ಸುಮಲತಾಗೆ ಕೊರೊನಾ ಸೋಂಕು, ಹೋಂ ಕ್ವಾರಂಟೈನ್‌ ಆದ ಮಂಡ್ಯ ಸಂಸದೆ

ಬೆಂಗಳೂರು: ಮಂಡ್ಯದ ಸಂಸದೆ ಸುಮಲತಾ ಅಂಬರೀಷ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಆತಂಕಕಾರಿ ವಿಷಯವನ್ನ ಅವರೇ ಬಹಿರಂಗಪಡಿಸಿದ್ದಾರೆ. ಈ ಸಂಬಂಧ ಅವರ ಪುತ್ರ ಅಭಿಷೇಕ್ ಟಿವಿ9 ಜೊತೆ ಮಾತನಾಡಿದ್ದು, ತಮ್ಮ ತಾಯಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದಿದ್ದಾರೆ.

ಈ ಸಂಬಂಧ ಫೇಸ್‌ಬುಕ್‌ ಪೋಸ್ಟ್​ ಹೀಗಿದೆ:
ಆತ್ಮೀಯರೆ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ.
-ಸುಮಲತಾ ಅಂಬರೀಷ್, ಸದಸ್ಯೆ, ಮಂಡ್ಯ ಲೋಕಸಭಾ ಕ್ಷೇತ್ರ

ಆತ್ಮೀಯರೆ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ…

Sumalatha Ambareesh यांनी वर पोस्ट केले सोमवार, ६ जुलै, २०२०

Related Tags:

Related Posts :

Category:

error: Content is protected !!