AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಆಭರಣ ಪ್ರಿಯರಿಗೆ ಹೊಸ ವರ್ಷದಂದೇ ಶಾಕ್​; ಒಮ್ಮೆಲೇ ಏರಿಕೆಯಾದ ಚಿನ್ನ, ಬೆಳ್ಳಿ ದರ!

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ.

Gold Rate: ಆಭರಣ ಪ್ರಿಯರಿಗೆ ಹೊಸ ವರ್ಷದಂದೇ ಶಾಕ್​; ಒಮ್ಮೆಲೇ ಏರಿಕೆಯಾದ ಚಿನ್ನ, ಬೆಳ್ಳಿ ದರ!
ಸಂಗ್ರಹ ಚಿತ್ರ
TV9 Web
| Edited By: |

Updated on:Jan 01, 2022 | 7:46 AM

Share

ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 01, ಶನಿವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 62,200 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,300 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,370 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,500 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,400 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,400 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,010 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,100 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,010 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,90,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,500 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 62,200 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Rate: ಆಭರಣ ಪ್ರಿಯರಿಗೆ ಸಂತೋಷದ ವಿಚಾರ; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ

Gold Rate: ಆಭರಣ ಪ್ರಿಯರಿಗೆ ಸಿಹಿ ಸುದ್ದಿ! ಚಿನ್ನದ ದರದಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ?

Published On - 7:26 am, Sat, 1 January 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು