ಕರಾವಳಿಯ ಬಿಜೆಪಿ ಶಾಸಕ ಭರತ್​ ಶೆಟ್ಟಿಗೆ ಕೊರೊನಾ ಪಾಸಿಟಿವ್​

ದಕ್ಷಿಣ ಕನ್ನಡ: ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್​ ಶೆಟ್ಟಿ ಅವರಿಗೆ ಸೋಂಕು ದೃಢವಾಗಿದೆ. ಸೋಂಕಿತರ ಸಂಪರ್ಕದಿಂದ ವೈರಸ್​ ತಗಲಿರುವ ಶಂಕೆ ವ್ಯಕ್ತವಾಗಿದೆ. ಶಾಸಕರು ಸ್ವಯಂ ಪ್ರೇರಿತವಾಗಿ ತಪಾಸಣೆ ಮಾಡಿಸಿಕೊಂಡ ವೇಳೆ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಖುದ್ದು ಭರತ್​ ಶೆಟ್ಟಿಯವರೇ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮಂಗಳೂರಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಹೀಗಾಗಿ, ಇದೀಗ ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಆರೋಗ್ಯಾಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Related Tags:

Related Posts :

Category:

error: Content is protected !!