GST Collection: ಡಿಸೆಂಬರ್ ತಿಂಗಳಲ್ಲಿ 1.29 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ

2021ನೇ ಇಸವಿಯ ಡಿಸೆಂಬರ್ ತಿಂಗಳ ಜಿಎಸ್​ಟಿ ಸಂಗ್ರಹ ರೂ. 1.29 ಲಕ್ಷ ಕೋಟಿಯಷ್ಟಾಗಿದೆ. ಅದರಲ್ಲಿ ಕೇಂದ್ರ ಹಾಗೂ ರಾಜ್ಯಗಳದೆಷ್ಟು ಎಂಬ ಮಾಹಿತಿಯು ಈ ಲೇಖನದಲ್ಲಿದೆ.

GST Collection: ಡಿಸೆಂಬರ್ ತಿಂಗಳಲ್ಲಿ 1.29 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jan 01, 2022 | 5:49 PM

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 2021ರ ಡಿಸೆಂಬರ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆದಾಯದಲ್ಲಿ 1.29 ಲಕ್ಷ ಕೋಟಿ ರೂಪಾಯಿಯಷ್ಟು ಸಂಗ್ರಹಿಸಿವೆ. ನವೆಂಬರ್‌ನಲ್ಲಿ ಸಂಗ್ರಹಿಸಲಾದ 1.31 ಲಕ್ಷ ಕೋಟಿ ರೂಪಾಯಿಗಿಂತ ಸ್ವಲ್ಪ ಕಡಿಮೆ, ಆದರೆ 2020ರ ಡಿಸೆಂಬರ್​ನಲ್ಲಿ ಸಂಗ್ರಹಿಸಿದ್ದಕ್ಕಿಂತ ಶೇ 13ರಷ್ಟು ಸುಧಾರಣೆಯಾಗಿದೆ ಎಂದು ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಅಂಕಿ- ಅಂಶಗಳು ತೋರಿಸಿವೆ. ಡಿಸೆಂಬರ್‌ಗೆ ಜಿಎಸ್‌ಟಿ ಆದಾಯ ಸಂಗ್ರಹವು 2019ರ ರಶೀದಿಗಳಿಗಿಂತ ಶೇ 26ರಷ್ಟು ಬೆಳವಣಿಗೆ ತೋರಿಸಿದೆ ಎಂದು ಸಚಿವಾಲಯ ತಿಳಿಸಿದೆ. ಅಕ್ಟೋಬರ್‌ಗೆ ಹೋಲಿಸಿದರೆ ನವೆಂಬರ್‌ನಲ್ಲಿ ಇ-ವೇ ಬಿಲ್‌ಗಳ ಸಂಖ್ಯೆಯಲ್ಲಿ ಶೇ 17ರಷ್ಟು ಕಡಿತದ ಹೊರತಾಗಿಯೂ ಡಿಸೆಂಬರ್ ಜಿಎಸ್‌ಟಿ ಸಂಗ್ರಹವು 1.3 ಲಕ್ಷ ಕೋಟಿ ರೂಪಾಯಿಗೆ ಸಮೀಪದಲ್ಲಿದೆ ಎಂದು ಸಚಿವಾಲಯ ಹೇಳಿದೆ. ಕೇಂದ್ರ ಮತ್ತು ರಾಜ್ಯ ತೆರಿಗೆ ಅಧಿಕಾರಿಗಳು ಸುಧಾರಿತ ತೆರಿಗೆ ನಿಯಮಾವಳಿ ಮತ್ತು ಉತ್ತಮ ತೆರಿಗೆ ಆಡಳಿತ ಇದಕ್ಕೆ ಕಾರಣ ಎಂದು ಸಚಿವಾಲಯ ಹೇಳಿದೆ. ಒಂದು ತಿಂಗಳ ವಹಿವಾಟಿನ ತೆರಿಗೆಯನ್ನು ನಂತರದ ತಿಂಗಳಲ್ಲಿ ಸಂಗ್ರಹಿಸಲಾಗುತ್ತದೆ.

