Tulasi Gowda: ರಾಷ್ಟ್ರಪತಿಯಿಂದ ಪದ್ಮಶ್ರೀ ಸ್ವೀಕರಿಸಿದ ಅಂಕೋಲಾದ ಹೆಮ್ಮೆ; ವೃಕ್ಷಮಾತೆ ತುಳಸಿ ಗೌಡ ಪ್ರಧಾನಿ ಮೋದಿ ಕೈಕುಲುಕಿದ ಆ ಘಳಿಗೆ

ತುಳಸಿಗೌಡಗೆ ಪರಿಸರ ಪ್ರೀತಿ ಎಷ್ಟಿದೆ ಎಂದರೆ, ಇವರನ್ನು ಮರಗಳ ವಿಜ್ಞಾನಿ ಎಂದೇ ಹೇಳಬಹುದು. ಯಾವ ಯಾವ ಗಿಡಗಳನ್ನು ಯಾವ ಋತುವಿನಲ್ಲಿ ನೆಡಬೇಕು, ಎಷ್ಟು ನೀರು, ಗೊಬ್ಬರ ಬೇಕು, ಯಾವ ಗಿಡಗಳು ಯಾವ ಸಂದರ್ಭದಲ್ಲಿ ಹೂವು ಹಣ್ಣು ಬಿಡುತ್ತದೆ, ಹೀಗೆ ಅರಣ್ಯದಲ್ಲಿನ ಸುಮಾರು 300ಕ್ಕೂ ಹೆಚ್ಚು ಪ್ರಭೇದದ ಮರಗಳ ಬಗ್ಗೆ ತುಳಸಿ ಅವರಿಗೆ ಮಾಹಿತಿ ಇದೆ.

Tulasi Gowda: ರಾಷ್ಟ್ರಪತಿಯಿಂದ ಪದ್ಮಶ್ರೀ ಸ್ವೀಕರಿಸಿದ ಅಂಕೋಲಾದ ಹೆಮ್ಮೆ; ವೃಕ್ಷಮಾತೆ ತುಳಸಿ ಗೌಡ ಪ್ರಧಾನಿ ಮೋದಿ ಕೈಕುಲುಕಿದ ಆ ಘಳಿಗೆ
Tulasi Gowda: ರಾಷ್ಟ್ರಪತಿಯಿಂದ ಪದ್ಮಶ್ರೀ ಸ್ವೀಕರಿಸಿದ ಅಂಕೋಲಾದ ಹೆಮ್ಮೆ; ವೃಕ್ಷಮಾತೆ ತುಳಸಿ ಗೌಡ ಪ್ರಧಾನಿ ಮೋದಿ ಕೈಕುಲುಕಿದ ಘಳಿಗೆ
Follow us
TV9 Web
| Updated By: preethi shettigar

Updated on:Nov 09, 2021 | 2:53 PM

ಉತ್ತರ ಕನ್ನಡ: ಶತಮಾನದಿಂದ ಕಂಡಿರುವ ಪರಿಸರ ಪ್ರೇಮಿ, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿರುವ ಅಂಕೋಲಾ ತಾಲ್ಲೂಕಿನ ಹೊನ್ನಳ್ಳಿ ಎಂಬ ಪುಟ್ಟ ಗ್ರಾಮದ ಹಾಲಕ್ಕಿ ಸಮುದಾಯದ ತುಳಸಿ ಗೌಡ (tulsi gowda) ಅವರು ನಿನ್ನೆ (ನ.08) ದೇಶದ ಅತ್ಯುನ್ನತ ನಾಗರಿಕ ಸಮ್ಮಾನಗಳಲ್ಲೊಂದಾದ ಪದ್ಮಶ್ರೀ(padma shri award) ಪುರಸ್ಕಾರ ಸ್ವೀಕರಿಸಿದರು. ನವದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತುಳಸಿ ಗೌಡರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಲು ಅವರ ಹೆಸರು ಕರೆಯುತ್ತಿದ್ದಂತೆ ಬರಿಗಾಲಲ್ಲಿ ನಡೆದು ಬಂದ ತುಳಸಿ ಗೌಡ, ಮೊದಲು ಪ್ರಧಾನಿ ನರೇಂದ್ರ ಮೋದಿಯವರಿಗೆ ನಮಿಸಿದರು. ನಂತರ ರಾಷ್ಟ್ರಪತಿಯವರ ಬಳಿ ತೆರಳಿ, ಬಗ್ಗಿ ಕಾಲಿಗೆ ನಮಿಸಿದರು. ಈ ವೇಳೆ ಸಭಾಂಗಣದಲ್ಲಿ ಕರತಾಡನ ಕೇಳಿಬಂತು. ಸಾಲು ಮರದ ತಿಮ್ಮಕ್ಕನ ಸಾಲಿನ ತುಳಸಿ ಗೌಡಗೆ 71ನೇ ಗಣರಾಜ್ಯೋತ್ಸವದ ಮುನ್ನಾ ದಿನ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ಘೋಷಿಸಿತ್ತು. ಅವರಿಗೆ ಸಮಾಜ ಸೇವೆ (ಪರಿಸರ) ಕ್ಷೇತ್ರದಲ್ಲಿ ಪ್ರಶಸ್ತಿ ಘೋಷಣೆಯಾಗಿತ್ತು. ಕೇಂದ್ರ ಗೃಹಸಚಿವಾಲಯದಿಂದ ಅಕ್ಟೋಬರ್ ತಿಂಗಳಿನಲ್ಲಿ ಇಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಧಿಕೃತ ಆಹ್ವಾನ ನೀಡಲಾಗಿತ್ತು. ಕೋವಿಡ್ ಕಾರಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ವಿಳಂಬವಾಗಿತ್ತು.

