ಫ್ರೀ ಕಾಶ್ಮೀರ ಪೋಸ್ಟರ್​ ಪ್ರಕರಣ: ನಳಿನಿ ಪರ ವಕಾಲತ್ತು ವಹಿಸದಿರಲು ವಕೀಲರ ತೀರ್ಮಾನ

ಮೈಸೂರು: ದೆಹಲಿಯ ಜೆಎನ್​ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಮೈಸೂರು ವಿವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿನಿ ನಳಿನಿ ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶಿಸಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರಕರಣ ಸಂಬಂಧ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದ ನಳಿನಿ, ಕೋರ್ಟ್​ ಮುಂದೆಯೇ ರಂಪಾಟ ನಡೆಸಿದ್ದಾರೆ.

ವಕಾಲತ್ತು ವಹಿಸದಿರಲು ವಕೀಲರ ಸಂಘ ನಿರ್ಧಾರ:
ನಳಿನಿ ಮೇಲೆ ರಾಷ್ಟ್ರ ವಿರೋಧಿ ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ನಳಿನಿ ಪರ ವಕಾಲತ್ತು ವಹಿಸದಿರಲು ಮೈಸೂರು ವಕೀಲರ ಸಂಘ ನಿರ್ಧರಿಸಿದೆ. ಈ ಬಗ್ಗೆ ಸಂಘದ ಅಧ್ಯಕ್ಷ ಆನಂದ ಕುಮಾರ್‌ಗೆ ಸದಸ್ಯರು ಮನವಿ ಸಲ್ಲಿಸಿದ್ದರು. ವಕೀಲರ ಮನವಿಗೆ ಸ್ಪಂದಿಸಿದ ಜಿಲ್ಲಾ ವಕೀಲರ ಸಂಘವು ನಳಿನಿ ಪರ ವಕಾಲತ್ತು ವಹಿಸದಿರಲು ತೀರ್ಮಾನಿಸಿದೆ.

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!