ಪ್ರಸಕ್ತ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಸರಾಸರಿ ಮಾಸಿಕ ಒಟ್ಟು ಜಿಎಸ್‌ಟಿ ಸಂಗ್ರಹವು 1.3 ಲಕ್ಷ ಕೋಟಿ ರೂಪಾಯಿ ಆಗಿದೆ. ಮೊದಲ ಮತ್ತು ಎರಡನೇ ತ್ರೈಮಾಸಿಕದಲ್ಲಿ ಕ್ರಮವಾಗಿ 1.1 ಲಕ್ಷ ಕೋಟಿ ರೂಪಾಯಿ ಮತ್ತು 1.15 ಲಕ್ಷ ಕೋಟಿ ರೂಪಾಯಿ ಸರಾಸರಿ ಮಾಸಿಕ ಸಂಗ್ರಹ ಆಗಿತ್ತು. “ಆರ್ಥಿಕ ಚೇತರಿಕೆ, ವಂಚನೆ-ವಿರೋಧಿ ಚಟುವಟಿಕೆಗಳು, ವಿಶೇಷವಾಗಿ ನಕಲಿ ಬಿಲ್ಲರ್‌ಗಳ ವಿರುದ್ಧ ಕ್ರಮಗಳು ಜಿಎಸ್‌ಟಿ ಸಂಗ್ರಹ ಹೆಚ್ಚುವುದಕ್ಕೆ (ರಶೀದಿಗಳು) ಕೊಡುಗೆ ನೀಡುತ್ತಿವೆ. ಇನ್ವರ್ಟೆಡ್ ಸುಂಕ ರಚನೆಯನ್ನು ಸರಿಪಡಿಸಲು ಜಿಎಸ್​ಟಿ ಸಮಿತಿ ಕೈಗೊಂಡ ವಿವಿಧ ದರಗಳ ಸಕ್ರಮ ಕ್ರಮಗಳಿಂದಲೂ ಆದಾಯದಲ್ಲಿ ಸುಧಾರಣೆಯಾಗಿದೆ. ಕಳೆದ ತ್ರೈಮಾಸಿಕದಲ್ಲಿಯೂ ಆದಾಯದ ಸಕಾರಾತ್ಮಕ ಪ್ರವೃತ್ತಿ ಮುಂದುವರಿಯುವ ನಿರೀಕ್ಷೆಯಿದೆ,” ಎಂದು ಸಚಿವಾಲಯ ತಿಳಿಸಿದೆ.

ಒಟ್ಟು ಸಂಗ್ರಹದಲ್ಲಿ ಕೇಂದ್ರ ಜಿಎಸ್‌ಟಿ 22,578 ಕೋಟಿ ರುಪಾಯಿ, ರಾಜ್ಯ ಜಿಎಸ್‌ಟಿ 28,658 ಕೋಟಿ ರೂಪಾಯಿ ಮತ್ತು ಅಂತರರಾಜ್ಯ ವಹಿವಾಟು ಹಾಗೂ ಆಮದುಗಳ ಮೇಲಿನ ಇಂಟಿಗ್ರೇಟೆಡ್ ಜಿಎಸ್‌ಟಿ 69,155 ಕೋಟಿ ರೂಪಾಯಿ. ಸೆಸ್‌ 9,389 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಒಟ್ಟು ಸಂಗ್ರಹದಲ್ಲಿ ತೀರುವಳಿ ನಂತರ ಕೇಂದ್ರವು 48,146 ಕೋಟಿ ರೂಪಾಯಿ ಸಂಗ್ರಹಿಸಿದರೆ, ರಾಜ್ಯಗಳು 49,760 ಕೋಟಿ ರೂಪಾಯಿ ಸಂಗ್ರಹಿಸಿವೆ. ಅಂತರ ರಾಜ್ಯ ವಹಿವಾಟಿನ ಮೇಲೆ ಸಂಗ್ರಹಿಸಲಾದ ತೆರಿಗೆಗಳನ್ನು ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ನಿಯಮಿತವಾಗಿ ಇತ್ಯರ್ಥಪಡಿಸಲಾಗುತ್ತದೆ.

ಇದನ್ನೂ ಓದಿ: GST rate hike: ಜವಳಿ, ಉಡುಪಿನ ಮೇಲೆ ಜಿಎಸ್​ಟಿ ದರ ಹೆಚ್ಚಳ ಇಲ್ಲ; ಪಾದರಕ್ಷೆಗಳು ಆಗಲಿವೆ ದುಬಾರಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್