ನ.6ಕ್ಕೆ ಅಂಕೋಲಾದ ಹೊನ್ನಳ್ಳಿಯ ತಮ್ಮ ಮನೆಯಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದ ತುಳಸಿ ಗೌಡ ಅವರಿಗೆ ಬಡಗೇರಿಯ ಬೇಟೆಬೀರ ದೇವಸ್ಥಾನದಲ್ಲಿ ಜಾನಪದ ಕೋಗಿಲೆ, ಪದ್ಮಶ್ರೀ ಸುಕ್ರಿ ಗೌಡ ಅವರು ಅನಾರೋಗ್ಯದ ನಡುವೆಯೂ ಹಾಡಿ, ಅವರನ್ನು ಬೀಳ್ಕೊಟ್ಟಿದ್ದರು. ದೆಹಲಿ ಪ್ರಯಾಣಕ್ಕೂ ಪೂರ್ವ ಸಾರ್ವಜನಿಕರಿಂದ ಸಂಗ್ರಹವಾಗಿದ್ದ ಹಣದಲ್ಲಿ ಒಂದಷ್ಟನ್ನು ಸುಕ್ರಿ ಗೌಡರ ಆರೈಕೆಗಾಗಿ ನೀಡಿ ಅವರು ತೆರಳಿದ್ದರು. ಬೈಕ್ ರ‍್ಯಾಲಿ ಮತ್ತು ವಾದ್ಯಘೋಷಗಳೊಂದಿಗೆ ತುಳಸಿ ಗೌಡರನ್ನು ಊರಿನಿಂದ ಬೀಳ್ಕೊಡಲಾಗಿತ್ತು. ಜಿಲ್ಲೆಯ ಹೆದ್ದಾರಿಗಳುದ್ದಕ್ಕೂ ಸಂಘ-ಸಂಸ್ಥೆಗಳ ಪ್ರಮುಖರು ಅವರಿಗೆ ಭವ್ಯವಾಗಿ ಬೀಳ್ಕೊಟ್ಟಿದ್ದರು.

ಚಪ್ಪಲಿ ಧರಿಸದ ಪರಿಸರ ಪ್ರೇಮಿ ಹಾಲಕ್ಕಿ ಸಮುದಾಯದವರು ಹೆಚ್ಚಾಗಿ ಭೂಮಿಯನ್ನು ಪ್ರೀತಿಸುವ ಕೃಷಿಕ ಜೀವಿಗಳು. ಜೊತೆಗೆ, ಈಗಿನ ಆಡಂಬರದ ಜೀವನಶೈಲಿಯಿಂದ ದೂರವುಳಿದವರು. ಹೀಗಾಗಿ ತುಳಸಿ ಗೌಡರು ಹುಟ್ಟಿದಾಗಿನಿಂದ ಚಪ್ಪಲಿ ಧರಿಸುವುದಿಲ್ಲ. ಬರಿಗಾಲಲ್ಲೇ ಕಾಡು- ಮೇಡು ಅಲೆದು ಮರಗಡಿಗಳನ್ನು ಕಾಯುತ್ತಿದ್ದ ಅವರು, ನಿನ್ನೆಯ (ನವೆಂಬರ್​ 8) ಸಮಾರಂಭಕ್ಕೂ ಬರಿಗಾಲಲ್ಲೇ ತೆರಳಿ ಪ್ರಶಸ್ತಿ ಸ್ವೀಕರಿಸಿ ಗಮನ ಸೆಳೆದರು.

