ಚೀಟಿ ಹೆಸರಲ್ಲಿ ನೂರಾರು ಮಂದಿಗೆ ಪಂಗನಾಮ, ವಂಚಕಿ ಎಸ್ಕೇಪ್​!

ಬೆಂಗಳೂರು: ಚೀಟಿ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೊಟ್ಟಿಗೆರೆಯ ಬಸವನಪುರ ಮೂಲದ ಮಂಜುಳಾ ಎಂಬುವರು ಸುಮಾರು 5 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಮಾಡಿ ಪರಾರಿಯಾಗಿದ್ದಾರೆ.

ಹಣ ಕಳೆದುಕೊಂಡವರು ಕಂಗಾಲಾಗಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಜನರು ವಂಚಕಿಯ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Related Tags:

Related Posts :

Category: