ಮೋದಿಯವರೇ ನನ್ನನ್ನು ಮುಖ್ಯಮಂತ್ರಿ ಮಾಡಲು ಮುಂದಾಗಿದ್ದರು: ಮಾಜಿ ಸಿಎಂ HDK

ತುಮಕೂರು: ಬಿಜೆಪಿಯವರು ನನ್ನನ್ನು ಸಿಎಂ ಮಾಡಲು ಮುಂದಾಗಿದ್ದರು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು ಶಿರಾದಲ್ಲಿ ಜೆಡಿಎಸ್​ ಸಭೆಯಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಈ ರೀತಿ ಹೇಳಿದ್ದಾರೆ.

ಕೇಂದ್ರದಿಂದ ಪ್ರಧಾನಿ ನರೇಂದ್ರ ಮೋದಿಯವರೇ ಆಫರ್ ಮಾಡಿದ್ದರು. 5 ವರ್ಷಗಳ ಕಾಲ ಯಾರೂ ಟಚ್ ಮಾಡಲ್ಲ ಅಂದಿದ್ದರು. ಕಾಂಗ್ರೆಸ್‌ನ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ಈಗ ದರಿದ್ರ ಸರ್ಕಾರ ಬಂದಿದೆ. ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ರಾಹುಲ್ ಗಾಂಧಿಯಿಂದಲೇ ಹಾಸನದಲ್ಲಿ ಭಾಷಣ ಮಾಡಿದ್ದರು ಎಂದು ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಪ್ರಹಾರ ಮಾಡಿದ್ದಾರೆ.

ಸಿಎಂ ಆಗುವ ಆಸೆ ಇರಲಿಲ್ಲ, ಆರೋಗ್ಯ ಸರಿ ಇಲ್ಲ ಅಂದಿದ್ದೆ:
ಕಳೆದ ವಿಧಾನಸಭೆ ಫಲಿತಾಂಶ ನೋಡಿ ರಾಜಕೀಯದಿಂದ ನಿರ್ಗಮಿಸಬೇಕು ಅಂದುಕೊಂಡೆ. ಆದ್ರೆ ಕಾಂಗ್ರೆಸ್​ನವರು ತರಾತುರಿಯಲ್ಲಿ ದೇವೇಗೌಡರಿಗೆ ಫೋನ್ ಮಾಡಿ ಕರೆದ್ರು. ದೇವೇಗೌಡರು ಕುಮಾರಸ್ವಾಮಿ ಆರೋಗ್ಯ ಸರಿ ಇಲ್ಲ. ನಿಮ್ಮಲ್ಲಿ ಯಾರಿಗಾದರೂ ಮುಖ್ಯಮಂತ್ರಿ ಮಾಡಿ ಅಂದಿದ್ರು. ಎಷ್ಟೇ ಹೇಳಿದ್ರೂ ಕೇಳದೇ ನನಗೆ ಕಾಂಗ್ರೆಸ್​ನವರು ಮುಖ್ಯಮಂತ್ರಿ ಪಟ್ಟ ಕಟ್ಟಿದ್ರು. ನನಗೆ ಮುಖ್ಯಮಂತ್ರಿ ಆಗುವ ಆಸೆ ಇರಲಿಲ್ಲ ಎಂದಿದ್ದಾರೆ.

ಕಾರ್ಯಕರ್ತರ ಸಭೆ ಮಾಡಲು ಆಗಿಲ್ಲ:
ಇನ್ನು ಕೆಲ ಕಾರಣಗಳಿಂದ ಕಾರ್ಯಕರ್ತರ ಸಭೆ ಮಾಡಲು ಆಗಿಲ್ಲ ಎಂದು ಶಿರಾ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ರು. ಕಾಂಗ್ರೆಸ್ ಮತ್ತು ಬಿಜೆಪಿ ಬಹಳ ವೇಗದಲ್ಲಿ ಹೊರಟಿದೆ. ಸಭೆ ಸಮಾರಂಭ ಮಾಡಿದೆ. ಆದರೂ ಇದರಿಂದ ಕಾರ್ಯಕರ್ತರು ಎದೆಗುಂದಬೇಕಿಲ್ಲ. ಈ ಕ್ಷೇತ್ರದಲ್ಲಿ ಕಾಡು ಗೊಲ್ಲರು ನನಗೆ ಸತ್ಕಾರ ನೀಡಿದ್ದಾರೆ. ನಾನು ಗ್ರಾಮ ವಾಸ್ತವ್ಯ ಮಾಡಿದ್ದು ಕಾಡು ಗೊಲ್ಲರ ಮನೆಯಲ್ಲಿ, ಶಿರಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದ ಮತ ನಿರ್ಣಾಯಕ ಎಂದು ಕುಮಾರಸ್ವಾಮಿ ತಿಳಿಸಿದ್ರು.

Related Tags:

Related Posts :

Category:

error: Content is protected !!