ಲಕ್ಷಕ್ಕೂ ಅಧಿಕ ಗಿಡ ಬೆಳೆಸಿದಾತೆ ತುಳಸಿ ಗೌಡ ಅವರು ಬೆಳೆಸಿದ ಮರಗಳು ಒಂದಲ್ಲಾ, ಎರಡಲ್ಲಾ, ಲಕ್ಷಕ್ಕೂ ಅಧಿಕ. 1944ರಲ್ಲಿ ಹೊನ್ನಳ್ಳಿ ಗ್ರಾಮದ ನಾರಾಯಣ ಹಾಗೂ ನೀಲಿ ದಂಪತಿಗೆ ಜನಿಸಿದ ಇವರು, ತಮ್ಮ ಎರಡನೇ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡರು. ಶಾಲೆ ಮೆಟ್ಟಿಲನ್ನೂ ಏರದೇ ತಾಯಿಯ ಜೊತೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಇವರಿಗೆ ಗೋವಿಂದೇ ಗೌಡ ಎನ್ನುವವರ ಜೊತೆ ಬಾಲ್ಯವಿವಾಹ ಮಾಡಲಾಗಿತ್ತು. ಆದರೆ ದುರದೃಷ್ಟವಶಾತ್ ಚಿಕ್ಕವಯಸ್ಸಿನಲ್ಲಿಯೇ ಗಂಡನನ್ನು ಕಳೆದುಕೊಂಡು ವಿಧವೆಯಾದರು.

1.25 ಪೈಸೆ ದಿನಗೂಲಿಯಲ್ಲಿ ದುಡಿದವರು ತುಳಸಿ ಗೌಡ ಅರಣ್ಯ ಇಲಾಖೆಯಿಂದ ಬೀಜಗಳನ್ನು ಶೇಖರಣೆ ಮಾಡಿ, ಸಸಿಗಳನ್ನಾಗಿ ಮಾಡಿಕೊಡುವ ಕೆಲಸವನ್ನು ಕೇವಲ 1.25 ಪೈಸೆ ದಿನದ ಕೂಲಿಯಲ್ಲಿ ಬಹಳ ಖುಷಿಯಿಂದ ಮಾಡುತ್ತಿದ್ದರು. ಎಲ್ಲರೂ ಕಡಿಮೆ ಕೂಲಿಗೆ ಸಸಿ ಮಾಡುವ ಕೆಲಸ ಬೇಡ ಅಂದರೂ ಇವರ ಪರಿಸರ ಕಾಳಜಿಯಿಂದ ಕೆಲಸವನ್ನು ಮಾತ್ರ ನಿಲ್ಲಿಸಲಿಲ್ಲ. ಇದರೊಂದಿಗೆ ತಾನು ಬೆಳೆಸಿದ ಸಸಿಗಳನ್ನು ಹೊನ್ನಳ್ಳಿ ಭಾಗದ ಅರಣ್ಯ ಪ್ರದೇಶದಲ್ಲಿ, ಸರ್ಕಾರಿ ಕಚೇರಿ, ಶಾಲೆ, ಮನೆಗಳ ಆವರಣ, ರಸ್ತೆಗಳ ಪಕ್ಕದಲ್ಲಿ ನೆಡಲು ಪ್ರಾರಂಭಿಸಿದ್ದರು. ವರ್ಷಕ್ಕೆ ಇವರು ಸುಮಾರು 30 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುವ ಕಾರ್ಯವನ್ನು ಮಾಡುತ್ತಾ ಬಂದರು. ಈಕೆ ನೆಟ್ಟು ಪೋಷಿಸಿದ ಸಸಿಗಳು ಇಂದು ಹೆಮ್ಮರವಾಗಿ ಸಾವಿರಾರು ಜನರಿಗೆ ಗಾಳಿ, ನೆರಳನ್ನು ನೀಡುತ್ತಿವೆ. ಪರಿಸರದ ಮೇಲಿನ ಈಕೆಯ ಪ್ರೀತಿಯನ್ನು ಕಂಡು ಅಂದಿನ ಅರಣ್ಯಾಧಿಕಾರಿಯಾಗಿದ್ದ ಅ.ನಾ.ಯಲ್ಲಪ್ಪ ರೆಡ್ಡಿ ಈಕೆಗೆ ಮಾಸ್ತಿಕಟ್ಟಿ ಅರಣ್ಯವಲಯದಲ್ಲಿ ಸಸಿಗಳನ್ನು ಪೋಷಿಸುವ ಕೆಲಸವನ್ನು ಸಹ ಕೊಡಿಸಿದರು.

