Mumbai: ಮುಂಬೈನಲ್ಲಿ ಅಪಾರ್ಟ್​ಮೆಂಟ್ ಕಟ್ಟಡ ಕುಸಿತ; ಓರ್ವ ಸಾವು, 16 ಜನರಿಗೆ ಗಾಯ

ಮುಂಬೈನಲ್ಲಿ ಬುಧವಾರ ಮಧ್ಯರಾತ್ರಿ 12.15ರ ಸುಮಾರಿಗೆ ಕಟ್ಟಡ ಕುಸಿದಿದೆ. ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 16 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕನಿಷ್ಠ ಮೂರರಿಂದ ನಾಲ್ಕು ಜನರು ಅವಶೇಷಗಳಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.

Mumbai: ಮುಂಬೈನಲ್ಲಿ ಅಪಾರ್ಟ್​ಮೆಂಟ್ ಕಟ್ಟಡ ಕುಸಿತ; ಓರ್ವ ಸಾವು, 16 ಜನರಿಗೆ ಗಾಯ
ಮುಂಬೈನಲ್ಲಿ ಕಟ್ಟಡ ಕುಸಿತ
Image Credit source: ANI
TV9kannada Web Team

| Edited By: Sushma Chakre

Jun 09, 2022 | 8:43 AM

ಮುಂಬೈ: ಮುಂಬೈನ ಬಾಂದ್ರಾ (Bandra) ಭಾಗದ ಶಾಸ್ತ್ರಿ ನಗರದಲ್ಲಿ ಬುಧವಾರ ರಾತ್ರಿ ಅಪಾರ್ಟ್​ಮೆಂಟ್ ಕಟ್ಟಡ ಕುಸಿದು ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

“ಶಾಸ್ತ್ರಿ ನಗರದಲ್ಲಿನ G+2 ಮನೆ ಕುಸಿತದಲ್ಲಿ ದುರದೃಷ್ಟವಶಾತ್ ಒಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ 16 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಗಾಯಗೊಂಡವರ ವರದಿಗಳಿಗಾಗಿ ಕಾಯಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಗಳು ಇನ್ನೂ ಮುಂದುವರೆದಿದೆ, ” ಎಂದು ಬಿಎಂಸಿ ಟ್ವೀಟ್ ಮಾಡಿದೆ.

BMC ಪ್ರಕಾರ, ಕನಿಷ್ಠ ಮೂರರಿಂದ ನಾಲ್ಕು ಜನರು ಅವಶೇಷಗಳಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬಾಂದ್ರಾದ ಶಾಸ್ತ್ರಿ ನಗರದಲ್ಲಿ ಜಿ+2 ಕಟ್ಟಡ ಕುಸಿದಿದೆ. ಕೆಲವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. 3ರಿಂದ 4 ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಬಿಎಂಸಿ ಹೇಳಿದೆ.

ಬುಧವಾರ ಮಧ್ಯರಾತ್ರಿ 12.15ರ ಸುಮಾರಿಗೆ ಕಟ್ಟಡ ಕುಸಿದಿದೆ. ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 16 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡವರು ಸದ್ಯಕ್ಕೆ ಸುರಕ್ಷಿತವಾಗಿದ್ದಾರೆ. ಇವರೆಲ್ಲರೂ ಬಿಹಾರ ಮೂಲದ ಕಾರ್ಮಿಕರು ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳ ಮತ್ತು ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ಮುಂಬೈ ಪೊಲೀಸ್ ಡಿಸಿಪಿ ಮಂಜುನಾಥ್ ಸಿಂಗ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada