ಮೀನು ಹಿಡಿಯಲು ಹೋದ ವ್ಯಕ್ತಿ ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಹಾವನೂರು ಗ್ರಾಮದ ಬಳಿ ನಡೆದಿದೆ.
ಹಾವೇರಿ: ಮೀನು ಹಿಡಿಯಲು ಹೋದ ವ್ಯಕ್ತಿ ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಹಾವನೂರು ಗ್ರಾಮದ ಬಳಿ ನಡೆದಿದೆ.
ಹೊನ್ನಪ್ಪ ಅನ್ವೇರಿ (30) ಮೃತ ವ್ಯಕ್ತಿಯಾಗಿದ್ದು, ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹನುಮಾಪುರ ಗ್ರಾಮದ ನಿವಾಸಿಯಾಗಿರುವ ಹೊನ್ನಪ್ಪ ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಈ ವೇಳೆ ನದಿಯಲ್ಲಿ ಅಕ್ರಮ ಮರಳು ದಂಧೆಗೆ ತೆಗೆದಿರುವ ಗುಂಡಿಯಲ್ಲಿ ಮುಳುಗಿ ಹೊನ್ನಪ್ಪ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಆಗಮಿಸಿದ ಗುತ್ತಲ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಅಲ್ಲದೆ ನೀರು ಪಾಲಾದ ಹೊನ್ನಪ್ಪನ ಶವಪತ್ತೆಗಾಗಿ ಶೋಧಕಾರ್ಯ ಮುಂದುವರೆದಿದೆ.