ಮರಗಳನ್ನು ಕಡಿದಾಗ ಅತ್ತಿದ್ದರು ತುಳಸಿಗೌಡಗೆ ಪರಿಸರ ಪ್ರೀತಿ ಎಷ್ಟಿದೆ ಎಂದರೆ, ಇವರನ್ನು ಮರಗಳ ವಿಜ್ಞಾನಿ ಎಂದೇ ಹೇಳಬಹುದು. ಯಾವ ಯಾವ ಗಿಡಗಳನ್ನು ಯಾವ ಋತುವಿನಲ್ಲಿ ನೆಡಬೇಕು, ಎಷ್ಟು ನೀರು, ಗೊಬ್ಬರ ಬೇಕು, ಯಾವ ಗಿಡಗಳು ಯಾವ ಸಂದರ್ಭದಲ್ಲಿ ಹೂವು ಹಣ್ಣು ಬಿಡುತ್ತದೆ, ಹೀಗೆ ಅರಣ್ಯದಲ್ಲಿನ ಸುಮಾರು 300ಕ್ಕೂ ಹೆಚ್ಚು ಪ್ರಭೇದದ ಮರಗಳ ಬಗ್ಗೆ ತುಳಸಿ ಅವರಿಗೆ ಮಾಹಿತಿ ಇದೆ. ಅರಣ್ಯದಲ್ಲಿನ ಪ್ರತಿ ಮರಗಳ ನಾಡಿ ಮಿಡಿತವನ್ನು ತುಳಸಿ ಹೇಳುತ್ತಾರೆ. ತನ್ನ ಸುತ್ತಮುತ್ತಲೂ ಯಾರು ಮರಗಳನ್ನು ಕಡಿಯದಂತೆ, ಮರಗಳನ್ನು ತನ್ನ ಮಕ್ಕಳಂತೆ ಸಾಕುತ್ತಾರೆ. ಕೆಲವೊಮ್ಮೆ ಅರಣ್ಯದಲ್ಲಿ ತಾನು ನೆಟ್ಟ ಮರವನ್ನು ಅರಣ್ಯ ಕಳ್ಳರು ಕಡಿದಾಗ ತುಳಸಿ ಗೌಡ ಮರವನ್ನು ಅಪ್ಪಿ ಅತ್ತ ಘಟನೆಗಳು ಸಾಕಷ್ಟಿದೆ.

ತುಳಸಿ ಮುಡಿಗೆ ಹಲವಾರು ಪ್ರಶಸ್ತಿಯ ಗರಿ ತುಳಸಿ ಗೌಡರ ಸಾಧನೆಯನ್ನು ಮೆಚ್ಚಿ ಕೇಂದ್ರ ಸರ್ಕಾರದ ‘ಇಂದಿರಾ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ’ ಲಭಿಸಿದೆ. ಅಂದಿನ ಪ್ರಧಾನಿ ವಿ.ಪಿ.ಸಿಂಗ್ ಅವರಿಂದ ಪ್ರಶಸ್ತಿ ಪಡೆಯುವ ಮೂಲಕ ಹಾಲಕ್ಕಿ ಸಮುದಾಯದ ಮಹಿಳೆ ಅಂದೇ ಇಡೀ ದೇಶದ ಗಮನ ಸೆಳೆದಿದ್ದರು. ಇನ್ನು ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು, ಸಂಘ- ಸಂಸ್ಥೆಗಳು ನೀಡುವ ಸನ್ಮಾನಗಳು, ತುಳಸಿ ಗೌಡರಿಗೆ ಲಭಿಸಿದೆ. ಆದರೂ ಇಂದಿಗೂ ಎಲೆಮರೆಯ ಕಾಯಿಯಂತೆ ತುಳಸಿ ಗೌಡ ತನ್ನ ಕಾಯಕವನ್ನು ಮುಂದುವರೆಸಿದ್ದಾರೆ. ನಿಜಕ್ಕೂ ಹಾಲಕ್ಕಿ ಅನ್ನುವ ಪುಟ್ಟ ಸಮುದಾಯದಲ್ಲಿ ಹುಟ್ಟಿ ತುಳಸಿ ಇಡೀ ರಾಷ್ಟ್ರವೇ ಮೆಚ್ಚುವಂತಹ ಕೆಲಸವನ್ನು ಮಾಡುವ ಮೂಲಕ ಸಾಧಕಿಯಾಗಿದ್ದಾರೆ.

ಇದನ್ನೂ ಓದಿ: ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿಗೆ ಸೇರಿಸಲು ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಮನವಿ

ಬರಿಗಾಲಲ್ಲೇ ತೆರಳಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಹರೇಕಳ ಹಾಜಬ್ಬ; ಅಕ್ಷರ ಸಂತನ ಸರಳತೆ ಕಂಡು ರಾಷ್ಟ್ರಪತಿಗೂ ಅಚ್ಚರಿ

ವರದಿ: ದೇವರಾಜ ನಾಯ್ಕ್

Published On - 1:59 pm, Tue, 9 November 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