ಶಾಲಾ ಕಟ್ಟಡ ನೆಲಸಮ‌ ಮಾಡುವ ವೇಳೆ ಕಾರ್ಮಿಕನ ಸಾವು

ರಾಯಚೂರು: ಸರ್ಕಾರಿ ಹಳೇ ಶಾಲಾ ಕಟ್ಟಡ ನೆಲಸಮ‌ ಮಾಡುವ ವೇಳೆ ಕಟ್ಟಡ ಕುಸಿದು ಕಾರ್ಮಿಕ ಮೃತಪಟ್ಟಿರುವ ಘಟನೆ ಲಿಂಗಸುಗೂರು ತಾಲ್ಲೂಕಿನ ಐದನಾಳ ಗ್ರಾಮದಲ್ಲಿ ನಡೆದಿದೆ. ಕಳೆದ 10 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಹಳೆಯ ಶಾಲಾ ಕಟ್ಟಡ ಡೆಮಾಲಿಷ್ ಮಾಡುತ್ತಿದ್ದ ವೇಳೆ ಕಟ್ಟಡ ಕುಸಿದು ಈ ದುರ್ಘಟನೆ ನಡೆದಿದೆ.

ಘಟನೆಯಲ್ಲಿ ಓರ್ವ ಕಾರ್ಮಿಕ ಮೃತ ಪಟ್ಟಿದ್ದು ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಸಂಗಪ್ಪ(28) ಲೆಕ್ಕಿಹಾಳ ಸಾವಿಗೀಡಾದ ದುರ್ದೈವಿ. ವೀರಭದ್ರಪ್ಪ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಗಪ್ಪ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾಸ್ಥಳಕ್ಕೆ ಲಿಂಗಸೂಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Posts :

Category:

error: Content is protected !!