AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

Petrol Diesel Price Today, 03-01-2022: ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

Petrol Rate: ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಪ್ರಾತಿನಿಧಿಕ ಚಿತ್ರ
TV9 Web
| Updated By: sandhya thejappa|

Updated on: Jan 03, 2022 | 9:20 AM

Share

ದೇಶದಾದ್ಯಂತ ಈಗಾಗಲೇ ಪೆಟ್ರೋಲ್ ಬೆಲೆ (Petrol Price) ಶತಕ ಬಾರಿಸಿದೆ. ಪೆಟ್ರೋಲ್ ಬೆಲೆ ಹೆಚ್ಚಾಗುತ್ತಿದ್ದಂತೆ ಜನ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡಿದ್ದಾರೆ. ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಾಗುತ್ತಿದ್ದಂತೆ ಹಲವು ಕಡೆ ಬಸ್, ಆಟೋ ದರ ಕೂಡಾ ಹೆಚ್ಚಾಗಿದೆ. ಅದೇನೆಯಿರಲಿ ಇಂದು (ಜ.3) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ (Diesel Price) ಸ್ಥಿರವಾಗಿದ್ದು, ಯಾವುದೇ ಬದಲಾವಣೆ ಕಂಡುಬಂದಿಲ್ಲ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಅಂತ ಇಲ್ಲಿ ತಿಳಿಸಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋ ಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ

Gold Price Today: ಆಭರಣ ಖರೀದಿಸುವವರು ಇಂದಿನ ದರ ಎಷ್ಟಿದೆ ನೋಡಿ

India vs South Africa: ಎರಡನೇ ಟೆಸ್ಟ್ ಆರಂಭಕ್ಕೆ ಇದೆಯೇ ಮಳೆಯ ಕಾಟ?: ಜೋಹನ್ಸ್​​ಬರ್ಗ್​​ ವಾತಾವರಣ ಹೇಗಿದೆ?

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!