
ಮುಂಬೈ: ಬಟ್ಟೆ ಕಾರ್ಖಾನೆಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಹೊತ್ತಿ ಉರಿವು, ಒಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಹಾರಾಷ್ಟ್ರದ ಬೋಯಿಸಾರ್ನಲ್ಲಿ ನಡೆದಿದೆ. ಜಖರಿಯಾ ಫ್ಯಾಬ್ರಿಕ್ ಲಿಮಿಟೆಡ್ನಲ್ಲಿ ದುರ್ಘಟನೆ ನಡೆದಿದು, ರಕ್ಷಣಾ ಕಾರ್ಯಾಚರಣೆಗೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಇನ್ನೊಂದು ಅವಘಡ
ಹಾಗೇ, ಮಹಾರಾಷ್ಟ್ರದ ಬೋರಿವಾಲಿಯಲ್ಲಿರುವ ಗಂಜಾವಾಲಾದ ವಸತಿ ಕಟ್ಟಡವೊಂದರ ಏಳನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿದಿದೆ. ಈ ಅವಘಡದಲ್ಲಿ ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ದಳದ ಒಬ್ಬ ಸಿಬ್ಬಂದಿ ಗಾಯಗೊಂಡಿದ್ದಾರೆ. ಇಲ್ಲಿ ಸಾವಿನ ವರದಿಯಾಗಿಲ್ಲ. ಗಾಯಗೊಂಡ ಸಿಬ್ಬಂದಿಯನ್ನು ನಾಥು ಸರ್ಜೆರೋ ಬಾಧಕ್ ಎಂದು ಗುರುತಿಸಲಾಗಿದ್ದು, ಇವರಿಗೆ ಶೇ.12ರಷ್ಟು ಸುಟ್ಟಗಾಯಗಳಾಗಿವೆ. ಇಂದು ಮುಂಜಾನೆ 7 ಗಂಟೆ ಹೊತ್ತಿಗೆ ಇಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಅಲ್ಲಿಗೆ ಹೋಗಿ ಜನರನ್ನೆಲ್ಲ ರಕ್ಷಿಸಿದ್ದಾರೆ. ಹಾಗೇ ಬೆಂಕಿಯನ್ನೂ ನಂದಿಸಿದ್ದಾರೆ. ಪೊಲೀಸರೂ ಕೂಡ ಅಲ್ಲಿಗೆ ಹೋಗಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಇದರಿಂದ ದೊಡ್ಡ ಅನಾಹು ತಪ್ಪಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?
ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವುದಕ್ಕೆ ಥಾಯ್ಲೆಂಡ್ ದೇಶಕ್ಕೆ ಆಹ್ವಾನ ನೀಡಿದ ಸಚಿವ ಮುರುಗೇಶ್ ನಿರಾಣಿ
Published On - 9:44 am, Sat, 4 September 21