ಗೋವಾದಲ್ಲಿ ಟ್ರಕ್​ ಕಂದಕಕ್ಕೆ ಉರುಳಿ ಓರ್ವ ಸಾವು, 13 ಮಂದಿಗೆ ಗಾಯ, ತಕ್ಷಣವೇ ನೆರವಿಗೆ ಧಾವಿಸಿದ ಸಿಎಂ

|

Updated on: Mar 17, 2024 | 11:17 AM

ಗೋವಾದಲ್ಲಿ ಟ್ರಕ್​ ಒಂದು ಕಂದಕಕ್ಕೆ ಉರುಳಿ ಓರ್ವ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ. ತಕ್ಷಣವೇ ಸಿಎಂ ಪ್ರಮೋದ್ ಸಾವಂತ್ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವಾದರು.

ಗೋವಾದಲ್ಲಿ ಟ್ರಕ್​ ಕಂದಕಕ್ಕೆ ಉರುಳಿ ಓರ್ವ ಸಾವು, 13 ಮಂದಿಗೆ ಗಾಯ, ತಕ್ಷಣವೇ ನೆರವಿಗೆ ಧಾವಿಸಿದ ಸಿಎಂ
ಅಪಘಾತ
Follow us on

ಟ್ರಕ್​ವೊಂದು ಕಂದಕಕ್ಕೆ ಉರುಳಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಗೋವಾದಲ್ಲಿ ನಡೆದಿದೆ. ತಕ್ಷಣವೇ ಸಿಎಂ ಪ್ರಮೋದ್ ಸಾವಂತ್ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವಾದರು. ಆಯುರ್ವೇದ ವೈದ್ಯರಾಗಿರುವ ಸಾವಂತ್ ಅವರು ಸಂತ್ರಸ್ತರ ನಾಡಿಮಿಡಿತವನ್ನು ಪರಿಶೀಲಿಸಿದರು, ಫಲ್ ದೇಸಾಯಿ ಅವರು ಕಂದಕಕ್ಕೆ ಇಳಿದು ಅಪಘಾತಕ್ಕೀಡಾದ ವಾಹನದಿಂದ ಗಾಯಅಳುಗಳನ್ನು ಹೊರತೆಗೆಯಲು ಸಹಾಯ ಮಾಡಿದರು.

ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಟ್ರಕ್​ ತಿರುಗಿ ಕಂದಕಕ್ಕೆ ಬಿದ್ದಿತ್ತು. ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಮಕ್ಕಳು ಸೇರಿದಂತೆ 13 ಮಂದಿ ಪುರುಷರು ಮತ್ತು ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಎಂ ಸಾವಂತ್ ಮತ್ತು ಸಚಿವ ಫಲ್ ದೇಸಾಯಿ ಅವರು ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಮತ್ತು ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡರು.

ಗಾಯಾಳುಗಳನ್ನು ಟ್ರಕ್‌ನಿಂದ ಹೊರತೆಗೆಯಲಾಯಿತು ಮತ್ತು ಆಂಬ್ಯುಲೆನ್ಸ್ ಮತ್ತು ಪೊಲೀಸ್ ವಾಹನಗಳಲ್ಲಿ ಅವರನ್ನು ಪಣಜಿ ಬಳಿಯ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಿದರು.

ಮತ್ತಷ್ಟು ಓದಿ: Lahiru Thirimanne: ಭೀಕರ ರಸ್ತೆ ಅಪಘಾತ: ಶ್ರೀಲಂಕಾ ಕ್ರಿಕೆಟಿಗ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ನಾಲ್ವರ ಸಾವು
ಧಾರವಾಡ (Dharwad) ಜಿಲ್ಲೆ ಕುಂದಗೋಳ (Kundagol) ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ (Accident) ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದ ಮಣಿಕಂಠ (26), ಪವನ(23), ಚಂದನ (31) ಮತ್ತು ಬೆಂಗಳೂರಿನ ಪ್ರಭು (34) ಮೃತ ದುರ್ದೈವಿಗಳು.

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್​​​ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ.

ಇನ್ನು ಕಿಮ್ಸ್​ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್​ ಭೇಟಿ ನೀಡಿ, ಶವಗಳನ್ನು ಕಂಡು ಭಾವುಕರಾದರು. ಮತ್ತು ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅನಿರೀಕ್ಷಿತವಾಗಿ ಭೀಕರ ಅಪಘಾತ ಸಂಭವಿಸಿದೆ. ಕಾರು ಅಪಘಾತ ಸಂಭವಿಸಿದ ನಂತರ ರಸ್ತೆ ಬದಿ ನಿಂತವರ ಮೇಲೆ ಲಾರಿ ಹರಿದಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಯಾವ ರೀತಿ ಆಗಿದೆ ಅಂತ ಗೊತ್ತಾಗಿಲ್ಲ. ಮಂಜು ಇತ್ತಾ ಅಂತ ಪರಿಶೀಲನೆ ಮಾಡುತ್ತೇವೆ. ಈ ದುರ್ಘಟನೆ ಸಂಭವಿಸಬಾರದಾಗಿತ್ತು ಎಂದು ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