗೆಯಿರಿ. ನೀವು ಅಗೆದಷ್ಟೂ ನನ್ನನ್ನೇ ನಾ ಬಗೆದುಕೊಳ್ಳುತ್ತೇನೆ ಎನ್ನುತ್ತಿದೆ ಈ ಹೊತ್ತಿನಲ್ಲಿ ಕವಿತೆ.

ಬೆಂಗಳೂರಿನಲ್ಲಿ ವಾಸಿಸುತ್ತಿರುವ ಕವಿ ಪ್ರತಿಭಾ ನಂದಕುಮಾರ ಕವಿತೆ

ನನ್ನ ರಾಮ ಬೇರೆ

ನನ್ನ ರಾಮ ಮರ್ಯಾದಾ ಪುರುಷೋತ್ತಮ ಸಹಿಸಲಾರ ನಿಮ್ಮ ಯಾವುದೇ ಅಸಂಬದ್ಧ ಕರ್ಮ

ಶಬರಿ ಕಚ್ಚಿದ ಹಣ್ಣು ಎಂಜಲಲ್ಲ ಎಂದ ಕೋದಂಡ ಸಾಬಿಯ ಕಲ್ಲಂಗಡಿ ನೈವೇದ್ಯ ರಸ್ತೆಪಾಲು ದಂಡ

ನನ್ನ ರಾಮನಿಗಿಷ್ಟ ಪಾನಕ ಕೋಸಂಬರಿ ಮಜ್ಜಿಗೆ ಸಜ್ಜಿಗೆ ಚಿಂತೆಯಿಲ್ಲ ನೀವು ಮಾಡಿಕೊಂಡರೂ ಮಾಂಸದಡಿಗೆ

ಆಂಜನೇಯನ ಲಂಘನದ ಘನತೆ ಅರಿತ ಮಹನೀಯ ಜೊತೆಗೆ ಬರಲೆಂದ ಕಪಿಸೈನ್ಯ ಇರಲೆಂದ ಅಳಿಲು ಸೇವೆಯ ದೈನ್ಯ

ಬಳಸಿಕೊಳ್ಳಲಿ ಬಿಡಿ ಬದುಕಿಗೂ ಭಿಕ್ಷೆಗೂ ರಾಮ ನಾಮ ಜಪತಪಗಳಿಲ್ಲದ ಜನ ತಲೆ ಒಡೆದವರಿಗೇ ಪಂಗನಾಮ

ನಮ್ಮ ಮನೆಯಂಗಳದಲ್ಲಿ ದಿವ್ಯ ರಾಮ ಸಂಕೀರ್ತನ ನಿಮ್ಮ ಮನಗಳಲ್ಲಿ ರಾಮಭಕ್ತಿಗಿಂತ ತುಂಬಿ ರಹೀಮ ಹಗೆತನ

ನನ್ನ ರಾಮ ಮೆರೆದ ಗೆಳೆತನ, ಕೊಂದ ರಾಕ್ಷಸನ ಕೊಂದ ರಾಕ್ಷಸ ಮತ್ತೆ ಹುಟ್ಟಿಬಂದಂತೆ ನಿಮ್ಮ ಕ್ರೂರತನ

ನನ್ನ ಆತ್ಮಾರಾಮ ಆನಂದರಮಣ ಅಚ್ಯುತ ಕೇಶವ ಹರಿನಾರಾಯಣ ನಿಮ್ಮ ಜೈಶ್ರೀರಾಮ ಘೋಷಣೆಯ ಬರಿ ಹರಣ ಹರಣ ಹರಣ

*

ಗಮನಿಸಿ : ಪ್ರತಿಕ್ರಿಯಾತ್ಮಕ ಕವನಗಳನ್ನು ಈ ಸರಣಿಗೆ ನೀವೂ ಕಳಿಸಬಹುದು. ಜೊತೆಗೆ ಎರಡು ಸಾಲಿನ ನಿಮ್ಮ ಪರಿಚಯ, ಫೋಟೋ ಇರಲಿ. : tv9kannadadigital@gmail.com

ಇದನ್ನೂ ಓದಿ : Communal Clashes: ಕವಿತೆ ಅವಿತಿಲ್ಲ; ಚೂರು ಮಾಡಿದ್ದು ಶ್ರೀರಾಮನ ಜೀವಂತ ಗೆಳೆತನವನ್ನ ಸೀತೆಯ ಅಪಾರ ವಿಶ್ವಾಸವನ್ನ

ಇದನ್ನೂ ಓದಿ : Communal Clashes: ಕವಿತೆ ಅವಿತಿಲ್ಲ; ‘ಇದು ಇನ್ನೂ ಶುರುವಾತು, ದೇವರಿರುವ ಬೀದಿಗಳೆಲ್ಲ ಇನ್ನು ವಿಕೃತಿಯ ಕಪ್ಪೆಬಾವಿ!

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್